ಧಾರ್ಮಿಕ ಕಾರ್ಯಗಳು ಸ್ವಾಸ್ಥ್ಯ ಸಮಾಜಕ್ಕೆ ಪೂರಕ: ಹನುಮಂತನಾಥ ಸ್ವಾಮೀಜಿ
Team Udayavani, May 31, 2022, 1:05 PM IST
ಕೊರಟಗೆರೆ : ಮನಸ್ಸು ಚಂಚಲವಾಗದೆ ಸ್ಥಿರವಾಗಿ ಇರಲು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದು ಸಹಕಾರಿ ಎಂದು ಎಲೆರಾಂಪುರ ಕುಂಚಿಟಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಹನುಮಂತನಾಥ ಸ್ವಾಮೀಜಿ ತಿಳಿಸಿದರು.
ತಾಲೂಕಿನ ಹೊಳವನಹಳ್ಳಿ ಹೋಬಳಿಯ ಹನುಮೇನಹಳ್ಳಿ ಗ್ರಾಮದಲ್ಲಿ ಮಾರಿಕಾಂಭದೇವಿ ದೇವಾಲಯದ ಚರ ಮತ್ತು ಸ್ಥಿರ ನೂತನ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ದಿವ್ಯ ಸಾನಿಧ್ಯವನ್ನು ವಹಿಸಿ ಮಾತನಾಡಿದರು.
ಇಡೀ ಜಗತ್ತನ್ನು ಕೋವಿಡ್ ನಡುಗಿಸಿದ್ದು ಜನರು ಹೆಚ್ಚು ಧಾರ್ಮಿಕತೆಯ ಕಡೆ ಒಲವನ್ನು ತೋರಿದ್ದು ಎಲ್ಲೆಡೆ ಧಾರ್ಮಿಕ ಕಾರ್ಯಗಳು ಹೆಚ್ಚಾಗುತ್ತಿದ್ದು ಇದು ಸ್ವಾಸ್ಥ್ಯ ಸಮಾಜಕ್ಕೆ ಪೂರಕವಾಗಿದೆ. ಪ್ರತಿ ಗ್ರಾಮದಲ್ಲಿಯೂ ಪಾಳು ಬಿದ್ದಿದ್ದ ಪ್ರತಿಯೊಂದು ದೇವಾಲಯಗಳು ಸಹ ಪುನರ್ ಪ್ರತಿಷ್ಥಾಪಿತಗೊಳ್ಳುತ್ತಿದ್ದು ಪ್ರತಿ ಗ್ರಾಮದಲ್ಲಿಯೂ ಇರುವಂತಹ ಗ್ರಾಮಸ್ಥರು ಈ ಧಾರ್ಮಿಕ ಕಾರ್ಯಕ್ರಮದಿಂದ ಒಗ್ಗೂಡುತ್ತಿದ್ದು ಇದೊಂದು ಉತ್ತಮವಾದಂತಹ ಸಮಾಜ ನಿರ್ಮಾಣಕ್ಕೆ ಸಹಕಾರಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಿದ್ದರಬೆಟ್ಟದ ಬಾಳೇಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ವೀರಭಧ್ರಶಿವಾಚಾರ್ಯ ಸ್ವಾಮೀಜಿ, ಮಾಜಿ ಶಾಸಕ ಪಿ.ಆರ್ ಸುಧಾಕರ್ ಲಾಲ್, ಚೈಚಾಪುರ ಗ್ರಾ.ಪಂ ಅಧ್ಯಕ್ಷೆ ಕೆಂಪಲಕ್ಷ್ಮಮ್ಮ, ಮುಖಂಡರಾದ ರಾಮಚಂದ್ರಯ್ಯ, ಶಂಕರಪ್ಪ, ಕರೇಗೌಡ, ಶಶಿಕುಮಾರ್, ರಾಜಣ್ಣ,ಕುಮಾರ್, ಹೆಚ್.ಸಿ ರಾಜಣ್ಣ, ಗ್ರಾಮದ ಪೂಜಾರಾದ ದೊಡ್ಡಯ್ಯ, ಸೇರಿದಂತೆ ಸ್ಥಳೀಯ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.