ವಸತಿ ಯೋಜನೆ: ಪ್ರಗತಿಯಲ್ಲಿರುವ ಮನೆ ಪೂರ್ಣಗೊಳಿಸಿ
ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭ ಕಲ್ಯಾಣ್ ಸೂಚನೆ
Team Udayavani, Jul 9, 2019, 1:35 PM IST
ತುಮಕೂರು: ವಸತಿ ಯೋಜನೆಯಡಿ ಮಂಜೂರಾಗಿ ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳು ಅನುಷ್ಠಾನಗೊಳಿಸುವ ಮನೆಗಳ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
59.55 ಎಕರೆ ಜಮೀನು ಲಭ್ಯ: ಜಿಲ್ಲೆಗೆ ಈಗಾಗಲೇ ರಾಜೀವ್‌ಗಾಂಧಿ ವಸತಿ ನಿಗಮದ ವತಿಯಿಂದ 26,526 ನಿವೇಶನ ರಹಿತರನ್ನು ಗುರುತಿ ಸಲಾಗಿದೆ. ಈ ಪೈಕಿ 1,191 ನಿವೇಶನ ರಹಿತರಿಗೆ ಹಕ್ಕುಪತ್ರ ಹಂಚಿಕೆ ಮಾಡಲು 36.50 ಎಕರೆ ಸರ್ಕಾರಿ ಜಮೀನು ಮತ್ತು 23.05 ಎಕರೆ ಖರೀದಿ ಜಮೀನು ಸೇರಿದಂತೆ ಒಟ್ಟು 59.55 ಎಕರೆ ಜಮೀನು ಲಭ್ಯವಿದೆ ಎಂದು ತಿಳಿಸಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸಂಬಂಧಪಟ್ಟ ತಹಶೀಲ್ದಾರ್‌ಗಳೊಂದಿಗೆ ಚರ್ಚಿಸಿ ನಿವೇಶನ ರಹಿತರಿಗೆ ಹಕ್ಕುಪತ್ರ ಹಂಚಿಕೆ ಮಾಡಲು ಆದ್ಯತೆ ಮೇರೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
40 ಮನೆಗಳು ಮಂಜೂರು: ಲಿಡ್ಕರ್ ನಿಗಮದ ವತಿಯಿಂದ 2018-19ನೇ ಸಾಲಿನಲ್ಲಿ ಜಿಲ್ಲೆಗೆ 40 ಮನೆ ಗಳು ಮಂಜೂರಾಗಿದ್ದು, ಪ್ರತಿ ಮನೆಗೆ ಘಟಕ ವೆಚ್ಚ 2.50ಲಕ್ಷ ರೂ. ಇದ್ದು, ಅದರಲ್ಲಿ ನಿಗಮದ ವತಿ ಯಿಂದ 2.20 ಲಕ್ಷ ರೂ. ಈಗಾಗಲೇ ರಾಜೀವ್‌ಗಾಂಧಿ ವಸತಿ ನಿಗಮಕ್ಕೆ ಅನುದಾನ ನೀಡಲಾಗಿದೆ. ಉಳಿದ 30 ಸಾವಿರ ರೂ. ಫಲಾ ನುಭವಿಗಳ ವಂತಿಗೆ ಯಿಂದ ಪಡೆದು ಮನೆಗಳನ್ನು ನಿರ್ಮಿಸಲು ಫಲಾನು ಭವಿಗಳನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ ಎಂದರು.
ಅವಧಿಯೊಳಗೆ ಮನೆ ನಿರ್ಮಿಸಿ: ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಅನುಮೋದನೆ ಯಾಗಿರುವ ತಾಲೂಕುವಾರು ಪಟ್ಟಿಯನ್ನು ಸಭೆಯಲ್ಲಿ ನಿಗಮದ ವ್ಯವಸ್ಥಾಪಕರು ವಿವರಿಸಿದರು. ಸಂಬಂಧ ಪಟ್ಟ ತಾಲೂಕು ಪಂಚಾಯತಿಗಳಿಗೆ ತ್ವರಿತವಾಗಿ ಭೇಟಿ ನೀಡಿ ನಿಗದಿತ ಅವಧಿಯೊಳಗೆ ಮನೆಗಳ ನಿರ್ಮಾಣ ಮಾಡಲು ಕ್ರಮ ವಹಿಸುವಂತೆ ಲಿಡ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿ ಕಾರಿಗಳಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ವಸತಿ ಯೋಜನೆಗಳಲ್ಲಿ ಪ್ರಾರಂಭ ವಾಗದೇ ಇರುವ ಮನೆಗಳ ಬಗ್ಗೆ ಖುದ್ದಾಗಿ ಗ್ರಾಮ ಪಂಚಾ ಯತಿಗೆ ಭೇಟಿ ನೀಡಿ ಪರಿಶೀಲಿಸಲು ಹಾಗೂ ಪ್ರಗತಿ ಯಲ್ಲಿರುವ ಮನೆಗಳನ್ನು ನಿಗದಿತ ಅವಧಿ ಯೊಳಗೆ ಪೂರ್ಣಗೊಳಿಸಲು ಸೂಕ್ತ ಕ್ರಮಕೈಗೊಳ್ಳಲು ಸೂಚಿಸಿ ದರು. ವಸತಿ ಯೋಜನೆಗಳ ಬಗ್ಗೆ ಯೋಜನಾ ನಿರ್ದೇ ಶಕ ವೈ.ಮಹಾಂಕಾಳಪ್ಪ ಮಾಹಿತಿ ನೀಡಿದರು. ಸಭೆ ಯಲ್ಲಿ ಸಹಾಯಕ ಯೋಜನಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ಜಿಲ್ಲಾ ಮಟ್ಟದ ಅಧಿಕಾರಿ ಗಳು, ತಾಲೂಕುಮಟ್ಟದ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.