ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

Team Udayavani, Sep 11, 2021, 2:33 PM IST

ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ಹುಳಿಯಾರು: ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಸೂಚನೆ ಮೇರೆಗೆ ಹುಳಿಯಾರಿನಲ್ಲಿ ನೂತನ ಸರ್ಕಾರಿ ಆಸ್ಪತ್ರೆ ನಿರ್ಮಿಸಲು
ಸೂಕ್ತ ಸ್ಥಳ ಪರಿಶೀಲನಾ ಕಾರ್ಯ ನಡೆಯಿತು.

ಆಸ್ಪತ್ರೆ ಮೇಲ್ದರ್ಜೆಗೇರಿಸಿ 100 ಹಾಸಿಗೆಯ ದೊಡ್ಡ ಆಸ್ಪತ್ರೆ ನಿರ್ಮಿಸಲು ಸಚಿವರು ಉದ್ದೇಶಿಸಿರುವುದರಿಂದ ಹಾಲಿ ಇರುವ ಆಸ್ಪತ್ರೆ ಜಾಗ ತೀರಾಕಿರಿದಾಗಿದೆ ಎನ್ನುವ ಕಾರಣದಿಂದ ಡಿಎಚ್‌ಒ ನಾಗೇಂದ್ರಪ್ಪ ಅವರ ನೇತೃತ್ವದಲ್ಲಿ ಯಳನಾಡು ರಸ್ತೆಯ ಪೆಟ್ರೋಲ್‌ ಬಂಕ್‌ ಹಿಂಭಾಗ, ಕೆಂಕೆರೆ ರಸ್ತೆಯ ಮುಕ್ತಿಧಾಮದ ಸಮೀಪ ಹಾಗೂ ಕಂಪನಹಳ್ಳಿ ಸಮೀಪದ ಸರ್ಕಾರಿ ಜಾಗವನ್ನು ವೀಕ್ಷಿಸಿ, ಲಭ್ಯವಿರುವ ಭೂಮಿಯ ವಿಸ್ತೀರ್ಣದ
ಮಾಹಿತಿಗಳನ್ನು ಸಂಗ್ರಹಿಸಿದರು.

ಮುಕ್ತಿಧಾಮದ ಬಳಿ ಕೇವಲ 2 ಎಕರೆ ಮಾತ್ರ ಸರ್ಕಾರಿ ಜಾಗವಿರುವ ಕಾರಣದಿಂದ ಈ ಸ್ಥಳವನ್ನು ಕೈ ಬಿಡಲಾಯಿತು. ಯಳನಾಡು ರಸ್ತೆಯ ಪೆಟ್ರೋಲ್‌ ಬಂಕ್‌ ಬಳಿ 15 ಎಕರೆಗೂ ಹೆಚ್ಚು ಸರ್ಕಾರಿ ಜಾಗವಿದೆಯಾದರೂ ಕೆಲವರು ಟಿಟಿ ಕಟ್ಟಿ ಸಾಗುವಳಿ ಮಾಡುತ್ತಿದ್ದಾರಲ್ಲದೆ ಇಲ್ಲಿಯೇ ಯಳನಾಡು ಪಂಚಾಯ್ತಿಯ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸುತ್ತಿರುವುದರಿಂದ ಆಸ್ಪತ್ರೆ ನಿರ್ಮಾಣಕ್ಕೆ ಸೂಕ್ತ ಸ್ಥಳವಲ್ಲ ಎನ್ನುವ ಅಭಿಪ್ರಾಯಕ್ಕೆ ಬರಲಾಯಿತು.

ಇದನ್ನೂ ಓದಿ:ಕಾಂಗ್ರೆಸ್ ಮುಖಂಡ ಜೈನುಲ್ಲಾ ಖಾನ್ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಕೊನೆಗೆ ಕಂಪನಹಳ್ಳಿ ಸಮೀಪದ ಗೌಡಗೆರೆ ಸರ್ವೆ ನಂಬರ್‌ 22ರಲ್ಲಿ ಪರಿಶೀಲನೆ ಮಾಡಲಾಯಿತು. ಇಲ್ಲಿ 35 ಎಕರೆ ಸರ್ಕಾರಿ ಜಾಗವಿದೆಯಲ್ಲದೆ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿದೆ. ಈ ಭೂಮಿಯಲ್ಲಿ ಪ್ರಸ್ತುತ ಯಾರೊಬ್ಬರೂ ಸಾಗುವಳಿ ಮಾಡದೆ ಖಾಲಿಯಿದ್ದು, ಯಾವುದೇ ತಂಟೆತಕರಾರು ಇಲ್ಲದೆ ಆಸ್ಪತ್ರೆ ನಿರ್ಮಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಅಗ್ನಿಶಾಮಕ ಠಾಣೆ ಸೇರಿದಂತೆ ಇತರೆ ಸರ್ಕಾರಿ ಕಟ್ಟಡ ಗಳನ್ನು ನಿರ್ಮಿಸಲು ಸೂಕ್ತವಾಗಿದೆ ಎಂಬ ಅಭಿಪ್ರಾಯವನ್ನು ಅಧಿಕಾರಿಗಳ ತಂಡ ವ್ಯಕ್ತಪಡಿಸಿತು. ಡಿಎಚ್‌ಒ ನಾಗೇಂದ್ರಪ್ಪ ಮಾತನಾಡಿ, ಶೀಘ್ರದಲ್ಲೇ ತಹಶೀಲ್ದಾರ್‌ ಅವರೊಂದಿಗೆ ಮತ್ತೂಮ್ಮೆ ಗೌಡಗೆರೆ ಸರ್ವೆ ನಂಬರ್‌ 22 ಪರಿಶೀಲಿಸಿ ಇಲಾಖೆಯಅಭಿಪ್ರಾಯ ಸೇರಿದಂತೆ ಸಮಗ್ರ ವರದಿ ಪಡೆದು ಸಚಿವರ ಗಮನಕ್ಕೆ ತರಲಾಗುವುದು. ಅವರ ಸಲಹೆ ಸೂಚನೆಯಂತೆ ಆಸ್ಪತ್ರೆ ನಿರ್ಮಿಸುವ ನಿಟ್ಟಿನಲ್ಲಿ ಮುಂದಿನ ಹೆಜ್ಜೆ ಹಿಡಲಾಗುವುದು ಎಂದು ತಿಳಿಸಿದರು. ಟಿಎಚ್‌ಒ ನವೀನ್‌, ತಾಪಂ ಮಾಜಿ ಅಧ್ಯಕ್ಷ ಕೆಂಕೆರೆ ನವೀನ್‌, ಪಪಂ ಸದಸ್ಯ ಹೇಮಂತ್‌, ಕೆಎಂಎಲ್‌ಕಿರಣ್‌, ಮುಖಂಡ ಜಯಣ್ಣ, ಬಳೆದಾಸಪ್ಪ, ಅಶೋಕ್‌ಬಾಬು, ಪಾತ್ರೆ ಪರಮೇಶ್‌ ಮತ್ತಿತರರು ಇದ್ದರು.

ಹುಳಿಯಾರಿಗೆ ಸಚಿವರ
ಬಂಪರ್‌ ಕೊಡುಗೆ
ಹುಳಿಯಾರಿನ ಜನ ಹಾಲಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸುವಂತೆ ಎರಡೂ ದಶಕಗಳಿಂದ ಕೇಳಿ ಕೊಳ್ಳುತ್ತಿದ್ದರು. ಮಾಜಿ ಸಚಿವ ಟಿ.ಬಿ.ಜಯಚಂದ್ರ ಸೇರಿದಂತೆ ಅಂದಿನ ಜನಪ್ರತಿನಿಧಿಗಳು ಈಗ ಮೇಲ್ದರ್ಜೆ
ಗೇರಿಸುತ್ತೇವೆ, ಆಗ ಮೇಲ್ದರ್ಜೆಗೇರಿಸುತ್ತೇವೆ ಎಂದು ದಿನದೂಡಿದರೆ ವಿನಃ ಮೇಲ್ದರ್ಜೆಗೇರಿಸಲಿಲ್ಲ. ಆದರೆ, ಸಚಿವ ಜೆ.ಸಿ.ಮಾಧುಸ್ವಾಮಿ
ಅವರು ಹುಳಿಯಾರಿನವರ ಪಾಲಿಗೆ ಬಂಪರ್‌ ಕೊಡುಗೆ ಎನ್ನುವಂತೆ ಸಮುದಾಯ ಆರೋಗ್ಯ ಕೇಂದ್ರಕ್ಕಿಂತಲೂ ದೊಡ್ಡದಾದ100 ಹಾಸಿಗೆಯ ಆಸ್ಪತ್ರೆ ನಿರ್ಮಿಸಲು ಮುಂದಾಗಿದ್ದಾರೆ.

ಸಮುದಾಯ ಆರೋಗ್ಯ ಕೇಂದ್ರ ವಾದರೆ ಹೆರಿಗೆ ತಜ್ಞರು, ಮಕ್ಕಳ ವೈದ್ಯರು ಸೇರಿದಂತೆ 3 ಮಂದಿ ವೈದ್ಯರಿದ್ದು 30 ಹಾಸಿಗೆಯ ಸೌಲಭ್ಯ ವಿರುತ್ತದೆ. 100 ಹಾಸಿಗೆಯ ಆಸ್ಪತ್ರೆಯಾದರೆ ಮೂಳೆ, ಚರ್ಮ, ಇಎನ್‌ಟಿ,ಕಣ್ಣು ಸೇರಿದಂತೆ 11 ಮಂದಿ ತಜ್ಞ ವೈದ್ಯರು ಸೇರಿದಂತೆ ಅಗತ್ಯ ಸಿಬ್ಬಂದಿ, ಔಷಧ, ಲ್ಯಾಬ್‌ ಸೌಕರ್ಯ ಸಿಗಲಿದೆ.
-ನಾಗೇಂದ್ರಪ್ಪ, ಡಿಎಚ್‌ಒ

ಟಾಪ್ ನ್ಯೂಸ್

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.