ಜಿಲ್ಲೆಯ ಅಭಿವೃದ್ಧಿಗೆ ತಜ್ಞರ ಸಲಹೆ ಪಡೆಯಿರಿ

Team Udayavani, Oct 10, 2017, 4:21 PM IST

3_15.jpg

ತುಮಕೂರು: ಜಿಲ್ಲೆಯು ಸೇರಿದಂತೆ ರಾಜ್ಯವನ್ನು ಸರ್ವಾಂಗೀಣವಾಗಿ ಅಭಿವೃದ್ಧಿಪಡಿಸಲು ವಿಷನ್‌ 2025 ಡಾಕ್ಯುಮೆಂಟ್‌ ತಯಾರಿಸಲು ಕ್ಷೇತ್ರ ತಜ್ಞರು, ಸಾರ್ವಜನಿಕ ಕ್ಷೇತ್ರದಲ್ಲಿ ಉತ್ತಮ ಅನುಭವ ಹೊಂದಿದವರು, ವಿವಿಧ ಕ್ಷೇತ್ರಗಳ ಪ್ರಗತಿ ಚಿಂತಕರು, ವಿಜ್ಞಾನಿಗಳು ಸೇರಿದಂತೆ ಹಲವರ ಅಭಿಪ್ರಾಯ ಸಂಗ್ರಹಿಸುವುದು ಅತಿಮುಖ್ಯ. ಎಂದು ಪ್ರಭಾರ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಜೆ.ಶಾಂತಾರಾಮ ಅಧಿಕಾರಿಗಳಿಗೆ ಸೂಚಿಸಿದರು.

ಅಭಿವೃದ್ಧಿಗೆ ಸಿದ್ಧತೆ:  ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ವಿಷನ್‌ 2025 ಡಾಕ್ಯುಮೆಂಟ್‌ ತಯಾರಿಸಲು ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಈಗಾಗಲೇ ಈ ಸಂಬಧ ರಚಿಸಿರುವ 6 ಕ್ಲಸ್ಟರ್‌ಗಳ ನೋಡಲ್‌ ಅಧಿಕಾರಿಗಳು ಅ.16ರಂದು ಜಿಲ್ಲೆಗೆ ಆಗಮಿಸಲಿದ್ದು ರಾಜ್ಯಮಟ್ಟದ ಅನುಷ್ಠಾನ ಸಮಿತಿ ಮುಂದೆ ಯಾವ ರೀತಿಯಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ರೂಪುರೇಷೆಯನ್ನು ಪ್ರಸ್ತುತಪಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬುದರ ಬಗ್ಗೆ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.

ಪೂರ್ವಭಾವಿ ಸಭೆ: ಮುಂದಿನ ಏಳು ವರ್ಷಗಳ ಅವಧಿಯಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿರಿಸಿಕೊಂಡು ರಾಜ್ಯ ಸರ್ಕಾರವು ವಿಷನ್‌ 2025 ಡಾಕ್ಯುಮೆಂಟ್‌ ಎಂಬ ಹೆಸರಿನಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಮತ್ತು ಅನುಷ್ಠಾನ ಯೋಜನೆಗಳ ಸಿದ್ಧಪಡಿಸುವಿಕೆ ಸಂಬಂಧ ಕ್ಲಸ್ಟರ್‌ ಅಧಿಕಾರಿಗಳ‌ ಪೂರ್ವಭಾವಿ ಸಭೆ ನಡೆಯಲಿದೆ.

ಸಭೆಯಲ್ಲಿ ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ಕ್ಷೇತ್ರ, ಮೂಲಸೌಕರ್ಯಗಳು, ಉದ್ಯೋಗ ಮತ್ತು ಕೌಶಲ್ಯ, ಕೈಗಾರಿಕಾಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಆರೋಗ್ಯ ಮತ್ತು ಪೊಲೀಸ್‌, ಶಿಕ್ಷಣ ಗ್ರಾಮೀಣಾಭಿವೃದ್ಧಿ, ಮಾಹಿತಿ ಮತ್ತು ತಂತ್ರಜ್ಞಾನ, ಸೇವೆಗಳು, ಆಡಳಿತ, ಕಾನೂನು ಮತ್ತು ಸುವ್ಯವಸ್ಥೆ ಎಂಬುದಾಗಿ ಕ್ಲಸ್ಟರ್‌ಗಳನ್ನು ವಿಂಗಡಿಸಿದ್ದು, ಈ ಕ್ಲಸ್ಟರ್‌ನ ನೋಡಲ್‌ ಅಧಿಕಾರಿಗಳು ಅ.12ರೊಳಗೆ ಕರಡು ಪ್ರತಿ ಸಿದ್ದಪಡಿಸಿ, ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಯೋಜನೆ ಮಾಹಿತಿ ನೀಡಿ: ಅ.16 ರಂದು ನಡೆಯುವ ಸಭೆಯಲ್ಲಿ ಪ್ರತಿ ಕ್ಲಸ್ಟರ್‌ಗೆ 15 ನಿಮಿಷಗಳ ಕಾಲಾವಕಾಶ ಸಿಗಲಿದ್ದು, ಆ 15 ನಿಮಿಷದಲ್ಲಿಯೇ ಆ ಕ್ಷೇತ್ರದ ಕನಸಿನ ಅಭಿವೃದ್ಧಿಯ ಬಗ್ಗೆ ಪ್ರಸ್ತುತಪಡಿಸಬೇಕು ಎಂದು ಹೇಳಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿ.ಅನಿತಾ, ಪೊ›ಬೇಷನರಿ ಐಎಎಸ್‌ ಅಧಿಕಾರಿ ಪ್ರೀತಿ ಗೆಹಲೋಟ್‌, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Chamarajanagara: A third-grade girl passed away after collapsing in class.

Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು

Bumrah’s injury worries Team India: Out of England series

Team India; ಬುಮ್ರಾ ಗಾಯದಿಂದ ಟೀಂ ಇಂಡಿಯಾಗೆ ಆತಂಕ: ಪ್ರಮುಖ ಸರಣಿಯಿಂದ ಔಟ್

Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು

Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಸಸ್ಪೆಂಡ್

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು

6

Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ

2-kunigal

Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

15(1

Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.