ಹೇಮೆ ನಾಲೆ ಅಗಲೀಕರಣ ಶೀಘ್ರ
Team Udayavani, Dec 25, 2019, 3:00 AM IST
ಹುಳಿಯಾರು: 1030 ಕೋಟಿ ರೂ. ವೆಚ್ಚದಲ್ಲಿ ತುಮಕೂರು ಜಿಲ್ಲೆಯಲ್ಲಿನ ಹೇಮೆ ನಾಲೆ ಅಗಲೀಕರಣ ಮಾಡಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಹೋಬಳಿಯ ಬರಕನಹಾಲ್ ಗ್ರಾಮದಲ್ಲಿ ಮಂಗಳವಾರ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಬ್ಯಾಂಕ್ ಕೌಂಟರ್ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ತುಮಕೂರು ಜಿಲ್ಲೆಗೆ ಹೇಮಾವತಿ ಜಲಾಶಯದಿಂದ ಲಭ್ಯವಿರುವ 1200 ಕ್ಯೂಸೆಕ್ ನೀರನ್ನು ಎರಡ್ಮೂರು ತಿಂಗಳು ಹರಿಸಬೇಕಿತ್ತು. ನಾಲೆಯ ಅಗಲೀಕರಣದಿಂದ ಒಂದೂವರೆ ತಿಂಗಳಲ್ಲಿ ಜಿಲ್ಲೆಗೆ ಮೀಸಲಿಟ್ಟ ನೀರು ಹರಿಸಿಕೊಳ್ಳಲು ಸಾಧ್ಯವಾಗುತ್ತದೆ. ಕಾಮಗಾರಿಯು 2 ವರ್ಷ ನಡೆಯಲಿದೆ ಎಂದು ತಿಳಿಸಿದರು.
ಅಂತರ್ಜಲ ವೃದ್ಧಿ: ಹುಳಿಯಾರು ಹೋಬಳಿಯ ರೈತರ ಜೀವನಾಡಿಯಾದ ಬೋರನಕಣಿವೆ ಜಲಾಶಯಕ್ಕೆ ಭದ್ರ ಮತ್ತು ಹೇಮಾವತಿ ಯೋಜನೆಯಿಂದ ನದಿ ನೀರು ಹರಿಸಲಾಗುತ್ತದೆ. ಈ ಜಲಾಶಯ ತುಂಬಿದರೆ 2 ಸಾವಿರ ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೆರವಾಗಲಿದೆ ಎಂದರು.
ಸರ್ಕಾರ 10-15 ದಿನಗಳಲ್ಲಿ ಬಗರ್ ಹುಕುಂ ಕಮಿಟಿ ರಚಿಸಲಿದೆ. ಪ್ರತಿ ತಿಂಗಳು ಸಭೆ ನಡೆಸಿ ಅರ್ಹ ರೈತರ ಗುರುತಿಸಿ ಸಾಗುವಳಿ ಚೀಟಿ ನೀಡಲಾಗುವುದು. ತಾಲೂಕಿನಲ್ಲಿ 6 ಸಾವಿರ ಪವತಿ ಖಾತೆ, 24 ಸಾವಿರ ಪಹಣಿ ಸಮಸ್ಯೆ ಪರಿಹರಿಸಿ ರೈತರಿಗೆ ಅನುಕೂಲ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಮುಚ್ಚುವ ಸ್ಥಿತಿ ತಲುಪಿದ್ದ ಬರಕನಹಾಲ್ ಸೊಸೈಟಿ ಇಂದು ಕೆ.ಎನ್.ರಾಜಣ್ಣ ಮತ್ತು ಜೆ.ಸಿ.ಮಾಧುಸ್ವಾಮಿ ವಿಶೇಷ ಕಾಳಜಿಯಿಂದ ಅಭಿವೃದ್ಧಿ ಪಥದತ್ತ ಹೋಗುತ್ತಿದೆ. ಕಳೆದ ವರ್ಷ ನೀಡಿದ್ದ 1 ಕೋಟಿ ರೂ. ಸಾಲ ಮನ್ನಾವಾಗಿ ಹೊಸ ಸಾಲ ನೀಡಲು ಕ್ರಮ ಕೈಗೊಂಡಿದೆ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿ ರಾಜ್ ಕುಮಾರ್ ಹೇಳಿದರು.
ಸಂಘದ ಅಧ್ಯಕ್ಷ ಎಚ್.ಎಂ.ವಿಶ್ವನಾಥ್, ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಹಳೆಮನೆ ಶಿವನಂಜಪ್ಪ, ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಕೆ.ಎಚ್.ಮಹಾಂತೇಶಯ್ಯ, ಮೇಲ್ವಿಚಾರಕ ಎಸ್.ಆರ್.ರಂಗಸ್ವಾಮಿ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ತನ್ವೀರ್ ಖಾನ್, ಸೊಸೈಟಿ ಕಾರ್ಯನಿರ್ವಹಣಾಧಿಕಾರಿ ಕಲ್ಪನಾ, ತಾಪಂ ಸದಸ್ಯೆ ಕಲಾವತಿ, ಗ್ರಾಪಂ ಅಧ್ಯಕ್ಷೆ ಲಲಿತಾಬಾಯಿ, ಕೇಶವಮೂರ್ತಿ, ಶಿವಕುಮಾರ್, ಬರಗೂರು ನಾಗರಾಜು, ರಾಜಣ್ಣ, ನಾಗರಾಜು, ನಿಂಗಮ್ಮ, ಪದ್ಮಾಕ್ಷಮ್ಮ, ರಾಮಣ್ಣ, ಸೀತರಾಮಯ್ಯ ಮತ್ತಿತರರಿದ್ದರು.
ಚಿಕ್ಕನಾಯನಕನಹಳ್ಳಿ ತಾಲೂಕಿಗೆ ಮಂಜೂರಾಗಿದ್ದ ಮುರಾರ್ಜಿ, ರಾಣಿ ಚೆನ್ನಮ್ಮ, ಇಂದಿರಾಗಾಂಧಿ ವಸತಿ ಶಾಲೆಗಳ ಕಟ್ಟಡ ನಿರ್ಮಾಣ ಹಾಗೂ ವಾಲ್ಮೀಕಿ, ಜಗಜೀವನರಾಮ್ ಸಮುದಾಯ ಭವನಕ್ಕೆ ಅನುದಾನ ಮಂಜೂರಾಗಿದ್ದು, ಕಾಮಗಾರಿ ಉದ್ಘಾಟನೆಗೆ ಜ.1ರಂದು ಡಿಸಿಎಂ ಗೋವಿಂದಕಾರಜೋಳ ಆಗಮಿಸಲಿದ್ದಾರೆ.
-ಜೆ.ಸಿ.ಮಾಧುಸ್ವಾಮಿ, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.