ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯ:ಧ್ವಜಸ್ತಂಭ ಪ್ರತಿಷ್ಠಾಪನೆ, ಸಾಮೂಹಿಕ ವಿವಾಹ

ಧಾರ್ಮಿಕ ಕಾರ್ಯಕ್ರಮಗಳಿಂದ ನಾಡಿನಲ್ಲಿ ಶಾಂತಿ ನೆಮ್ಮದಿ: ಡಾ. ಶ್ರೀ ಹನುಮಂತನಾಥ ಸ್ವಾಮೀಜಿ

Team Udayavani, Apr 7, 2022, 2:36 PM IST

1-gh

ಕೊರಟಗೆರೆ: ದಾನಿಗಳ ಸಹಕಾರದಿಂದ ದೇವಾಲಯಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಸುವ ಮೂಲಕ ನಾಡಿನಲ್ಲಿ ಶಾಂತಿ ನೆಮ್ಮದಿ ನೆಲೆಸುವುದರೊಂದಿಗೆ ಸುಭಿಕ್ಷೆಯಾಗುತ್ತದೆ ಎಂದು ಎಲೆರಾಮಪುರ ಕುಂಚಿಟಿಗರ ಮಹಾಸಂಸ್ಥಾನ ಮಠ ಶ್ರೀ ನರಸಿಂಹಗಿರಿ ಸುಕ್ಷೇತ್ರದ ಡಾ.ಶ್ರೀ ಹನುಮಂತನಾಥಸ್ವಾಮಿ ಹೇಳಿದರು.

ಗೊರವನಹಳ್ಳಿ ಶ್ರೀ ಮಹಾಲಕ್ಷ್ಮೀ ದೇವಲಯದ ಆವರಣದಲ್ಲಿ ಶ್ರೀ ಮಹಾಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ಹಾಗೂ ಬೆಂಗಳೂರಿನ ದಾನಿಗಳಾದ ಬಾಲಕೃಷ್ಣ ರವರು ಏರ್ಪಡಿಸಿದ್ದ ಧ್ವಜಸ್ತಂಭ ಪ್ರತಿಷ್ಠಾಪನೆ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ಭಾರತೀಯ ಸಂಸ್ಕೃತಿ ಮತ್ತು ಆಚರಣೆಯಲ್ಲಿ ಆರ್ಥಪೂರ್ಣ ಆರೋಗ್ಯಕರ ಪರಿಕಲ್ಪನೆಯಿದೆ ಮನುಷ್ಯನು ಧಾರ್ಮಿಕತೆಯಿಂದ ಇದ್ದರೆ ಮಾನಸಿಕವಾಗಿ ಸದೃಢನಾಗಿ ದೇವತಾಕಾರ್ಯಗಳಲ್ಲಿ ಭಾಗವಹಿಸುತ್ತಿದ್ದರೆ ಎಂತಹ ಕಷ್ಟಗಳನ್ನೂ ಎದುರಿಸುವ ಶಕ್ತಿಯನ್ನು ಹೊಂದಿರುತ್ತಾನೆ. ಈ ನಿಟ್ಟಿನಲ್ಲಿ ದಾನಿಗಳಾದ ಬಾಲಕೃಷ್ಣರವರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚು ಆಸತ್ತಿ ಹೊಂದಿದ್ದು ದೇವತಾ ಕಾರ್ಯದೊಂದಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸುವ ಮೂಲಕ ಸಮಾಜಮುಖಿ ಸೇವೆಯಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದರು.

ಕುಣಿಗಲ್ ಹರೇಶಂಕರ ಮಠದ ಶ್ರೀ ಸಿದ್ದರಾಮಚೈತನ್ಯಸ್ವಾಮೀಜಿ ಮಾತನಾಡಿ ದೇವರ ಕೃಪೆ ಪ್ರೇರಣೆ ಇಲ್ಲದೆ ಮನುಷ್ಯನ ಜೀವನದಲ್ಲಿ ಏನೂ ನಡೆಯುವುದಿಲ್ಲ ಮನುಕುಲದ ವಿಕಾಸಕ್ಕೆ ಭಗವಂತನ ಆಶೀರ್ವಾದ ಅತ್ಯಗತ್ಯ ದೇವರೆಂಬ ಅಗೊಚರ ಶಕ್ತಿಯಿಂದ ನಾವು ಬದುಕುತ್ತಿದ್ದವೆ, ನಾವು ಉತ್ತಮ ಜೀವನ ನಡೆಸ ಬೇಕಾದರೆ ಪ್ರತಿಯೊಬ್ಬ ಮನುಷ್ಯನು ದೇವಾಲಯಗಳಿಗೆ ಭೇಟಿ ನೀಡಿ ದೇವರ ಧ್ಯಾನ ಮಾಡುವ ಮೂಲಕ ಶಾಂತಿ ನೆಮ್ಮದಿ ಪಡೆಯುವಂತೆ ತಿಳಿಸಿ ಶ್ರೀಮಹಾಲಕ್ಷ್ಮೀ ಸನ್ನಿಧಿ ಯಲ್ಲಿ ವಿವಾಹವಾದ ನವ ಜೋಡಿಗಳಿಗೆ ಆಶೀರ್ವದಿಸಿದರು.

ಶ್ರೀ ಮಹಾಲಕ್ಷ್ಮೀ ದೇವಾಲಯ ಟ್ರಸ್ಟ್ ನ ಅಧ್ಯಕ್ಷ ಬಿ.ಜಿ.ವಾಸುದೇವ ಮಾತನಾಡಿ ಕಳೆದ ಕೆಲ ವರ್ಷಗಳಿಂದ ಸರ್ಕಾರ ಮತ್ತು ಟ್ರಸ್ಟ್ ನ ನಡುವೆ ವಿವಾದವಿದ್ದು ಇತ್ತೀಚೆಗೆ ಮತ್ತೆ ಟ್ರಸ್ಟ್ ಆಡಳಿತಕ್ಕೆ ಬಂದಿದ್ದು ಮುಂದಿನ ದಿನಗಳಲ್ಲಿ ಭಕ್ತಾದಿಗಳ ಸಹಕಾರ ದಿಂದ ದೇವಾಲಯದ ಅಭಿವೃದ್ಧಿ ಯೊಂದಿಗೆ ಮೊದಲಿನಂತೆ ಸಾಮಾಜಿಕ ಸೇವೆಗಳಿಗೆ ಶ್ರಮಿಸುವುದಾಗಿ ತಿಳಿಸಿದ ಅವರು ದೇವಾಲಯದ ಆವರಣದಲ್ಲಿ ಧ್ವಜಜಸ್ಥಂಭ ನವಗ್ರಹ ದೇವಾಲಯ ಹಾಗೂ ಮಾರುತಿ ದೇವಾಲಯ ನಿರ್ಮಿಸಿ ಪ್ರಾಣಪ್ರತಿಷ್ಠಾಪನೆ ಕಾರ್ಯದೊಂದಿಗೆ ಉಚಿತ ಸಾಮೂಹಿ ವಿವಾಹಗಳನ್ನು ಮಾಡಿದ ಧಾನಿ ಬಾಲಕೃಚ್ಣರವರಿಗೆ ಅಭಿನಂದಿಸಿದರು. ಕಾರ್ಯಕ್ರಮದ ಅಂಗವಾಗಿ ಗಣಪತಿ ಪೂಜೆ, ಪುನ್ಯಾಹವಾಚನ, ಪ್ರಾಯಶ್ವಿತ ಸಂಕಲ್ಪ, ರಕ್ಷಾಬಂಧನ, ಅಂಕುರಾರ್ಪಣೆ, ಆರಾಧನೆ ಸೇರಿದಂತೆ ವಿವಿಧ ಹೋಮ ಹವನಗಳೊಂದಿಗೆ ಉಚಿತ ಸಮೂಹಿಕ ವಿವಾಹ ಹಾಗೂ ಧ್ವಜಸ್ತಂಭ ಪ್ರಾಣಪ್ರತಿಷ್ಠಾಪನೆ ಕಾರ್ಯ ನಡೆಯಿತು

ಈ ಸಂದರ್ಬದಲ್ಲಿ ಧ್ವಜಸ್ತಂಭದ ದಾನಿ ಬಾಲಕೃಷ್ಣ ಮತ್ತು ಅವರು ಕುಟುಂಬವರ್ಗ, ದೇವಾಲಯ ಟ್ರಸ್ಟ್ನ ಕಾರ್ಯದರ್ಶಿ ಚಿಕ್ಕನರಸಯ್ಯ, ಖಜಾಂಚಿ ಜಿ.ಎಲ್.ಮಂಜುನಾಥ್, ಧಮ್ಮದರ್ಶಿಗಳಾದ ಡಾ. ಟಿ.ಎಸ್.ಲಕ್ಷ್ಮೀಕಾಂತ, ಟಿ.ಆರ್.ನಟರಾಜು, ಎಸ್.ಶ್ರೀಪ್ರಸಾದ್, ರವಿರಾಜೇ ಅರಸ್, ಆರ್.ಮುರಳೀಕೃಷ್ಣ, ಓಂಕಾರೇಶ್, ಆರ್.ಜಗದೀಶ್, ರಾಮಲಿಂಗಯ್ಯ, ನರಸರಾಜು, ಲಕ್ಷ್ಮೀನರಸಯ್ಯ, ಎನ್.ಜಿ.ನಾಗರಜು, ಗುತ್ತಿಗೆದಾರ ಎ.ಡಿ.ಬಲರಾಮಯ್ಯ, ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಕೇಶವಮೂರ್ತಿ ಸೇರಿದಂತೆ ಟ್ರಸ್ಟ್ ನ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.