ಪುಡಿಗಾಸು ನೀಡಿ ಭೂ ಸ್ವಾಧೀನಕ್ಕೆ ಕಿಡಿ
Team Udayavani, Mar 12, 2019, 7:43 AM IST
ತುಮಕೂರು: ಜಿಲ್ಲೆಯ ರೈತರು ಸತತ ಬರಗಾಲದಿಂದ ಸಂಕಷ್ಟ ಅನುಭವಿಸುತ್ತಿರುವಾಗ ನೂರಾರು ವರ್ಷಗಳಿಂದ ತೆಂಗು ಬೆಳೆ ನಂಬಿ ಬದುಕಿರುವ ತೆಂಗು ಬೆಳೆಗಾರರ ಬದುಕು ಸಂಕಷ್ಟದಲ್ಲಿದೆ. ಇಂಥ ಸಂದರ್ಭದಲ್ಲಿ ರೈತರ ಜಮೀನುಗಳಿಗೆ ಪುಡಿಗಾಸು ನೀಡಿ ಭೂಸ್ವಾಧೀನ ಪಡಿಸಿಕೊಳ್ಳುತ್ತಿರುವುದನ್ನು ವಿರೋಧಿಸಿ ಸೋಮವಾರ ನೂರಾರು ರೈತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಟೌನ್‌ಹಾಲ್ ಮುಂಭಾಗದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಸಮಾವೇಶಗೊಂಡ ನೂರಾರು ರೈತರು ಕೇಂದ್ರ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ, ರೈತರಿಗೆ ವಂಚನೆ ಮಾಡುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕೆಲಹೊತ್ತು ಧರಣಿ ಮಾಡಿದರು.
ಒಣಗುತ್ತಿರುವ ತೆಂಗಿನ ಮರಗಳು: ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಕಲ್ಪತರು ನಾಡು ಎಂದು ಪ್ರಸಿದ್ಧವಾದ ತುಮಕೂರು ತೀವ್ರ ಬರಕ್ಕೆ ತುತ್ತಾಗಿದ್ದು, ಜಿಲ್ಲೆಯಲ್ಲಿ ತೆಂಗಿನ ಮರಗಳು ಒಣಗುತ್ತಿವೆ. ಈಗಾಗಲೇ ಮೂರು ಲಕ್ಷಕ್ಕೂ ಅಧಿಕ ತೆಂಗಿನ ಮರಗಳು ಒಣಗಿದ್ದು, ರೈತರು ಬೀದಿಗೆ ಬಂದಿದ್ದಾರೆ. ಭೂಸ್ವಾಧೀನ ಪಡಿಸಿಕೊಂಡಿರುವ ರೈತರ ಭೂಮಿಗೆ ಕಡಿಮೆ ಬೆಲೆ ನೀಡುವುದನ್ನು ವಿರೋಧಿಸುವುದಾಗಿ ತಿಳಿಸಿದರು.
ಸಮಗ್ರ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜಿಲ್ಲೆಗೆ ನೀರು ಒದೊಗಿಸಬೇಕಾಗಿರುವ ಹೇಮಾವತಿ, ತುಂಗಾಭದ್ರಾ ಮತ್ತು ಎತ್ತಿನಹೊಳೆ ಯೋಜನೆಯನ್ನು ತುರ್ತಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯ ರೈತರ ಹಿತವನ್ನು ಕಾಯಲು ಸಮಗ್ರ ನೀರಾವರಿ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.
ಸಹಿಸುವುದಿಲ್ಲ: ಜಿಲ್ಲೆಯಲ್ಲಿ ಸರ್ಕಾರ ಜಾರಿಗೆ ತಂದಿರುವ ನೀರಾವರಿ ಯೋಜನೆಗಳನ್ನು ಜಾರಿ ಮಾಡುತ್ತಿಲ್ಲ, ನೀರಾವರಿ ತ್ವರಿತಗೊಂಡರೆ ರೈತರ ಜೀವನ ಮಟ್ಟ ಸುಧಾರಿಸಲಿದೆ. ತೆಂಗಿನ ಮರಗಳು ಚೇತರಿಸಿಕೊಳ್ಳುತ್ತವೆ. ಅಧಿಕಾರಿಗಳು ಚುನಾವಣೆ ನೆಪವೊಡ್ಡಿ ಬರದ ಸಮಸ್ಯೆಗಳಿಗೆ ಸ್ಪಂದಿಸದೇ ಇದ್ದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ನಾಲೆ ಅಗಲೀಕರಣಕ್ಕೆ ನಿರ್ಲಕ್ಷ್ಯ: ರಾಜ್ಯ ಸಂಘಟನಾ ಕಾರ್ಯದರ್ಶಿ ಎ.ಗೋವಿಂದರಾಜು ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ಮಳೆಯಿಲ್ಲದೆ ಜಿಲ್ಲೆಯಲ್ಲಿ ಕೊಳವೆಬಾವಿಗಳು ಬತ್ತಿವೆ. ಹೇಮಾವತಿ ನಾಲಾ ವ್ಯಾಪ್ತಿಯಲ್ಲಿ ಬರುವ ಕೆರೆಗಳಿಗೆ ನೀರು ತುಂಬಿಸಿಲ್ಲ. ಹೇಮಾವತಿ ನಾಲಾ ಅಗಲೀಕರಣ ಮಾಡದೇ ಇರುವುದರಿಂದ ನಮ್ಮ ಪಾಲಿನ ನೀರನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಸರ್ಕಾರ ಹಾಗೂ ಜನಪ್ರತಿನಿಧಿಗಳು ನಾಲೆ ಅಗಲೀಕರಣ ಮಾಡಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ದೂರಿದರು. ಗುಬ್ಬಿಯ ಕಡಬ ಕೆರೆಯಿಂದ ಮಾಗಡಿ-ಕನಕಪುರಕ್ಕೆ ಕುಣಿಗಲ್ ಮೂಲಕ ನೀರು ಕೊಂಡೊಯ್ಯಲು ಮಾಡುತ್ತಿರುವ ಯೋಜನೆ ಕೈಬಿಟ್ಟು, ಬಿಕ್ಕೆಗುಡ್ಡ ಮತ್ತು ಹಾಗಲವಾಡಿ ಸೇರಿದಂತೆ ಎಲ್ಲ ಕುಡಿಯುವ ನೀರಿನ ಯೋಜನೆಗಳನ್ನು ಅನುಷ್ಠಾನಗೊಳಿಸುವಂತೆ ಒತ್ತಾಯಿಸಿದರು.
ರೈತಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಮಾತನಾಡಿ, ಆಂಧ್ರ ಮತ್ತು ತೆಲಂಗಾಣದಲ್ಲಿ ಮಳೆ ನೀರನ್ನು ಸಮರ್ಪಕವಾಗಿ ಸಂಗ್ರಹಿಸುವ ಹಾಗೂ ವ್ಯವಸ್ಥಿತವಾಗಿ ಬಳಕೆ ಮಾಡುವ ನಿಟ್ಟಿನಲ್ಲಿ ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಆದರೆ, ರಾಜ್ಯದಲ್ಲಿ ನಿಜಾಮರು ಕಟ್ಟಿಸಿದ್ದ ಕೆರೆ ಕಟ್ಟೆಗಳು ಹಾಳುಬಿದ್ದಿವೆ. ಇದುವರೆಗೆ ಆಡಳಿತಕ್ಕೆ ಬಂದ ಯಾವ ಸರ್ಕಾರವೂ ನೀರಾವರಿಗೆ ಒತ್ತು ನೀಡದೇ ಇದ್ದರಿಂದ ಕೃಷ್ಣ, ತುಂಗಾಭದ್ರಾ, ಕಾವೇರಿಯಿಂದ ನೀರು ಹೊರರಾಜ್ಯಗಳ ಪಾಲಾಯಿತು ಎಂದು ಹೇಳಿದರು.
ನೀರಾವರಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನೊಲೆನೂರು ಶಂಕರಪ್ಪ, ರಾಮಸ್ವಾಮಿ, ಸುರೇಶ್ ಮಾತನಾಡಿದರು. ಈ ವೇಳೆ ಎಂ.ರಾಮು, ರಾಮಕೃಷ್ಣಯ್ಯ, ಲೋಕೇಶ್ ರಾಜೇ ಅರಸ್, ಹೊಸೂರ ಕುಮಾರ್, ಗೋಪಾಲ್, ಜೆ.ಸಿ.ಶಂಕರಪ್ಪ, ಕೆ.ಎನ್.ವೆಂಕಟೇಗೌಡ, ದೊಡ್ಡಮಾಳಯ್ಯ, ರವೀಶ್, ಚಿರತೆ ಚಿಕ್ಕಣ್ಣ, ಮೂಡಲಗಿರಿಯಪ್ಪ, ನಾಗರತ್ನಮ್ಮ, ದ್ರಾûಾಯಣಮ್ಮ, ಶ್ರೀನಿವಾಸ್‌ಗೌಡ, ರವಿಪೂಣಚ್ಚ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.