ನೀರಿನ ಮೂಲ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ
Team Udayavani, May 4, 2020, 6:52 PM IST
ತುಮಕೂರು: ಜಿಲ್ಲೆಯಲ್ಲಿ ನೈಸರ್ಗಿಕ ನೀರಿನ ಮೂಲಗಳಾದ ಹಳ್ಳ, ಕೆರೆಗಳನ್ನು ಪುನಶ್ಚೇತನಗೊಳಿಸುವುದರಿಂದ ಅಂತರ್ಜಲ ಸಾಮರ್ಥ್ಯ ವೃದ್ಧಿಯಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶುಭಾ ಕಲ್ಯಾಣ್ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಅಂತರ್ಜಲ ಚೇತನ ಯೋಜನೆ ಅನುಷ್ಠಾನ ಕುರಿತು ಎಲ್ಲಾ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಕಾರ್ಯಪಾಲಕ ಅಭಿಯಂತರಹಾಯಕ ನಿರ್ದೇಶಕರು, ಎಂಐಎಸ್ ಸಂಯೋಜಕರು, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕ ಎಂಜಿನಿಯರುಗಳಿಗಾಗಿ ಏರ್ಪಡಿಸಿದ್ದ ತರಬೇತಿಯಲ್ಲಿ ಮಾತನಾಡಿದರು.
ಮಣ್ಣಿನ ಸವಕಳಿ ತಡೆಗೆ ಕ್ರಮ: ನೀರಿನ ಮೂಲಗಳಲ್ಲಿ ಮಣ್ಣಿನ ಸವಕಳಿ ಹಾಗೂ ಹೂಳು ತುಂಬುವಿಕೆಯನ್ನು ಕಡಿಮೆ ಮಾಡುವುದರಿಂದ ಹಳ್ಳ, ಕೆರೆಗಳಿಗೆ ನೀರಿನ ಹರಿವು ಹೆಚ್ಚುತ್ತದೆ. ನದಿ ಮತ್ತು ಜಲಾನಯನ ಪ್ರದೇಶಗಳಲ್ಲಿ ಸ್ವಾಭಾವಿಕ ಸಸ್ಯವರ್ಗವನ್ನು ಅಭಿವೃದ್ಧಿಗೊಳಿಸುವುದರಿಂದ ನೈಸರ್ಗಿಕ ನೀರಿನ ಮೂಲಗಳನ್ನು ಪುನರುಜ್ಜೀವನಗೊಳಿಸಬಹುದಾಗಿದೆ ಎಂದರು.
ರಾಜ್ಯ ಸರ್ಕಾರವು ಪ್ರಸಕ್ತ ವರ್ಷದಲ್ಲಿ ಅಂತರ್ಜಲ ಚೇತನ ಯೋಜನೆ ಅನುಷ್ಠಾನ ಮಾಡಲು ಅವಕಾಶ ಕಲ್ಪಿಸಿರುವ ರಾಜ್ಯದ 9 ಜಿಲ್ಲೆಗಳ ಪೈಕಿ ತುಮಕೂರು ಜಿಲ್ಲೆಯು ಒಂದಾಗಿದೆ. ಜಿಲ್ಲೆಯಲ್ಲಿ ದಿನೇ ದಿನೆ ಕ್ಷೀಣಿಸುತ್ತಿರುವ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ದೃಷ್ಟಿಯಿಂದ ಎಲ್ಲಾ 330 ಗ್ರಾಪಂಗಳ ವ್ಯಾಪ್ತಿಯಲ್ಲಿ ಅಂತರ್ಜಲ ಚೇತನ ಯೋಜನೆಯನ್ನು ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹ ಯೋಗದೊಂದಿಗೆ ಹಮ್ಮಿಕೊಳ್ಳಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ಈ ಯೋಜನೆಯಡಿ ಪ್ರಮುಖವಾಗಿ ಕಲ್ಲು ಗುಂಡು ತಡೆ ನಿರ್ಮಿಸುವ ಮೂಲಕ ಹರಿ ಯುವ ನೀರಿನ ವೇಗವನ್ನು ನಿಧಾನಗೊಳಿಸಿ ಮಳೆ ನೀರನ್ನು ಇಂಗಿಸುವುದು, ಮರು ಪೂರಣ ಬಾವಿ ಮತ್ತು ಇನ್‌ಜೆಕ್ಷನ್ ವೆಲ್, ಕೊಳವೆ ಬಾವಿ ಗಳನ್ನು ನಿರ್ಮಿಸಿ ತ್ವರಿತವಾಗಿ ಅಂತರ್ಜಲ ಮರುಪೂರಣಗೊಳ್ಳುವಂತೆ ಮಾಡು ವುದು, ನೀರಿನ ಹೊಂಡಗಳನ್ನು ನಿರ್ಮಿಸುವ ಮುಖಾಂತರ ದೀರ್ಘಕಾಲದ ವರೆಗೆ ಮೇಲ್ಮೆ„ ನೀರು ದೊರೆಯುವಂತೆ ಮಾಡುವಂತಹ ಅಂತರ್ಜಲ ಮರು ಪೂರಣ ರಚನೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು.
ಜಲ ಮರುಪೂರಣ: ಬೋಲ್ಡರ್ ಚೆಕ್‌ಗಳನ್ನು ನೀರಿನ ಹರಿವು ನೇರವಾಗಿರುವ ಸ್ಥಳಗಳಲ್ಲಿ ರಚನೆ, ನೀರನ್ನು ಇಂಗಿಸಬಹುದಾದ ಸ್ಥಳಗಳಲ್ಲಿ ಮರುಪೂರಣ ಬಾವಿ ಹಾಗೂ ಇನ್‌ಜೆಕ್ಷನ್ ವೆಲ್ ರಚಿಸುವು ದಲ್ಲದೆ, ಪ್ರತಿಯೊಂದು ರಚನೆಗಳ ಸುತ್ತಲೂ ವಾಟ್‌ರ್‌ಪೂಲ್‌ಗಳನ್ನು ರಚಿಸಿ ಬಹು ದೊಡ್ಡ ಗಾತ್ರದ ನೀರಿನ ಹರಿವನ್ನು ಅಂತರ್ಜಲಕ್ಕೆ ಸೇರ್ಪಡೆ ಮಾಡುವ ಯೋಜನೆ ಇದಾಗಿದೆ. ಜಿಲ್ಲಾ, ತಾಲೂಕು ಮಟ್ಟದಲ್ಲಿ ಹಾಗೂ ಗ್ರಾಪಂ ಮಟ್ಟದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ನಿಯೋಜನೆಗೊಂಡ ತಾಂತ್ರಿಕ ಪರಿಣಿತರು ಕರ್ತವ್ಯ ನಿರ್ವಹಿಸಲಿದ್ದಾರೆ.
ಕಾಯಕ ಬಂಧುಗಳ ಆಯ್ಕೆ: ಪ್ರತಿಯೊಂದು ಗ್ರಾಪಂ ವ್ಯಾಪ್ತಿಯಲ್ಲಿ ವಾಸವಿ ರುವ ಆಸಕ್ತಿ ಹೊಂದಿರುವ ಯುವಕ ಯುವತಿಯರನ್ನು ಕಾಯಕ ಬಂಧುಗಳನ್ನಾಗಿ ಆಯ್ಕೆ ಮಾಡಿ ಕಾಮಗಾರಿ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸಲು ನಿಯೋಜಿಸಲಾಗುವುದು. ಪ್ರಸಕ್ತ ಆರ್ಥಿಕ ವರ್ಷ ಮುಗಿಯುವುದರೊಳಗಾಗಿ ಜಿಲ್ಲೆಯಾದ್ಯಂತ ಎಲ್ಲಾ ಜಲಾನಯನ ಪ್ರದೇಶ ಗಳಲ್ಲಿ ನೀರಿನ ಪುನಶ್ಚೇತನ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ಪೂರ್ಣ ಗೊಳಿಸಲು ಗುರಿ ಹೊಂದಲಾಗಿದೆ ಎಂದು ಸಿಇಒ ಶುಭಾ ಕಲ್ಯಾಣ್ ತಿಳಿಸಿದರು. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಕಾರ್ಯಾಚರಣೆ ನಿರ್ದೇಶಕ ರವೀಂದ್ರ ದೇಸಾಯಿ ತರಬೇತಿ ನೀಡಿದರು. ಜಿಪಂ ಅಭಿವೃದ್ಧಿ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.