ನೀರಿನ ಆಯವ್ಯಯ ಸಿದ್ಧಪಡಿಸುವುದು ಅತ್ಯವಶ್ಯಕ


Team Udayavani, Mar 5, 2020, 3:00 AM IST

neerina-aya

ತುಮಕೂರು: ನಿರಂತರ ಬರಗಾಲ ಎದುರಿಸುತ್ತ ಶೇ.70ರಷ್ಟು ಬರಪೀಡಿತವೆಂದು ಘೋಷಿಸಲ್ಪಡುತ್ತಿರುವ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಹಂತದಲ್ಲಿಯೇ ಜಲಾಮೃತ ಯೋಜನೆಯಡಿ ನೀರಿನ ಆಯವ್ಯಯ ಸಿದ್ಧಪಡಿಸುವುದು ಅತ್ಯವಶ್ಯಕ ಎಂದು ಜಿಪಂ ಸಿಇಒ ಶುಭಾ ಕಲ್ಯಾಣ್‌ ತಿಳಿಸಿದರು.

ಜಿಪಂ ಸಭಾಂಗಣದಲ್ಲಿ ಬುಧವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್‌ ಸಹಯೋಗದಲ್ಲಿ “ಗ್ರಾಮ ಪಂಚಾಯಿತಿ ಹಂತದಲ್ಲಿ ನೀರಿನ ಆಯವ್ಯಯ ಸಿದ್ಧಪಡಿಸುವಿಕೆ ಮತ್ತು ಬದಲಾಗುವ ಹವಾಮಾನಕ್ಕೆ ಹೊಂದಿಕೊಳ್ಳುವಿಕೆ’ ಕುರಿತು ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ನೀರಿನ ರಕ್ಷಣೆಯಾಗಲಿ: ತುಮಕೂರು ಜಿಲ್ಲೆಯಲ್ಲಿ ಬರ ಎನ್ನುವುದು ಸಾಮಾನ್ಯ ಸಂಗತಿಯಾಗಿದೆ. ಈ ವರ್ಷವೂ ಜಿಲ್ಲೆಯ 7 ತಾಲೂಕುಗಳು ಬರಪೀಡಿತವೆಂದು ಘೋಷಿತವಾಗಿವೆ. ಅದಕ್ಕಾಗಿ ಜಿಲ್ಲೆಯಲ್ಲಿ ಹಣಕಾಸು ಆಯವ್ಯಯದಂತೆ ನೀರಿನ ಆಯವ್ಯಯ ಸಿದ್ಧಪಡಿಸುವುದು ಅಗತ್ಯವಾಗಿದೆ. ನೀರು ಮೂಲಭೂತ ಅಗತ್ಯಗಳಲ್ಲಿ ಪ್ರಮುಖವಾದುದು. ಪ್ರತಿನಿತ್ಯದ ಚಟುವಟಿಕೆಗಳಲ್ಲಿ ಪ್ರತಿಯೊಂದಕ್ಕೂ ನೀರಿನ ಅವಶ್ಯಕತೆ ಇದೆ. ಆದ್ದರಿಂದ ಯೋಜನೆ ರೂಪಿಸಿ ನೀರಿನ ರಕ್ಷಣೆಯಾಗಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಜಲಾನಯನ ಅಭಿವೃದ್ಧಿಗೆ ಹಲವು ಯೋಜನೆಗಳು ಜಾರಿಯಲ್ಲಿವೆ. ಜಲಾಮೃತ ಯೋಜನೆಯಡಿ 15 ಗ್ರಾಮ ಪಂಚಾಯಿ ಆಯ್ಕೆ ಮಾಡಲಾಗಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರತಿಯೊಬ್ಬರ ವೈಯಕ್ತಿಕ ಆಸಕ್ತಿಯಿಂದ ವಾಟರ್‌ ಸೆಕ್ಯೂರಿಟಿ ಪ್ಲಾನ್‌, ಕನ್ಸರೆವೇಶನ್‌ ಆ್ಯಂಡ್‌ ಬಜೆಟಿಂಗ್‌ ಆಗಬೇಕು. ಜಿಲ್ಲೆಯಲ್ಲಿ ಅನುಷ್ಠಾನವಾಗಿರುವ ಹಲವು ಯೋಜನೆಗಳಲ್ಲಿರುವ ಇತಿಮಿತಿಗಳ ಬಗ್ಗೆ ಚರ್ಚಿಸಿ ಜಲಾಮೃತ ಯೋಜನೆ ಅಭಿವೃದ್ಧಿಪಡಿಸಬೇಕು. ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗಳ ಸಹಕಾರದಲ್ಲಿ ನೀರಿನ ಆಯವ್ಯಯ ಸಿದ್ಧವಾಗಿ ಜಿಲ್ಲೆಗೆ ಅನುಕೂಲವಾಗಬೇಕು ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಗ್ರಾಮ ಪಂಚಾಯಿತಿ ಪಿಡಿಒಗಳು ಆಸಕ್ತಿಯಿಂದ ಭಾಗವಹಿಸಿ ಪ್ರಯೋಜನ ಪಡೆದು, ನೀರಿನ ಆಯವ್ಯಯ ಸಿದ್ಧಪಡಿಸುವ ಕಾರ್ಯದಲ್ಲಿ ಪ್ರತಿಯೊಬ್ಬರೂ ವೈಯಕ್ತಿಕವಾಗಿ ತೊಡಗಿಸಿಕೊಂಡು ಜಲಾಮೃತ ಯೋಜನೆ ಅಭಿವೃದ್ಧಿಪಡಿಸಬೇಕು. ಬುದ್ಧಿಜೀವಿಯಾದ ಮನುಷ್ಯನು ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ಕಲ್ಪಿಸಬೇಕು ಎಂದು ಸೂಚಿಸಿದರು.

ವಾಟರ್‌ ಸೆಕ್ಯೂರಿಟಿ ಪ್ಲ್ಯಾನ್‌: ಜಲಾಮೃತ ಯೋಜನೆ ನಿರ್ದೇಶಕ ಬಿ.ನಿಜಲಿಂಗಪ್ಪ ಮಾತನಾಡಿ, ನೀರಿನ ಆಯವ್ಯಯ ಸಿದ್ಧಪಡಿಸಲು ಗ್ರಾಮ ಪಂಚಾಯಿತಿ ಹಾಗೂ ಹೋಬಳಿ ಮಟ್ಟದಲ್ಲಿ ಪೋರ್ಟಲ್‌ ಹಾಗೂ ಕ್ಷೇತ್ರ ಭೇಟಿ ಮಾಡಿ ನೀರಿನ ಲಭ್ಯತೆ ಪ್ರಮಾಣ ಹಾಗೂ ನೀರಿನ ಬೇಡಿಕೆ ಬಗ್ಗೆ ಮಾಹಿತಿ ಸಂಗ್ರಹಿಸಿ ಇದರ ಆಧಾರದ ಮೇಲೆ ಮಳೆ ನೀರು ಕೊಯ್ಲು, ಮಣ್ಣಿನ ತೇವಾಂಶ ಹಿಡಿದಿಟ್ಟುಕೊಳ್ಳುವ ಮಾರ್ಗೋಪಾಯಗಳ ಮೂಲಕ ವಾಟರ್‌ ಸೆಕ್ಯೂರಿಟಿ ಪ್ಲ್ಯಾನ್‌ ಮಾಡಲಾಗುವುದು ಎಂದರು. ಅಟಲ್‌ ಭೂಜಲ್‌, ಜಲಾಮೃತ ಹಾಗೂ ಎಂಜಿ ನರೇಗಾ ಯೋಜನೆ ಸೇರಿದರೆ ನೀರಿನ ಆಯವ್ಯಯ ಸಿದ್ಧಪಡಿಸಲು ಅನುವಾಗುತ್ತದೆ ಎಂದು ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.

ನೀರಿನ ಉಳಿತಾಯ ಮಾಡಿ ಸಮೃದ್ಧಿಯಾಗಿ ಇರುವಂತೆ ನೋಡಿಕೊಂಡಲ್ಲಿ ಬರ ಎದುರಿಸುವ ಪರಿಸ್ಥಿತಿ ಬರುವುದಿಲ್ಲ. ಹೊಸದಾಗಿ ಬೋರ್‌ವೆಲ್‌ ತೆಗೆಯುವ ಬದಲು ಇರುವ ಬೋರ್‌ವೆಲ್‌ಗ‌ಳ ಜಲ ಮರುಪೂರಣ ಮಾಡುವ ಕೆಲಸ ಆಗಬೇಕು. ಇತ್ತೀಚಿನ ಜೀವನಶೈಲಿಯಿಂದ ನೀರು ಹೆಚ್ಚು ಪೋಲಾಗುತ್ತಿರುವುದನ್ನು ತಪ್ಪಿಸಬೇಕು. ಜಲಾಮೃತ ಯೋಜನೆ ಅಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ. ನೀರಿನ ಸಮಸ್ಯೆ ಕಡಿಮೆಯಾಗಲು ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.

ಜಲಾಮೃತ ಯೋಜನೆಯ ಜಲಾನಯನ ಸಂಯೋಜಕ ಡಾ.ಎನ್‌.ಕೆ. ರಾಜೇಶ್‌ಕುಮಾರ್‌, ಸಂಯೋಜಕ ನರಸಿಂಹಯ್ಯ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ(ಅಭಿವೃದ್ಧಿ) ಟಿ.ಕೆ. ರಮೇಶ್‌, ದಿಶಾ ಸಮಿತಿಯ ಸದಸ್ಯ ಕುಂದರನಹಳ್ಳಿ ರಮೇಶ್‌, ಸಂಬಂಧಪಟ್ಟ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲೆಯ ಆಯ್ದ ಗ್ರಾಮ ಪಂಚಾಯಿತಿಯ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯ ನೀರಿನ ಮೂಲ ಮಳೆಯಾಗಿದೆ. ಮಳೆ ನೀರು ಪರಿಣಾಮಕಾರಿ ಹಿಡಿದಿಟ್ಟುಕೊಂಡು ಬಳಸಬೇಕು. ಬಿದ್ದ ಮಳೆ ನೀರು ಪಕ್ಕದ ಜಮೀನಿಗೂ ಬಿಡದೇ ಹಿಡಿದಿಟ್ಟುಕೊಳ್ಳಬೇಕು. ನೀರು ಮೇಲ್ಮೆ„ಯಲ್ಲಿ ಉಳಿತಾಯ ಮಾಡಿದರೆ ಅದು ದಿನಕಳೆದಂತೆ ಕಡಿಮೆಯಾಗುತ್ತದೆ. ಆದರೆ ಅಂತರ್ಜಲದಲ್ಲಿ ಉಳಿತಾಯ ಮಾಡಿದರೆ ಸಮಸ್ಯೆಯಾಗುವುದಿಲ್ಲ ಆದ್ದರಿಂದ ನೀರು ಅಂತರ್ಜಲಕ್ಕೆ ಕಳಿಸಬೇಕು.
-ಕಾಂತರಾಜ್‌, ಅಟಲ್‌ ಭೂಜಲ ಯೋಜನೆ ನಿರ್ದೇಶಕ

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.