“ಕೈ’ನಿಂದ ಸಾಮಾಜಿಕ ನೆಲೆಗಟ್ಟಿನಲ್ಲಿ ದೇಶ ಅಭಿವೃದ್ಧಿ
Team Udayavani, Apr 6, 2022, 2:54 PM IST
ತುಮಕೂರು: ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ. ಪಂಚವಾರ್ಷಿಕ ಯೋಜನೆ ಗಳ ಮೂಲಕ ಕೃಷಿ, ಕೈಗಾರಿಕೆ, ಹೈನುಗಾರಿಕೆ ಮುಂತಾದ ಯೋಜನೆಗಳ ಮೂಲಕ ಇಡೀ ರಾಷ್ಟ್ರಕ್ಕೆ ಸ್ವಾವಲಂ ಬನೆಯ ಪಾಠ ಕಲಿಸಿದ್ದು ಬಾಬು ಜಗಜೀವನ್ ರಾಂ ಎಂದು ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ಮಖಂಡ ಡಾ.ಎಸ್.ರಫೀಕ್ ಅಹಮದ್ ತಿಳಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಂ ಅವರ 115ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಇಡೀ ದೇಶವನ್ನು ಕಾಂಗ್ರೆಸ್ ಸಾಮಾಜಿಕ ನೆಲೆಗಟ್ಟಿನ ಮೇಲೆ ಅಭಿವೃದ್ಧಿಪಡಿಸಿತ್ತು. ಆದರೆ ಇಂದು ದೇಶದಲ್ಲಿ ಅಭಿವೃದ್ಧಿ ಗಿಂತ ಅರಾಜಕತೆ ತೀವ್ರವಾಗಿದೆ ಎಂದು ಆರೋಪಿಸಿದರು.
ನಾವೆಲ್ಲರೂ ಒಗ್ಗೂಡಬೇಕಿದೆ: ಅಭಿವೃದ್ಧಿ ವಿಚಾರ ವಾಗಿ ಅಂದು ಸ್ಥಾಪನೆಯಾದ ಸಾರ್ವಜನಿಕ ಉದ್ಯಮ ಗಳನ್ನು ಇಂದಿನ ಮೋದಿ ಸರ್ಕಾರ ಮಾರಾಟ ಮಾಡಿ, ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುವಂತೆ ಮಾಡಿದೆ. ಇದರ ವಿರುದ್ಧ ನಾವೆಲ್ಲರೂ ಒಗ್ಗೂಡ ಬೇಕಿದೆ ಎಂದರು.
ಸ್ವಾವಲಂಬನೆ ರೂವಾರಿ: ಕೌಶಲ್ಯಾಭಿವೃದ್ಧಿ ಮಂಡ ಳಿಯ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ಮಾತ ನಾಡಿ, ದೇಶ ಇಂದು ಆಹಾರ ವಿಚಾರದಲ್ಲಿ ಸ್ವಾವ ಲಂಬನೆ ಸಾಧಿಸಿದ್ದರೆ, ಅದಕ್ಕೆ ಬಾಬೂಜಿ ಅವರ ಕೊಡುಗೆ ಅಪಾರ. ಕೃಷಿ ಸಚಿವರಾಗಿ, ನೀರಾವರಿ ಸಚಿವ ರಾಗಿ ಹೈಬ್ರಿಡ್ ತಳಿಗಳು, ನೀರಾವರಿಗಾಗಿ ಡ್ಯಾಂಗಳ ನಿರ್ಮಾಣ ಮಾಡಿ, ದೇಶದ ಬಡ ಜನತೆ ಹಸಿವಿನಿಂದ ನರಳುವುದನ್ನು ತಪ್ಪಿಸಿದರು ಎಂದು ತಿಳಿಸಿದರು.
ಪಂಚವಾರ್ಷಿಕ ಯೋಜನೆಗಳ ಜೊತೆಗೆ, ಇಂದಿರಾ ಗಾಂಧಿ ಅವರ 20 ಅಂಶಗಳ ಕಾರ್ಯಕ್ರಮದ ಮೂಲಕ ದೇಶದಿಂದ ಬಡತನವನ್ನು ಕಿತ್ತೂಗೆಯಲು ಹಗಲಿರುಳು ಶ್ರಮಿಸಿದವರು ಬಾಬು ಜಗಜೀವನ್ ರಾಂ. ಅವರ ಅಡಳಿತ ಎಲ್ಲರಿಗೂ ಮಾದರಿ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಮಾತ ನಾಡಿ, ಚಿಕ್ಕ ವಯಸ್ಸಿನಲ್ಲಿಯೇ ರಾಜಕೀಯ ಪ್ರವೇಶಿಸಿ ನೆಹರು ಸಂಪುಟದಲ್ಲಿ ಕಿರಿಯ ವಯಸ್ಸಿನಲ್ಲಿಯೇ ಸಚಿವರಾಗಿ ಮಹತ್ವದ ಖಾತೆಗಳನ್ನು ನಿಭಾಯಿಸಿದ ಬಾಬು ಜಗಜೀವನ್ ರಾಂ, ನೀರಾವರಿ, ಆಹಾರ ಭದ್ರತೆಗೆ ಒತ್ತು ಕೊಟ್ಟವರು. ಅನ್ಯ ಕಾರಣಕ್ಕೆ ಕಾಂಗ್ರೆಸ್ ತೊರೆದು ಬೇರೆ ಪಕ್ಷ ಕಟ್ಟಿ, ಕೊನೆಗೆ ಕಾಂಗ್ರೆಸ್‌ಗೆ ಮರಳಿದ ಬಾಬೂಜಿ, ಕಾಂಗ್ರೆಸ್‌ನಿಂದ ಮಾತ್ರ ದಲಿತರಿಗೆ ರಕ್ಷಣೆ ಎಂಬುದನ್ನು ಅಂದೇ ಮನ ಗಂಡಿದ್ದರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಗಳಾದ ವಿಜಯಕುಮಾರ್, ಆಟೋ ರಾಜು, ಕೆಂಪಣ್ಣ, ಮುಖಂಡರಾದ ಸಿದ್ದಲಿಂಗೇಗೌಡ, ನ್ಯಾತೇಗೌಡ, ಸುಜಾತ, ನಾಗವೇಣಿ, ಮಂಜುನಾಥ್, ಚಂದ್ರಶೇಖರ್ ಗೌಡ, ಸಂಜೀವ್ ಕುಮಾರ್, ಶಿವಾಜಿ, ನಟರಾಜು, ಶೆಟ್ಟಾಳಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾಂಗ್ರೆಸ್ ದ್ವಂದ್ವ ನಿಲುವು ಸರಿಯಲ್ಲ: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆಂಚಮಾರಯ್ಯ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷ ಅಲ್ಪಸಂಖ್ಯಾತರ ಹೆಗಲ ಮೇಲೆ ಬಂದೂಕು ಇಟ್ಟು, ದಲಿತರನ್ನು ಹೊಡೆಯಲು ಹೊರಟಿದೆ. ಈ ಬಗ್ಗೆ ಎಲ್ಲಾ ಪಕ್ಷದಲ್ಲಿರುವ ದಲಿತ ರಾಜಕಾರಣಿ ಗಳು ಆತ್ಮಾವಲೋಕನ ಮಾಡಿಕೊಳ್ಳ ಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ಕೋಮುಭಾವನೆ ಕೆರಳಿಸುವ ಕೆಲಸವನ್ನು ವ್ಯವಸ್ಥಿತವಾಗಿ ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಗಳು ಮಾಡುತ್ತಿದ್ದರೂ, ಕಾಂಗ್ರೆಸ್ ಮೌನಕ್ಕೆ ಶರಣಾಗಿರುವುದು ಸರಿಯಲ್ಲ. ಈ ರೀತಿಯ ದ್ವಂದ್ವ ನಿಲುವನ್ನು ತಕ್ಷಣವೇ ಕೈಬಿಟ್ಟು, ಅಲ್ಪಸಂಖ್ಯಾತರ ಮೇಲಿನ ದಾಳಿಯನ್ನು ತಡೆಯಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.