ಆಧುನಿಕ ವಧಾಗಾರ ಕಾಮಗಾರಿ 2020ಕ್ಕೆ ಪೂರ್ಣ
Team Udayavani, Dec 3, 2019, 4:07 PM IST
ತುಮಕೂರು: ಮಾಂಸಹಾರಿಗಳಿಗೆ ಉತ್ಕೃಷ್ಟದ ಮಾಂಸ ನೀಡಬೇಕು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ರಾಜ್ಯದಲ್ಲೇ ಅತೀ ಹೆಚ್ಚು ಕುರಿ, ಮೇಕೆ ಸಾಕಾಣಿಕೆ ಕೇಂದ್ರವಾಗಿರುವ ಶಿರಾದಲ್ಲಿ 44.63 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ವಾಗಲಿರುವ ಆಧುನಿಕ ಕುರಿ, ಮೇಕೆ ವಧಾಗಾರದ ಕಾಮಗಾರಿ ಪ್ರಗತಿಯಲ್ಲಿದ್ದು, 2020ರ ಸೆಪ್ಟೆಂಬರ್ ವೇಳೆಗೆ ಕಾರ್ಯಾರಂಭ ಮಾಡಲು ಸಿದ್ಧತೆ ನಡೆಯುತ್ತಿದೆ.
ಜಿಲ್ಲೆಯ ಬಹುತೇಕ ತಾಲೂಕುಗಳು ಬಯಲು ಸೀಮೆ ಪ್ರದೇಶವಾಗಿದ್ದು, ಅನಾವೃಷ್ಟಿ ಹಿನ್ನೆಲೆಯಲ್ಲಿ ಕೃಷಿಗೆ ಪರ್ಯಾಯವಾಗಿ ಹೈನುಗಾರಿಕೆ ಮತ್ತು ಕುರಿ ಸಾಕಾಣಿಕೆ ಮಾಡುತ್ತಿದ್ದು, ರಾಜ್ಯದಲ್ಲಿ ಹೆಚ್ಚು ಕುರಿ, ಮೇಕೆ ಸಾಕುವ ಜಿಲ್ಲೆ ತುಮಕೂರು ಎನ್ನುವ ಹೆಗ್ಗಳಿಕೆ ಪಡೆದಿದೆ.
ರೈತರಿಗೆ ಅನುಕೂಲ: ಶಿರಾ, ಪಾವಗಡ, ಮಧುಗಿರಿ, ಚಿಕ್ಕನಾಯಕನಹಳ್ಳಿ ಸೇರಿ ಹತ್ತು ತಾಲೂಕಿನಲ್ಲಿಯೂ ಕುರಿ, ಮೇಕೆ ಸಾಕುವ ರೈತರಿದ್ದು, ಕುರಿ, ಮೇಕೆ ಸಾಕಾಣಿಕೆಯಿಂದ ವಾರ್ಷಿಕ ಆದಾಯ ವೃದ್ಧಿಯಾಗುತ್ತಿದೆ. ಕಡಿಮೆ ಖರ್ಚಿನಲ್ಲಿ ಆರ್ಥಿಕಸಬಲರಾಗಲು ರೈತರಿಗೆ ಅನುಕೂಲಕರವಾಗಿದೆ. ಕುರಿ, ಮೇಕೆ ಉತ್ಪನ್ನಗಳಾದ ಮಾಂಸ, ಚರ್ಮ, ಹಾಲು, ಉಣ್ಣೆಯ ಸಂಸ್ಕರಣೆ, ಮೌಲ್ಯವರ್ಧನೆ ಮಾರುಕಟ್ಟೆ ಅಭಿವೃದ್ಧಿಪಡಿಸಲು ನಿಗಮ ಮುಂದಾಗಿದ್ದು, ರಾಜ್ಯದಲ್ಲಿ ಶೇ.79 ಜನ ಮಾಂಸಹಾರಿಗಳಾಗಿದ್ದು, ಉತ್ಕೃಷ್ಟ ಕುರಿ, ಮೇಕೆ ಮಾಂಸನೀಡಲು ರಾಜ್ಯದಲ್ಲಿ 700 ಮೀಟ್ ಪಾರ್ಲರ್ ತೆರೆಯಲು ಉದ್ದೇಶಿಸಿದ್ದು, ಇದಕ್ಕಾಗಿ ಜಿಲ್ಲೆಯ ಶಿರಾತಾಲೂಕಿನ ತಾವರೆಕೆರೆ ಗ್ರಾಪಂ ವ್ಯಾಪ್ತಿಯ ಸರ್ವೇನಂ.14ರ, 20 ಎಕರೆ ಜಾಗ ದಲ್ಲಿ ಆಧುನಿಕ ವಧಾಗಾರ ಕಾಮಗಾರಿ ನಡೆಯುತ್ತಿದೆ.
ಕಾಮಗಾರಿ ಬಿರುಸು: ಗೃಹ ನಿರ್ಮಾಣ ಮಂಡಳಿ ಕಾಮಗಾರಿ 21 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಕೈಗೆತ್ತಿಕೊಂಡು ಭರದಿಂದ ಕಾಮಗಾರಿ ನಡೆಯುತ್ತಿದೆ. 2020ರ ಸೆಪ್ಟೆಂಬರ್‌ನಲ್ಲಿ ಮುಗಿಯಲಿದ್ದು, ಅಷ್ಟರಲ್ಲಿಅಗತ್ಯವಿರುವ ಶಿಥಿಲೀ ಕರಣ, ಸಂಗ್ರಹಣೆ, ಸಾಗಾಣಿಕೆ ಸೇರಿ ಇತರೆ ಆಧುನಿಕ ಉಪಕರಣ ಅಳವಡಿಸಲು ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ. ಶಿರಾದಲ್ಲಿ ನಿರ್ಮಾಣ ವಾಗುತ್ತಿರುವ ಕುರಿ, ಮೇಕೆವಧಾಗಾರದಲ್ಲಿ ಒಂದು ದಿನಕ್ಕೆ 1500ಕ್ಕೂ ಹೆಚ್ಚು ಕುರಿ, ಮೇಕೆ ವಧೆ ಮಾಡಿ ಮಾಂಸವನ್ನು ರಾಜ್ಯದ ವಿವಿಧ ಕಡೆಗಳಲ್ಲಿ ಸರಬರಾಜು ಮಾಡಲಾಗುತ್ತದೆ. 2 ಕೋಟಿ ರೂ. ವೆಚ್ಚದಲ್ಲಿ ಚರ್ಮ ಸಂಸ್ಕರಣಾ ಘಟಕ ಮಾಡುತ್ತಿದ್ದು, ತುಮಕೂರು ಜಿಲ್ಲೆ ಸೇರಿ ಸುತ್ತ–ಮುತ್ತ ಜಿಲ್ಲೆಗಳಲ್ಲಿ ಕುರಿ, ಮೇಕೆ ಸಾಕುವವರು ಆರ್ಥಿಕವಾಗಿ ಸಬಲರಾಗಲು ಸಹಕಾರಿ ಎನ್ನುತ್ತಾರೆ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕ ಡಾ. ಕೆ. ನಾಗಣ್ಣ.
-ಚಿ.ನಿ. ಪುರುಷೋತ್ತಮ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.