ಸೇವೆ ಮಾಡಲು ಅವಕಾಶ ಕಲ್ಪಿಸಿ ಕೊಡಿ
Team Udayavani, Jul 18, 2020, 9:39 AM IST
ತುಮಕೂರು: ಮುಂಬರುವ ದಿನಗಳಲ್ಲಿ ನಡೆಯಲಿರುವ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಪಕ್ಷದ ಟಿಕೆಟ್‌ಗೆ ನಾನು ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಬಿಜೆಪಿ ಮುಖಂಡ ಶ್ರೀನಿವಾಸ್ ತಿಳಿಸಿದರು.
ನಗರದಲ್ಲಿ ನಡೆಯುತ್ತಿರುವ ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ ಕೇಂದ್ರಕ್ಕೆ ಭೇಟಿ ನೀಡಿ ಮೌಲ್ಯಮಾಪನ ಕಾರ್ಯದಲ್ಲಿ ನಿರತರಾಗಿರುವ ಶಿಕ್ಷಕರಿಗೆ ಮಾಸ್ಕ್ ವಿತರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಮತದಾರರಿಗೆ ಮನವಿ ಮಾಡಿದ ಅವರು, ಒಮ್ಮೆ ಅವಕಾಶ ನೀಡಿದರೆ ಖಂಡಿತವಾಗಿಯೂ ನೊಂದ ಪದವೀಧರರು, ಶಿಕ್ಷಕರಿಗೆ ನೂರಕ್ಕೆ ನೂರರಷ್ಟು ನ್ಯಾಯ ದೊರಕಿಸಲು ಶ್ರಮಿಸುತ್ತೇನೆ ಎಂದರು.
ತಾವು ಈಗಾಗಲೇ ಬಿಜೆಪಿ ಹಿಂದುಳಿದ ವರ್ಗಗಳ ಘಟದ ಉಪಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದೇನೆ. ಹಾಗಾಗಿ ಈ ಬಾರಿ ಈ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲು ಬಯಕೆ ಹೊಂದಿದ್ದೇನೆ. ಆದ್ದರಿಂದ ಕಳೆದ 6 ತಿಂಗಳಿನಿಂದ 5 ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಾ ಸುಮಾರು 40 ಸಾವಿರಕ್ಕೂ ಅಧಿಕ ಪದವೀಧರರನ್ನು ಮತಪಟ್ಟಿಗೆ ನೋಂದಾಯಿಸುವ ಕೆಲಸ ಮಾಡಿದ್ದೇನೆ. ತಾವು ಸಹ ವಿದ್ಯಾಸಂಸ್ಥೆ ನಡೆಸುತ್ತಿದ್ದು ಶಿಕ್ಷಕರ ಸಮಸ್ಯೆಗಳ ಅರಿವಿದೆ. ಪದವೀಧರ ನಿರುದ್ಯೋಗಿ ಗಳಿಗೆ ಉದ್ಯೋಗ ಕಲ್ಪಿಸಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು
Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.