ಕಾರ್ಮಿಕ ಕಾನೂನು ತಿದ್ದುಪಡಿಯಿಂದ ಅನ್ಯಾಯ: ಅಬ್ದುಲ್
ಸರ್ಕಾರಿ ಸಾರಿಗೆ ಬಸ್ ನಿಲ್ದಾಣ ಬಳಿ ಪ್ರತಿಭಟನೆ, ಕೇಂದ್ರದ ವಿರುದ್ಧ ಕಿಡಿ
Team Udayavani, Aug 3, 2019, 4:55 PM IST
ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕುಣಿಗಲ್ ಸರ್ಕಾರಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದವು.
ಕುಣಿಗಲ್: ಕೇಂದ್ರ ಸರ್ಕಾರವು ಕಾರ್ಮಿಕ ಕಾನೂನು ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಪದಾಧಿ ಕಾರಿಗಳು ಸರ್ಕಾರಿ ಸಾರಿಗೆ ಬಸ್ ನಿಲ್ದಾಣ ಬಳಿ ಪ್ರತಿಭಟನೆ ನಡೆಸಿದರು.
ಅಧ್ಯಕ್ಷ ಅಬ್ದುಲ್ ಮುನಾಫ್ ಮಾತನಾಡಿ, ಜು.23ರಂದು ಕೇಂದ್ರ ಸರ್ಕಾರ ವೇತನ ಮಸೂದೆ ಮತ್ತು ಔದ್ಯೋಗಿಕ ರಕ್ಷಣೆ, ಆರೋಗ್ಯ ಮತ್ತು ಕಾರ್ಯಸ್ಥಳದ ಸ್ಥಿತಿಗತಿ ಬಗ್ಗೆ ಲೋಕ ಸಭೆಯಲ್ಲಿ ಮಂಡಿಸಿದೆ. ಕಾರ್ಮಿಕ ಹಿತಾಸಕ್ತಿಯ ಕುರಿತು ಕೇಂದ್ರ ಸರ್ಕಾರ ಕಾರ್ಮಿಕ ಸಂಘಟನೆಗಳ ಆಕ್ಷೇಪಣೆ ಪೂರ್ವ ಗ್ರಹಗಳಿಂದ ನೋಡಲಾಗಿದೆ. ಕೇವಲ ಒಂದು ಕಂಪನಿಯಲ್ಲಿ ಇರಬೇಕಾದ ಕನಿಷ್ಠ ಕಾರ್ಮಿಕರ ಸಂಖ್ಯೆ ಏರಿಸುವುದರಿಂದಾಗಿ ಬಹುತೇಕ ಕಾರ್ಮಿಕರು, ಹಾಗೂ ಹಲವಾರು ಕಾರ್ಮಿಕರ ಕಾನೂನುಗಳ ಪ್ರಯೋಜನ ಪಡೆಯದಂತೆ ಮಾಡಲಾಗಿದೆ ಎಂದು ಆರೋಪಿಸಿದರು.
ಏಳನೇ ವೇತನ ಆಯೋಗ ಜ.1, 2016ರಿಂದ ಜಾರಿಗೆ ಬರುವಂತೆ ಕನಿಷ್ಠ ವೇತನವನ್ನು 18 ಸಾವಿರ ರೂ. ಎಂದು ಘೋಷಿಸಿತ್ತು. ಕೇಂದ್ರ ಕಾರ್ಮಿಕ ಸಚಿವ ಜು. 10ರಂದು ರಾಷ್ಟ್ರೀಯ ಕನಿಷ್ಠ ವೇತನವನ್ನು ಕೇವಲ ಮಾಸಿಕ 4, 628 ರೂ. ಎಂದು ಘೋಷಿಸಿರುವುದು ಕಾರ್ಮಿಕರ ಬದುಕು ಬೀದಿಗೆ ತಳ್ಳಿದೆ ಎಂದು ಕಿಡಿಕಾರಿದರು.
ಕಾರ್ಪೋರೇಟ್‌ಗಳ ಸೇವೆ: ಔದ್ಯೋಗಿಕ ರಕ್ಷಣೆ, ಆರೋಗ್ಯ ಮತ್ತು ಕಾರ್ಯಸ್ಥಳದ ಸ್ಥಿತಿ ಗತಿ ಮಸೂದೆ 13 ಪ್ರತ್ಯೇಕ ಕಾರ್ಮಿಕರ ಕಾನೂನುಗಳ ಬದಲಾಗಿ ಜಾರಿಗೆ ತರಲಾಗಿದೆ. ಇದು 10ಕ್ಕಿಂತ ಹೆಚ್ಚು ಕೆಲಸಗಾರರಿರುವ ಉದ್ಯಮಿಗಳಿಗೆ ಮಾತ್ರ ಅನ್ವಯವಾಗಿರುವುದರಿಂದ ಅಸಂಘಟಿತ ವಲಯ, ಹೊರಗುತ್ತಿಗೆ ಮತ್ತು ಗುಡಿ ಕೈಗಾರಿಕೆಗಳಲ್ಲಿ ದುಡಿಯುವ ದೇಶದ ಶೇ. 90ಕ್ಕೂ ಹೆಚ್ಚು ಕಾರ್ಮಿಕರು ಮಸೂದೆ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಈಗ ಜಾರಿಗೆ ತರಲು ಉದ್ದೇಶಿಸಿರುವ ಮಸೂದೆ ಈ ಹಿಂದೆ ಅನುಭವಿಸುತ್ತಿದ್ದ ಸವಲತ್ತು ಕಸಿದುಕೊಂಡು ಮಾಲೀಕರಿಗೆ ಪ್ರಯೋಜನವಾಗಲಿದೆ. ಕಾರ್ಮಿಕರ ಹಕ್ಕು ಕಿತ್ತುಕೊಂಡು ಕೇಂದ್ರ ಬಿಜೆಪಿ ಸರ್ಕಾರ ಕಾರ್ಪೋರೇಟ್‌ಗಳ ಸೇವೆಯಲ್ಲಿ ತೊಡಗಿದೆ ಎಂದು ಕಿಡಿಕಾರಿದರು.
ಜಾನ್ಸನ್ ಕಾರ್ಮಿಕ ಸಂಘದ ಅಧ್ಯಕ್ಷ ಎಚ್.ನರಸಿಂಹಮೂರ್ತಿ, ಸ್ಟೆಡ್ ಫಾರಂ ಎಂಪ್ಲಾಯಿಸ್ ಯೂನಿಯನ್ ಸಂಘದ ಅಧ್ಯಕ್ಷ ಶಂಕರ್, ಸಹಕಾರ್ಯದರ್ಶಿಗಳಾದ ರಾಮಣ್ಣ, ಕೃಷ್ಣ, ಸದಸ್ಯರಾದ ನಾಗೇಂದ್ರ, ಲಕ್ಷ ್ಮಣ್, ಎನ್.ಗೋಪಾಲ್, ಲೋಕೇಶ್, ಗಿರೀಶ್, ಸಿಐಟಿಯುನ ನಸೀಮಾಬಾನು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.