ಹೊರ ಜಿಲ್ಲೆಯವರು ಬಂದ್ರೆ ಮಾಹಿತಿ ನೀಡಿ

ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್‌ ಮನವಿ

Team Udayavani, Apr 18, 2020, 1:38 PM IST

ಹೊರ ಜಿಲ್ಲೆಯವರು ಬಂದ್ರೆ ಮಾಹಿತಿ ನೀಡಿ

ತುಮಕೂರು: ಜಿಲ್ಲೆಯಲ್ಲಿ ಕೋವಿಡ್‌-19ರ ಸೋಂಕಿತ ಶಿರಾ ತಾಲೂಕಿನ ಪಿ-84 ಸಂಪೂರ್ಣ ಗುಣಮುಖರಾಗಿದ್ದು ಈಗ ಯಾವುದೇ ಸೋಂಕಿತ ಪ್ರಕರಣ  ಜಿಲ್ಲೆಯಲ್ಲಿ ಇಲ್ಲ. ಜನರು ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದರ ಜೊತೆಗೆ ಬೆಂಗಳೂರು ಸೇರಿದಂತೆ ಬೇರೆ ಜಿಲ್ಲೆಗಳಿಂದ ಯಾರಾದರೂ ತಮ್ಮ ಮನೆಗೆ ಬಂದಿದ್ದರೆ ತಿಳಿಸಿ ಕೋವಿಡ್ -19 ಹರಡದಂತೆ ಜಾಗೃತಿ ವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‌ಕುಮಾರ್‌ ಮನವಿ ಮಾಡಿದ್ದಾರೆ. ಉದಯವಾಣಿಯೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಇಂದಿರಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದ ಕೋವಿಡ್ -19 ವೈರಸ್‌ ಸೋಂಕಿತ ಪಿ-84 ವ್ಯಕ್ತಿಯು ಸಂಪೂರ್ಣ ಗುಣಮುಖರಾಗಿ ಜಿಲ್ಲೆಗೆ ವಾಪಸ್‌ ಬಂದಿದ್ದು, ಅವರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿ ಇರಿಸಲು ತಿಳಿಸಲಾಗಿದೆ ಎಂದರು. ಈ ಸಂಬಂಧ ಶಿರಾ ನಗರಕ್ಕೆ ಭೇಟಿ ನೀಡಿ ಅವರ ಸಂಬಂಧಿಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಮುಂದಿನ 14 ದಿನಗಳವರೆಗೂ ಹೋಂ ಕ್ವಾರೆಂಟೈನ್‌ ಮಾಡಲಾಗಿದ್ದು, 2 ಬಾರಿಯೂ ಅವರ ಸಂಬಂಧಿಕರದ್ದು ನೆಗೆಟಿವ್‌ ಬಂದಿದ್ದು, ಅವರನ್ನು ಮನೆಗೆ ಕಳುಹಿಸಲಾಗಿದೆ ಎಂದು ಹೇಳಿದರು.

ಈ ಹಿಂದೆ ತಬ್ಲೀ ಜಮಾತ್‌ಗೆ ತೆರಳಿರುವವರ ಮಾದರಿಗಳನ್ನು ಕಳುಹಿಸಲಾಗಿದೆ. ಅಲ್ಲದೇ ಮೇ 3ರವರೆಗೆ ಲಾಕ್‌ಡೌನ್‌ ವಿಸ್ತರಿಸಿದ್ದು, ಸಾರ್ವಜನಿಕರು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ಜಿಲ್ಲೆಗೆ ಬೆಂಗಳೂರು ಸೇರಿದಂತೆ ಬೇರೆ ಜಿಲ್ಲೆಗಳಿಂದ ಯಾರಾದರೂ ಬಂದಿದ್ದರೆ ಮಾಹಿತಿ ನೀಡಬೇಕು ಎಂದು ನುಡಿದರು. ನಗರವೂ
ಸೇರಿದಂತೆ ವಿವಿಧ ಕಡೆಗಳಲ್ಲಿ ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಸಾರ್ವಜನಿಕರು ಇದಕ್ಕೆ ಸಹ ಕಾರ ನೀಡಬೇಕು, ಬೇರೆ ಜಿಲ್ಲೆಯಿಂದ ಬಂದವರಿಗೆ ಪರೀಕ್ಷೆ ಮಾಡಬೇಕು, ಜೊತೆಗೆ ಅವರನ್ನು 14 ದಿನ ಗಳ ವರೆಗೂ ಹೋಂ ಕ್ವಾರೆಂಟೈನ್‌ನಲ್ಲಿ ಇರಿಸಿ ಅವರ ರಕ್ತ ಮತ್ತು ಗಂಟಲು ಸ್ರಾವ ಪರೀಕ್ಷೆ ಮಾಡಿಸಿ ಕೊಳ್ಳಬೇಕು ಎಂದರು.

ಬೇರೆ ಜಿಲ್ಲೆಯಿಂದ ಬಂದವರಲ್ಲಿ ಸೋಂಕಿತ ವ್ಯಕ್ತಿ ಇದ್ದರೆ ಈಗ ಯಾವುದೇ ಸೋಂಕು ಪ್ರಕರಣ ಇಲ್ಲದ ಜಿಲ್ಲೆ ಯಲ್ಲಿ ಹೆಚ್ಚುವ ಸಾಧ್ಯತೆ ಇದೆ, ಆದ್ದರಿಂದ ಸಾರ್ವಜನಿಕರ ಮೇ 3 ರ ವರೆಗೂ ಮನೆಯಲ್ಲಿಯೇ ಇತುವಂತೆ ಮನವಿ ಮಾಡಿದರು. ಜಿಲ್ಲೆಗೆ ಬಂದಿರುವ 480 ಮಂದಿಯನ್ನು ತೀವ್ರ ನಿಗಾವಣೆಯಲ್ಲಿಡಲಾಗಿದ್ದು, ಈ ಪೈಕಿ 49 ಮಂದಿ ಯನ್ನು ಹೋಂ ಕ್ವಾರೆಂಟೈನ್‌ನಲ್ಲಿ ಇರಿಸಲಾಗಿದೆ. ಅವರು ಮನೆಯಿಂದ ಹೊರಬರಬಾರ ದೆಂದು ಸೂಚಿಸಲಾಗಿದೆ.  ಒಟ್ಟು 274 ಮಂದಿಯನ್ನು ಐಸೋಲೇಷನ್‌ನಲ್ಲಿ ಇಡಲಾಗಿದ್ದು, 321 ಜನರ 28 ದಿನ ಹೋಂ ಕ್ವಾರೆಂಟೈನ್‌ ಅವಧಿ ಪೂರ್ಣ ಗೊಂಡಿದೆ. ಈ ವರೆಗೂ 556 ಜನರ
ಗಂಟಲುಸ್ರಾವ ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, 384 ಮಾದರಿಗಳು ನೆಗೆಟಿವ್‌ ಎಂದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ರಾಕೇಶ್‌ ಕುಮಾರ್‌ ತಿಳಿಸಿದರು.

ಟಾಪ್ ನ್ಯೂಸ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

13-thirthahalli

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿ ಬಿಟ್ಟು ವ್ಯಕ್ತಿ ನದಿಗೆ; ಶಂಕೆ

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

13(2)

Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ

12

Udupi: ವಿಸಿಲ್‌ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್‌ ನಿರ್ವಹಣೆ!

15-uv-fusion

Paddana-Tulu folk songs: ಮರೆಯಾಗದಿರಲಿ ಪಾಡ್ದನನವೆಂಬ ಸಂಸ್ಕೃತಿಯ ಸಂಪರ್ಕ ಕೊಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.