ಕೈಗಾರಿಕೋದ್ಯಮಿಗಳು ಉತ್ಪನ್ನದ ಪೇಟೆಂಟ್ ಹೊಂದಿ
ಕೃಷಿ ವಸ್ತುಪ್ರದರ್ಶನ ಸಮಾರೋಪದಲ್ಲಿ ಜಿಲ್ಲಾಧಿಕಾರಿ ಡಾ.ರಾಕೇಶ್‌ಕುಮಾರ್ ಸಲಹೆ • ಉತ್ಪನ್ನ ವೀಕ್ಷಿಸಿದ ಡೀಸಿ
Team Udayavani, Jul 22, 2019, 1:25 PM IST
ತುಮಕೂರು: ಸಣ್ಣ ಕೈಗಾರಿಕೋದ್ಯಮಿಗಳು ಹೊಸದಾಗಿ ಆವಿಷ್ಕರಿಸಿದ ಯಂತ್ರೋಪಕರಣಗಳ ಪೇಟೆಂಟ್ ಪಡೆದಿರಬೇಕೆಂದು ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‌ಕುಮಾರ್ ಸಲಹೆ ನೀಡಿದರು.
ಗಾಜಿನಮನೆಯಲ್ಲಿ ಭಾನುವಾರ ದಕ್ಷಿಣ ಭಾರತದ ಆಗ್ರೋ ಎಕ್ಸ್‌ಪೋ ಕೃಷಿ ಮತ್ತು ಪೂರಕ ವಸ್ತುಪ್ರದರ್ಶನದ ಸಮಾರೋಪದಲ್ಲಿ ಮಾತನಾಡಿದರು.
ಕೈಗಾರಿಕೋದ್ಯಮಿಗಳು ತಮ್ಮ ಉತ್ಪನ್ನದ ಪೇಟೆಂಟ್ ಪಡೆಯದಿರುವುದು ಮಳಿಗೆಗೆ ಭೇಟಿ ನೀಡಿದಾಗ ಕಂಡುಬಂತು. ಒಂದು ದೇಶವನ್ನು ವಿಶ್ವಮಟ್ಟದಲ್ಲಿ ಪರಿಗಣಿಸಬೇಕಾದರೆ ಹೆಚ್ಚಿನ ಸಂಖ್ಯೆಯಲ್ಲಿ ಪೇಟೆಂಟ್ ಆಗಿರುವ ಅಂಶವನ್ನೂ ಗಣನೆಗೆ ತೆಗೆದುಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಉದ್ಯಮಿಗಳು ಆವಿಷ್ಕಾರ ಮಾಡಿದ ಯಂತ್ರ, ಕೈಗಾರಿಕೆ, ಉತ್ಪನ್ನಗಳಿಗೆ ತಪ್ಪದೆ ಪೇಟೆಂಟ್ ಪಡೆಯಬೇಕು ಎಂದರು.
ಪೇಟೆಂಟ್ ಪಡೆಯಲು ಅವಕಾಶ: ಹೊಸದಾಗಿ ಆವಿಷ್ಕರಿಸಿದ ಯಂತ್ರಗಳ ಡಿಜೈನ್, ಪ್ರಾಸೆಸ್, ಪ್ರಾಡಕ್ಟ್ ಗಳಿಗೆ ಪೇಟೆಂಟ್ ಪಡೆಯಲು ಅವಕಾಶವಿದ್ದು, ಎಲ್ಲರೂ ತಪ್ಪದೇ ಪೇಟೆಂಟ್ ಹೊಂದುವ ಮೂಲಕ ದೇಶವನ್ನು ಅಭಿವೃದ್ಧಿ ಹಾದಿಯಲ್ಲಿ ಸಾಗಲು ನೆರವಾಗಬೇಕು. ಇಲ್ಲದಿದ್ದಲ್ಲಿ ಬೇರೆ ರಾಜ್ಯ, ರಾಷ್ಟ್ರದವರು ನಿಮ್ಮ ಉತ್ಪನ್ನದ ಕೃತಿಸ್ವಾಮ್ಯ ಬಳಸಿ ರಾಯಲ್ಟಿ ಲಾ» ಪಡೆಯುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಆವಿಷ್ಕಾರ ಮಾಡುವವರಿಗೆ ವೇದಿಕೆ ಕಲ್ಪಿಸಲು ಹಾಗೂ ಅವರಿಗೆ ಉತ್ತೇಜನ ನೀಡಲು ಇಂತಹ ಕಾರ್ಯಕ್ರಮ ಸಹಕಾರಿ. ಮಾರುಕಟ್ಟೆಯಲ್ಲಿ ದೊಡ್ಡ ಕೈಗಾರಿಕೆಗಳಿಗಿಂತ ಸಣ್ಣ ಕೈಗಾರಿಕೆಗಳಿಗೆ ಅವಕಾಶಗಳು ಕಡಿಮೆ. ಈ ನಿಟ್ಟಿನಲ್ಲಿ ಸಣ್ಣ ಕೈಗಾರಿಕಾ ಉತ್ಪನ್ನಗಳಿಗೆ ಇಲ್ಲಿ ಮಾರುಕಟ್ಟೆ ಒದಗಿಸಿರುವುದು ನಿಜಕ್ಕೂ ಶ್ಲಾಘನೀಯ ಎಂದು ತಿಳಿಸಿದರು.
ಪ್ರೋತ್ಸಾಹಧನ ಸೌಲಭ್ಯ: ದೇಶದಲ್ಲಿ ಶೇ.50ಕ್ಕಿಂತ ಹೆಚ್ಚು ಸಣ್ಣ ಕೈಗಾರಿಕೆಗಳಿದ್ದು, ಕೇಂದ್ರ, ರಾಜ್ಯ ಸರ್ಕಾರದಿಂದ ಸಣ್ಣ ಕೈಗಾರಿಕೆ ಹೊಸದಾಗಿ ಪ್ರಾರಂಭಿಸಲು ಹಲವಾರು ಯೋಜನೆಗಳಡಿ ಪ್ರೋತ್ಸಾಹಧನ ಸೌಲಭ್ಯ ಒದಗಿಸಲಾಗುತ್ತಿದೆ. ಹೊಸ ಹಾಗೂ ಯುವ ಕೈಗಾರಿಕೋದ್ಯಮಿಗಳು ಸರ್ಕಾರಿ ಸೌಲಭ್ಯ ಪಡೆದು ಭವಿಷ್ಯ ರೂಪಿಸಿಕೊಳ್ಳಬಹುದಾಗಿದೆ. ಉದ್ಯಮಿಗಳು ಸಣ್ಣ ಕೈಗಾರಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಲ್ಲಿ ಬೃಹತ್ ಕೈಗಾರಿಕೆಗಳಿಗಿಂತ ಹೆಚ್ಚಿನ ಆದಾಯ ಗಳಿಸುವ ಸಾಧ್ಯತೆಯಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಸಣ್ಣ ಕೈಗಾರಿಕೆಗಳಿಂದಲೇ ದೇಶಕ್ಕೆ ಹೆಚ್ಚಿನ ಆದಾಯ ದೊರೆಯುತ್ತಿತ್ತು. ಆದರೆ ಬ್ರಿಟಿಷರ ಆಳ್ವಿಕೆಯಲ್ಲಿ ಹೊಸ ತಂತ್ರಜ್ಞಾನ ಪರಿಚಯಿಸಿದ್ದರಿಂದ ಗುಡಿ ಕೈಗಾರಿಕೆಗಳಿಗೆ ಪ್ರೋತ್ಸಾಹ ಸಿಗದೆ ನಶಿಸಿ ಹೋದವು ಎಂದು ಬೇಸರಿಸಿದರು.
ದೇಶದಲ್ಲಿ ಪ್ರಸ್ತುತ ಶೇ.40ರಷ್ಟು ಸಣ್ಣ ಕೈಗಾರಿಕೋದ್ಯಮಿಗಳು ತಮ್ಮ ಉತ್ಪನ್ನಗಳನ್ನು ವಿದೇಶ ಗಳಿಗೆ ರಫ್ತು ಮಾಡುತ್ತಿರುವುದು ಉತ್ತಮ ಬೆಳ ವಣಿಗೆ. ಕೃಷಿ ಮತ್ತು ಸಣ್ಣ ಕೈಗಾರಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂಬ ಗಾಂಧೀಜಿ ಕನಸನ್ನು ಯುವ ಉದ್ಯಮಿಗಳು ನನಸಾಗಿಸಬೇಕು. ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳು ಅಭಿವೃದ್ಧಿ ಹೊಂದಿದಲ್ಲಿ ಮಾತ್ರ ದೇಶದ ಕೈಗಾರಿಕಾ ವಲಯದ ಬೆಳವಣಿಗೆ ಸಾಧ್ಯ ಎಂದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಎಲ್. ನಾಗರಾಜು, ಕಾಸಿಯಾ ಸಂಸ್ಥೆಯ ಅಧ್ಯಕ್ಷ ಆರ್. ರಾಜು, ಉಪಾಧ್ಯಕ್ಷ ಕೆ.ಬಿ.ಅರಸಪ್ಪ, ಪ್ರಧಾನ ಕಾರ್ಯದರ್ಶಿ ಎಂ.ಜಿ. ರಾಜ ಗೋಪಾಲ, ಖಜಾಂಚಿ ಎಸ್.ಎಂ. ಹುಸೇನ್, ಸೌತ್ ಆಗ್ರೋ ಎಕ್ಸ್‌ಪೋ ವೈಸ್ ಚೇರ್ಮನ್ ಬೋರೇಗೌಡ, ಸಂಚಾಲಕ ಸದಾಶಿವ ಆರ್. ಅಮಿನ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.