ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿಗೆ ಆಹ್ವಾನ: ಶ್ರೀವೀರಭದ್ರ ಶಿವಾಚಾರ್ಯಸ್ವಾಮೀಜಿ
Team Udayavani, Apr 27, 2022, 8:09 PM IST
ಕೊರಟಗೆರೆ : ಸಿದ್ದರಬೆಟ್ಟ ರಂಭಾಪುರಿ ಖಾಸಾ ಶಾಖಾ ಮಠದ 16ನೇ ವಾರ್ಷಿಕೋತ್ಸವ ಅಂಗವಾಗಿ ೫೧ ಜೋಡಿಗಳ ಉಚಿತ ಸಾಮೂಹಿ ವಿವಾಹ ಏರ್ಪಡಿಸಿದ್ದು ವಿವಾಹವಾಗ ಬಯಸುವ ವಧು-ವರರು ಹಾಗೂ ಪೋಷಕರು ವಧೂ ವರರ ಮಾಹಿತಿಯೊಂದಿಗೆ ದಾಖಲಾತಿ ಜೂ.2 ರ ಒಳಗೆ ಶ್ರೀಮಠಕ್ಕೆ ನೀಡುವಂತೆ ಶ್ರೀ ವೀರಭದ್ರಶಿವಾಚಾರ್ಯಸ್ವಾಮೀಜಿಗಳು ಕೋರಿದ್ದಾರೆ.
ಅವರು ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿ ಮಾತನಾಡಿ ಸದ್ಬಕ್ತರ ಆಶಯದೊಂದಿಗೆ ತಾಲೂಕಿನ ಸಿದ್ದರಬೆಟ್ಟದ ರಂಭಾಪುರಿ ಖಾಸಾ ಶಾಖಾ ಮಠ 16 ನೇ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮ ಎಂದಿನಂತೆ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ 51 ಜೋಡಿಗಳಿಗೆ ಉಚಿತ ಸಮೂಹಿಕ ವಿವಾಹ ಏರ್ಪಡಿಸಿದ್ದು, ವಿವಾಹವಾಗ ಬಯಸುವ ವಧು -ವರರು ಅಧವಾ ಅವರ ಪರವಾಗಿ ಪೋಷಕರು ಸಾಮೂಹಿ ವಿವಾಹಕ್ಕೆ ಅರ್ಹ ದಾಖಲಾತಿಗೊಂದಿಗೆ ಜೂ. 2 ರ ಒಳಗೆ ಶ್ರೀ ಮಠದಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ತಿಳಿಸಿದ್ದಾರೆ.
ವಿವಾಹ ವಾಗುವ ವಧುವಿಗೆ 18 ವರ್ಷ ಮತ್ತು ವರನಿಗೆ 21 ವರ್ಷಗಳಾಗಿರಬೇಕು, ವಿವಾಹವಾಗುವ ನೂತನ ವಧೂ-ವರರಿಗೆ ಶ್ರೀಮಠದಿಂದ ಮಾಂಗಲ್ಯ ಮತ್ತು ಬಟ್ಟೆಗಳನ್ನು ನೀಡಲಾಗುವುದು, ವಧುವರರ ಪ್ರಥಮ ವಿವಾಹವಾಗಿರಬೇಕು, ಜನ್ಮ ದಿನಾಂಕದ ಶಾಲಾ ದಾಖಲಾತಿ, ತಂದೆ-ತಾಯಿಯರ ಒಪ್ಪಿಗೆ ಪತ್ರ, ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ ಸೇರಿದಂತೆ ಇನ್ನಿತರ ದಾಖಲಾಗಿ ಕಡ್ಡಾಯವಾಗಿ ನೋಂದಣಿ ಸಮಯದಲ್ಲಿ ನೀಡಬೇಕು, ಹೆಚ್ಚಿನ ಮಾಹಿತಿಗಾಗಿ ಶ್ರೀಮಠದ ಸಿದ್ದಗಿರಿ ನಂಜುಂಡಸ್ವಾಮಿ ರವರನ್ನು ನೇರವಾಗಿ ಅಥವಾ ದೂರವಾಣಿ ಸಂಖ್ಯೆ 9449698466 ಸಂಪರ್ಕಿಸುವಂತೆ ಕೋರಿದ್ದಾರೆ.
ಪತ್ರಿಕಾ ಗೊಷ್ಠಿಯಲ್ಲಿ ಪ.ಪಂ.ಸದಸ್ಯರಾದ ಎ.ಡಿ.ಬಲರಾಮಯ್ಯ, ಗ್ರಾ.ಪಂ.ಅಧ್ಯಕ್ಷ ಮಲ್ಲಣ್ಣ, ತಾಲೂಕು ವೀರಶ್ಯವ ಸಂಘದ ಅಧ್ಯಕ್ಷ ಸಿದ್ದಮಲ್ಲಯ್ಯ, ಬಿಜೆಪಿ ತಾಲೂಕು ಅಧ್ಯಕ್ಷ ಎಸ್.ಪವನ್‌ಕುಮಾರ್, ಆರ್ಯವೈಶ್ಯ ಮಂಡಲಿಯ ಸಮಪಂಗಿರಾಮಯ್ಯಶ್ರೇಷ್ಠಿ, ಫ್ರೆಂಡ್ಸ್ ಗ್ರೂಪ್ ಅಧ್ಯಕ್ಷ ರವಿಕುಮಾರ್, ಸಮುದಾಯದ ಮುಖಂಡರುಗಳಾದ ಪರ್ವತಯ್ಯ, ಸಿದ್ದಗಿರಿ ನಂಜುಂಡಸ್ವಾಮಿ, ಸೋಮಶೇಖರ್, ಗಿರೀಶ್, ನಟರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.