ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Team Udayavani, Dec 24, 2024, 7:50 PM IST
ಕೊರಟಗೆರೆ: ತಾಲೂಕಿನ ಸಿ.ಎನ್.ದುರ್ಗಾ ಹೋಬಳಿಯ ಜಟ್ಟಿಅಗ್ರಹಾರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2ನೇ ಅವಧಿಗೆ ನೂತನ ಅಧ್ಯಕ್ಷೆಯಾಗಿ ಗಂಗಾದೇವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಗ್ರಹಾರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ಗೋವಿಂದರಾಜು ಅವರ ರಾಜಿನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಗಿತ್ತು. ಗಂಗಾದೇವಿ ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ ಕಾರಣ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನವಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಈ ಹಿಂದೆ ಆಯ್ಕೆಯಾಗಿದ್ದ ಗೋವಿಂದರಾಜು ಮುಂದುವರೆಯಲಿದ್ದಾರೆ ಎಂದು ಚುನಾವಣಾಧಿಕಾರಿ ಸಹಕಾರಿ ಅಧಿಕಾರಿ ಗುರುರಾಜು ಘೋಷಣೆ ಮಾಡಿದರು.
ನೂತನ ಅಧ್ಯಕ್ಷೆ ಗಂಗಾದೇವಿ ಮಾತನಾಡಿ, ರಾಜ್ಯದ ಗೃಹ ಸಚಿವ ಡಾ.ಜಿ. ಪರಮೇಶ್ವರ ಹಾಗೂ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಆಶೀರ್ವಾದ ಮತ್ತು ಸಂಘದ ಎಲ್ಲಾ ನಿರ್ದೇಶಕ ಸಹಕಾರದಿಂದ ಇಂದು ನಾನು ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರ ಪಡೆದು ಸಂಘದಿಂದ ಬರುವ ಸವಲತ್ತುಗಳನ್ನು ರೈತರಿಗೆ ಹಾಗೂ ಸಾರ್ವಜನಿಕರಿಗೆ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಉಪಾಧ್ಯಕ್ಷ ಗೋವಿಂದರಾಜು ಮಾತನಾಡಿ, ಗ್ರಾಮೀಣ ಭಾಗದ ಸಣ್ಣ ರೈತರಿಗೆ ಸಹಕಾರ ಸಂಘಗಳು ಅತ್ಯಂತ ಉಪಯುಕ್ತ ಕೇಂದ್ರಗಳಾಗಿದ್ದು, ಸಹಕಾರ ಸಂಘದಿಂದ ಶೂನ್ಯ ಬಡ್ಡಿ ಸೇರಿದಂತೆ ಅನೇಕ ಯೋಜನೆಗಳನ್ನು ರಾಜ್ಯ ಸಹಕಾರಿ ಸಚಿವ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ತಂದಿದ್ದು, ಇಂತಹ ಹತ್ತು ಹಲವು ಯೋಜನೆಗಳನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು.
ನೂತನವಾಗಿ ಆಯ್ಕೆಯಾದ ಗಂಗಾದೇವಿ ಅವರಿಗೆ ನಮ್ಮ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಡಿಸಿಸಿ ಮೇಲ್ವಿಚಾರಕ ತಿಮ್ಮರಾಜು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗ್ರಾ.ಪಂ. ಉಪಾದ್ಯಕ್ಷ ಹಾಗೂ ಸಂಘದ ನಿರ್ದೇಶಕ ಮಂಜುನಾಥ್, ನಿರ್ದೇಶಕರಾದ ಸಣ್ಣಕಾಮಯ್ಯ, ಭೀಮಣ್ಣ, ಪುಟ್ಟರಾಜು, ಮಂಜುನಾಥ್, ಶಿವಶಂಕರ್, ವೆಂಕಟೇಶ್, ವನಿತ, ಸಿದ್ದಗಂಗಮ್ಮ, ಸುನೀತ, ತಿಮ್ಮರಾಜು, ಕಾರ್ಯದರ್ಶಿ ರಮೇಶ್, ಮುಖಂಡರಾದ ಬಸವರಾಜು, ಶಿವಣ್ಣ, ವೀರಕ್ಯಾತಯ್ಯ, ನಾಗರಾಜು, ಮಧು, ಮಂಜುನಾಥ್. ವೆಂಕಟೇಶ್, ಚಲುವರಾಜು, ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.