ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ರೂಪಿಸುವ ಶಿಕ್ಷಣ ನೀಡಿ
Team Udayavani, Feb 23, 2020, 3:00 AM IST
ಮಧುಗಿರಿ: ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ಎಂದಿಗೂ ನಾಡು-ನುಡಿಯ ವಿರುದ್ಧ ಧ್ವನಿ ಎತ್ತದ ನಿಜವಾದ ದೇಶಭಕ್ತರು. ಇವರಿಂದಲೇ ದೇಶಪ್ರೇಮ ಇಂದಿಗೂ ಪ್ರಕಾಶಿಸುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅಭಿಪ್ರಾಯಪಟ್ಟರು. ತಾಲೂಕಿನ ಕಸಬಾ ಸಿದ್ದಾಪುರದ ಸರ್ಕಾರಿ ಪ್ರಾಥಮಿಕ ಶಾಲೆ ಶತಮಾನೋತ್ಸವ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ನೂತನ ಕಟ್ಟಡ ಉದ್ಘಾಟನೆ, ಹಳೆಯ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಶಾಲೆಗಳ ಅಭಿವೃದ್ಧಿಗೆ ಅಗತ್ಯ ಕ್ರಮ: ಮಧುಗಿರಿಯಲ್ಲಿ 30 ಶಾಲೆಗಳು ಶತಮಾನೋತ್ಸವ ಆಚರಿಸುತ್ತಿವೆ. ಸರ್ಕಾರಿ ಶಾಲೆಗಳು ಖಾಸಗಿ ಸಂಸ್ಥೆಗಳಿಗೆ ಯಾವುದಕ್ಕೂ ಕಡಿಮೆಯಿಲ್ಲದೆ ಉತ್ತಮ ಶಿಕ್ಷಣ ನೀಡುತ್ತಿವೆ. ಇದಕ್ಕೆ ಶಿಕ್ಷಕರೇ ಮುಖ್ಯ ಕಾರಣ. ಮಕ್ಕಳಿಗೆ ಒತ್ತಡದಿಂದ ಶಿಕ್ಷಣ ನೀಡಬಾರದು. ಮಕ್ಕಳಲ್ಲಿ ಯಾವುದೇ ಕೀಳರಿಮೆ ಮೂಡಿಸದೆ ವ್ಯಕ್ತಿತ್ವ ರೂಪಿಸುವ ಶಿಕ್ಷಣ ನೀಡಬೇಕು. ನಾನು ಶಿಕ್ಷಣ ಸಚಿವನಾದ ಮೇಲೆ ಪಾವಗಡ, ಚಾಮರಾಜನಗರದ ಗೋಫಿನಾಥಂ, ಹನೂರು ಶಾಲೆಗಳಲ್ಲಿ ವಾಸ್ತವ್ಯ ಮಾಡಿದ್ದು, ಮೂಲಸೌಕರ್ಯ ಕಲ್ಪಿಸಿದ್ದೇನೆ.
ರಾಜ್ಯದಲ್ಲಿ 53 ಸಾವಿರ ಶಾಲೆಗಳಿದ್ದು, ಎಲ್ಲವನ್ನೂ ಮಾಧ್ಯಮಗಳು ನಕಾರಾತ್ಮಕವಾಗಿ ಬಿಂಬಿಸುತ್ತಿದೆ. ಸ್ವಲ್ಪ ಅನುಷ್ಠಾನಗೊಂಡ ಕಾರ್ಯವನ್ನೂ ಬಿತ್ತರಿಸಬೇಕು. ಮಧುಗಿರಿಯ ಎಲ್ಲ ಸರ್ಕಾರಿ ಶಾಲೆಗಳ ಬಗ್ಗೆ ಅರಿವಿದ್ದು, ಶಾಸಕರ ಮನವಿಯಂತೆ ಎಲ್ಲ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ ಸಚಿವರು, ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡ ಪಟ್ಟಣದ ಫಣೀಂದ್ರನಾಥ್ ಹಾಗೂ ಇಂದ್ರಮ್ಮ ಶಿಕ್ಷಕ ದಂಪತಿಗೆ ಸನ್ಮಾನಿಸಿದರು.
ನೆರವು ನೀಡಿ: ಅಧ್ಯಕ್ಷತೆ ವಹಿಸಿದ್ದ ಶಾಸಕ ಎಂ.ವಿ.ವೀರಭದ್ರಯ್ಯ ಮಾತನಾಡಿ, ಶಿಕ್ಷಣ ಉತ್ತಮ ನಾಗರಿಕ ಸಮಾಜ ನಿರ್ಮಿಸಲು ಕಾರಣವಾಗಿದೆ. ಬದುಕಿನಲ್ಲಿ ಯಾವುದೇ ಶಕ್ತಿ ಕೈಬಿಟ್ಟರೂ ಶಿಕ್ಷಣ ಕೈಹಿಡಿಯಲಿದೆ. ಹಾಗಾಗಿ ಮೌಲ್ಯಯುತ ಹಾಗೂ ಸಂಸ್ಕಾರಯುತ ಶಿಕ್ಷಣ ಮಕ್ಕಳಿಗೆ ಕೊಡಿಸುವುದರ ಮೂಲಕ ಸದೃಢ ದೇಶ ಕಟ್ಟಲು ಪೋಷಕರು ಮಕ್ಕಳಿಗೆ ದಾರಿ ದೀಪವಾಗಬೇಕು.
ಈ ಜವಾಬ್ದಾರಿ ಶಿಕ್ಷಕರಿಗೂ ಹೆಚ್ಚಿದ್ದು, ಶಾಲೆಗಳಲ್ಲಿ ಉತ್ತಮ ಕಲಿಕಾ ವಾತಾವರಣ ನಿರ್ಮಿಸಬೇಕು. ಸರ್ಕಾರ ಶಿಕ್ಷಣಕ್ಕೆ ಅಗತ್ಯ ಸೌಕರ್ಯ ಕಲ್ಪಿಸಿದ್ದು, ಎಲ್ಲ ನೆರವನ್ನೂ ನೀಡಿದೆ. ತಾಲೂಕಿನಲ್ಲಿ 150ಕ್ಕೂ ಹೆಚ್ಚು ಶಾಲಾ ಕಟ್ಟಡಗಳ ಸ್ಥಿತಿ ಗಂಭೀರವಾಗಿದೆ. ಸಚಿವರು ಈ ಬಗ್ಗೆ ಗಮನಹರಿಸಿ ನೆರವು ನೀಡಬೇಕು ಎಂದು ಮನವಿ ಮಾಡಿದರು. ಶಾಲಾ ಕೊಠಡಿ ನಿರ್ಮಿಸಿಕೊಟ್ಟ ಶಾಸಕರಿಗೆ ಗ್ರಾಮಸ್ಥರು ಬೆಳ್ಳಿ ಗದೆ ನೀಡಿ ಸನ್ಮಾನಿಸಿದರು.
ಮುಖ್ಯಶಿಕ್ಷಕಿ ಕಾಂತಮ್ಮ ಶಾಲೆಯ ಅಭಿವೃದ್ಧಿ ಹಾಗೂ ಇತರೆ ವರದಿ ಮಂಡಿಸಿದರು. ಮುಖಂಡ ಲಕ್ಷ್ಮಿನಾರಾಯಣ್ ಗ್ರಾಮದ ಶಾಲೆಗಾಗಿ ಶೃಂಗಾರವನದ ಜಾಗ ಬಿಡಿಸಿಕೊಟ್ಟರೆ, ಮಹಾತ್ಮ ಟ್ರಸ್ಟ್‌ನಿಂದ ಸುಭದ್ರ ಕಟ್ಟಡ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಳೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ತಾಪಂ ಅಧ್ಯಕ್ಷೆ ಇಂದಿರಾ, ಡಿಡಿಪಿಐ ರೇವಣ್ಣ ಸಿದ್ದಯ್ಯ, ತಹಶೀಲ್ದಾರ್ ನಂದೀಶ್, ಡಿವೈಪಿಸಿ ರಾಜಕುಮಾರ್, ಬಿಇಒ ರಂಗಪ್ಪ, ಬಿಆರ್‌ಸಿ ಆನಂದ್, ಡಯಟ್ ಪ್ರಾಂಶುಪಾಲ ರಾಮಕೃಷ್ಣಯ್ಯ, ಇಒ ದೊಡ್ಡಸಿದ್ದಯ್ಯ, ಸದಸ್ಯ ರಾಮಣ್ಣ, ಗ್ರಾಪಂ ಅಧ್ಯಕ್ಷೆ ಮಂಜಮ್ಮ, ಪುರಸಭೆ ಸದಸ್ಯ ಎಂ.ಆರ್.ಜಗಣ್ಣ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೆಂಕಟೇಶ್, ಖಜಾಂಚಿ ಚಿಕ್ಕರಂಗಯ್ಯ, ಪಿಡಿಓ ಗೌಡಯ್ಯ, ಮುಖಂಡರಾದ ಡಾ.ಶ್ರೀನಿವಾಸಮೂರ್ತಿ, ಲಕ್ಷ್ಮೀನಾರಾಯಣ್, ರಂಗಶಾಮಯ್ಯ, ರವೀಶಾರಾಧ್ಯ, ಚಿತ್ರನಟ ಕಲ್ಯಾಣ್, ಸಾವಿರಾರು ಗ್ರಾಮಸ್ಥರು ಇದ್ದರು.
ಪೋಷಕರು ಸರ್ಕಾರಿ ಶಾಲೆ ಮುಂದೆ ಸಾಲು ನಿಲ್ಲುವಂತೆ ಮಾಡ್ತೇನೆ: ಮುಂದಿನ ದಿನಗಳಲ್ಲಿ ಪೋಷಕರು ಮಕ್ಕಳನ್ನು ದಾಖಲಿಸಲು ಸರ್ಕಾರಿ ಶಾಲೆ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವಂತ ಅಮೂಲ್ಯ ಬದಲಾವಣೆ ತರಲು ಶ್ರಮಿಸುತ್ತೇನೆ. ಪೋಷಕರು ದುಡಿಮೆಯ ಶೇ.40 ಹಣ ಶಿಕ್ಷಣಕ್ಕೆ ವ್ಯಯಿಸುತ್ತಿದ್ದಾರೆ. ಇದನ್ನು ತಪ್ಪಿಸಿ ಸರ್ಕಾರಿ ಶಾಲೆಯಲ್ಲೇ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಎಲ್ಲ ಅಗತ್ಯ ತಯಾರಿ ನಡೆಯುತ್ತಿದೆ.
ಈಗಾಗಲೇ ಎಲ್‌ಕೆಜಿ ಹಾಗೂ ಯುಕೆಜಿ ತರಗತಿ ಸ್ಥಾಪಿಸಿದ್ದು, ಆಸಕ್ತ ಶಿಕ್ಷಕರು ಮುಂದೆ ಬಂದರೆ ಇಲಾಖೆಯಿಂದ ಎಲ್ಲ ಸಹಕಾರ ನೀಡಲಾಗುವುದು. ನನ್ನ ತಾಯಿ ಸರ್ಕಾರಿ ಶಿಕ್ಷಕಿಯಾಗಿ 30 ವರ್ಷ ಸೇವೆ ಸಲ್ಲಿಸಿದ್ದು, ಇಲಾಖೆ ಋಣ ನನ್ನ ಮೇಲಿದೆ. ಇಂತಹ ಪುಣ್ಯದ ಕಾರ್ಯ ಮಾಡಲು ಅವಕಾಶ ಮಾಡಿಕೊಟ್ಟ ಸಿಎಂಗೆ ಅಭಿನಂದಿಸುವುದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ
Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI: ಶ್ರೀಲಂಕಾ ಬ್ಯಾಟಿಂಗ್ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kundapura: ಗುಲ್ವಾಡಿ; ಗಾಯಾಳು ಸಾವು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.