ಒಗ್ಗಟ್ಟಾಗಿ ಕೋವಿಡ್ 19 ಸೋಂಕು ತೊಲಗಿಸಿ

Team Udayavani, Apr 19, 2020, 4:57 PM IST

tk-tdy-1

ತುಮಕೂರು: ನಮ್ಮ ಭಾರತ ದೇಶದಲ್ಲಿ ಈಗ ವ್ಯಾಪಿಸಿರುವ ಕೋವಿಡ್ 19 ಮಹಾಮಾರಿಯನ್ನು ಎಲ್ಲರೂ ಒಗ್ಗಟ್ಟಾಗಿ ಜಾತ್ಯತೀತವಾಗಿ, ಪಕ್ಷಾತೀತವಾಗಿ, ಧರ್ಮಾತೀತವಾಗಿ ಓಡಿಸ ಬೇಕಾಗಿದೆ ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್‌ ಹೇಳಿದರು.

ಬಿಜೆಪಿ ರೈತ ಮೋರ್ಚಾ ದಿಂದ ರೈತರಿಂದ ಖರೀದಿ ಮಾಡಿದ ತರಕಾರಿ ಮತ್ತು ಹಣ್ಣು ಗಳನ್ನು ಶೆಟ್ಟಿಹಳ್ಳಿಯ ಬಡಾವಣೆಗಳ ನಾಗರಿಕರಿಗೆ ಉಚಿತವಾಗಿ ವಿತರಣೆ ಮಾಡುವ ಕಾರಕ್ಕೆ ಚಾಲನೆ ನೀಡಿ ಮಾತನಾಡಿದರು. ಇಂತಹ ಸಂಕಷ್ಟವನ್ನು ನಾವು ಎದುರಿಸ ಬೇಕಾಗಿದೆ. ಈ ಮಹಾಮಾರಿ ಕೋವಿಡ್ 19 ವನ್ನು ಓಡಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಾಗೂ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಅನೇಕ ದಿಟ್ಟ ಹೆಜ್ಜೆಯ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಿಯಮಗಳನ್ನು ನಾವೆಲ್ಲಾ ಪಾಲಿಸುವ ಮೂಲಕ ಕೊರೊನಾ ಮುಕ್ತ ಭಾರತವನ್ನಾಗಿ ಮಾಡಬೇಕೆಂದು ಮನವಿ ಮಾಡಿದರು.

ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಎಸ್‌.ಶಿವಪ್ರಸಾದ್‌ ಮಾತನಾಡಿ, ಕೋವಿಡ್ 19 ವೈರಸ್‌ ಹರಡುವ ಭೀತಿಯಿಂದ ಲಾಕ್‌ಡೌನ್‌ ಘೋಷಣೆಯಾಗಿದ್ದು, ಇದರಿಂದ ಅನೇಕ ರೈತರು ತಾವು ಬೆಳೆದಿರುವ ತರಕಾರಿ, ಹಣ್ಣು ಹಂಪಲುಗಳನ್ನು ಮಾರಾಟ ಮಾಡಲು ಕೆಲವು ಕಡೆ ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು ನೇರವಾಗಿ ರೈತರಿಂದ ತರಕಾರಿ ಮತ್ತು ಹಣ್ಣು ಹಂಪಲುಗಳನ್ನು ಖರೀದಿ ಮಾಡಿ ಸಾರ್ವಜನಿಕರಿಗೆ ಉಚಿತವಾಗಿ ವಿತರಣೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದರು.

ಬಿಜೆಪಿ ರೈತ ಮೋರ್ಚಾ ವತಿಯಿಂದ ಕಳೆದ 10 ದಿನಗಳಿಂದ ಸಹಾಯವಾಣಿ ಮೂಲಕ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿರುವ ರೈತರ ಕೃಷಿ ಚಟುವಟಿಕೆ, ಉತ್ಪಾದನಾ ವಸ್ತುಗಳ ಮಾರಾಟದ ಸಮಸ್ಯೆ, ಪರಿಕರಗಳ ಸಮಸ್ಯೆಗೆ ಜಿಲ್ಲಾ ರೈತ ಮೋರ್ಚಾ ಸ್ಪಂದಿಸುವ ಕೆಲಸ ಮಾಡುತ್ತಿದೆ. ಅದೇರೀತಿ ಇಂದು ಅನೇಕರು ಪಕ್ಷಾತೀತವಾಗಿ, ಜಾತ್ಯತೀತವಾಗಿ ಜನರಿಗೆ ಅವಶ್ಯಕತೆ ಗಳನ್ನು ತೀರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

ಬಿಜೆಪಿ ರೈತ ಮೋರ್ಚಾ ಕೂಡಾ ಕೆಲವು ಕಡೆಗಳಿಂದ ಟೊಮೊಟೋ, ಈರುಳ್ಳಿ ಇನ್ನಿತರೆ ತರಕಾರಿಗಳನ್ನು ದಾನಿಗಳ ಸಹಾಯದಿಂದ ರೈತರಿಂದ ಖರೀದಿ ಮಾಡಿ ಸಾರ್ವಜನಿಕರಿಗೆ ಉಚಿತವಾಗಿ ವಿತರಿಸುವ ಕೆಲಸ ಮಾಡುತ್ತಿದೆ ಎಂದರು.

ಸಿದ್ಧಗಂಗಾ ಆಸ್ಪತ್ರೆಯ ನಿರ್ದೇಶಕ ಡಾ.ಪರಮೇಶ್‌, ಬಿಜೆಪಿ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ ತರಕಾರಿ ಮಹೇಶ್‌ ರೈತಮೋರ್ಚಾ ಜಿಲ್ಲಾಧ್ಯಕ್ಷ ಸ್ನೇಕ್‌ ನಂದೀಶ್‌, ನಾಗರಾಜು, ಮುಖಂಡರಾದ ಸಂದೀಪ್‌, ಜಗದೀಶ್‌, ವಿಕಾಸ್‌, ಗುರುಪ್ರಸಾದ್‌, ಕುಮಾರ್‌, ರವೀಶ್‌ ಇದ್ದರು.

ಟಾಪ್ ನ್ಯೂಸ್

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

12-sagara

Sagara ಉಪ ಅರಣ್ಯ ಸಂಕ್ಷಣಾಧಿಕಾರಿಗಳ ವಿರುದ್ಧ ಉಗ್ರ ಪ್ರತಿಭಟನೆ;ರತ್ನಾಕರ ಹೊನಗೋಡು ಎಚ್ಚರಿಕೆ

7

Uppunda ಜಾತ್ರೆ ಸಂಪನ್ನ: ಓಕುಳಿಯಾಟ, ತೆಪ್ಪೋತ್ಸವ

6

Ajekar: ಎಣ್ಣೆಹೊಳೆ ಏತ ನೀರಾವರಿ ಪವರ್‌ ಕಟ್‌!

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

11-sagara

Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.