ಮಧುಗಿರಿಗೆ ಹರಿಯಲಿದ್ದಾಳೆ ಹೇಮೆ
Team Udayavani, May 23, 2020, 5:38 AM IST
ಮಧುಗಿರಿ: ಬರಗಾಲದಲ್ಲಿಯೂ ಮಧುಗಿರಿಗೆ ಹೇಮಾ ವತಿ ನೀರು ಹರಿಯಲಿದ್ದು, ಸರ್ಕಾರ ನೀರು ಬಿಡಲು ಒಪ್ಪಿದ್ದು, ಸಿದ್ದಾಪುರ ಕೆರೆಗೆ ಹೇಮಾವತಿ ಹರಿಯಲಿದೆ ಎಂದು ಶಾಸಕ ಎಂ.ವಿ. ವೀರಭದ್ರಯ್ಯ ಹೇಳಿದರು. ಪಟ್ಟಣದ ತಾಪಂನಲ್ಲಿ ಪಿಡಿಒಗಳ ಸಭೆ ಯಲ್ಲಿ ಮಾತನಾಡಿ, ಎರಡನೇ ಬಾರಿಗೆ ಮಧುಗಿರಿಗೆ ಹೇಮೆ ಹರಿಯಲಿದ್ದು, ಪಟ್ಟಣದಲ್ಲಿ ನೀರಿನ ಸಮಸ್ಯೆ ದೂರಾಗಲಿದೆ.
ಗ್ರಾಮೀಣ ಭಾಗದಲ್ಲಿ 50 ಖಾಸಗಿ ಕೊಳವೆಬಾವಿಯಿಂದ ನೀರು ಪಡೆದು ಜನರಿಗೆ ನೀಡುತ್ತಿದ್ದು, ತಹಶೀಲ್ದಾರ್ ಹಣ ಬಿಡುಗಡೆ ಮಾಡಿರಲಿಲ್ಲ. ಈ ಬಗ್ಗೆ ಆಕ್ರೋಶಗೊಂಡ ಶಾಸಕರು ಕಷ್ಟದಲ್ಲಿ ಹಣ ಸಿಗಲಿದೆ ಎಂಬ ಕಾರಣಕ್ಕೆ ರೈತರು ನೀರು ಕೊಡುತ್ತಾರೆ. ನೀವು ಹಣ ಬಿಡು ಗಡೆ ಮಾಡದಿದ್ದರೆ ಪಿಡಿಒಗಳು ಏನು ಮಾಡಬೇಕು. ಇದರಿಂದ ಸರ್ಕಾರಕ್ಕೂ ನಮಗೂ ಕೆಟ್ಟ ಹೆಸರು ಬರಲಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.
ಸಭೆಯಲ್ಲೇ ಶೀಘ್ರವಾಗಿ ಹಣ ಬಿಡು ಗಡೆಗೆ ಜಿಲ್ಲಾಧಿ ಕಾರಿ ಗಳೊಂದಿಗೆ ದೂರವಾಣಿಯಲ್ಲೇ ಮಾತ ನಾಡಿ ಹಣ ಬಿಡುಗಡೆಗೆ ಒಪ್ಪಿಗೆ ಪಡೆದು ತಹಶೀಲ್ದಾರ್‌ಗೆ ಸೂಚಿಸಿದರು. ನರೇಗಾದಲ್ಲಿ ಮಧುಗಿರಿ ಪ್ರಥಮ ಸ್ಥಾನದಲ್ಲಿದ್ದು ಕೂಲಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈಗ 40 ಸಾವಿರ ಹಣ ಬಿಡುಗಡೆಯಾಗಿದ್ದು ಪಿಡಿಒಗಳು ಕಷ್ಟದಲ್ಲಿರುವ ರೈತ, ಬಡವರಿಗೆ ಇದರಿಂದ ನೆರವಾಗಬೇಕು.
ನಿಮ್ಮ ಯಾವುದೇ ಸಮಸ್ಯೆಗಳಿಗೆ ನಾನು ಜೊತೆಗಿರಲಿದ್ದು, ಯಾರೊಂ ದಿಗೂ ರಾಜಕೀಯ ಮಾಡಬೇಡಿ ಎಂದರು. 45 ಹಳ್ಳಿಯಲ್ಲಿ ಕೊಳವೆಬಾವಿ ವಿಫಲವಾಗಿದ್ದು, ಟ್ಯಾಂಕರ್ ಮೂಲಕ ನೀರು ನೀಡುತ್ತಿದ್ದೇವೆ. ಮತ್ತಷ್ಟು ಅನುಮತಿ ಪಡೆದು ಕೆಲಸ ಮಾಡುವು ದಾಗಿ ತಾಪಂ ಇಒ ದೊಡ್ಡಸಿದ್ದಯ್ಯ ತಿಳಿಸಿದರು. ತಹಶೀಲ್ದಾರ್ ಡಾ.ವಿಶ್ವ ನಾಥ್, ಬೆಸ್ಕಾಂ ಎಇಇ ಕೃಷ್ಣಮೂರ್ತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.