ಕೊರಟಗೆರೆ: ನದಿಯಲ್ಲಿ ಕೊಚ್ಚಿ ಹೋಗಿದ್ದ ಚಾಲಕನ ಮೃತದೇಹ ಪತ್ತೆ
Team Udayavani, Sep 6, 2022, 8:40 PM IST
ಕೊರಟಗೆರೆ: ತಾಲೂಕಿನ ವಡ್ಡಗೆರೆ ಗ್ರಾಪಂ ಗೆ ಸೇರಿದ ಮಲಪನಹಳ್ಳಿ ಜಯಮಂಗಲಿ ನದಿಯಲ್ಲಿ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ವಿ ಹೋಗಿದ್ದ ಟಾಟಾ ಏಸ್ ವಾಹನ ಹಾಗೂ ಚಾಲಕ ನದಿಯಲ್ಲಿ ಕೊಚ್ಚಿ ಹೋಗಿದ್ದರು. ಸತತ 24ಗಂಟೆಯಿಂದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ ಬಳಿಕ ವಾಹನ ಮತ್ತು ಚಾಲಕನ ಶವ ಪತ್ತೆಯಾಗಿದೆ.
ಅನಂತಪುರ ಜಿಲ್ಲೆಯ ಸೋಮಂದಪಲ್ಲಿ ಗ್ರಾಮದ ನಿವಾಸಿ ತಿಪ್ಪರಾಜು(42) ಮೃತ ದುರ್ದೈವಿ.
ಕೊರಟಗೆರೆ ತಾಲ್ಲೂಕಿನ ವಡ್ಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಪ್ಪನಹಳ್ಳಿ ಗ್ರಾಮದ ಜಯಮಂಗಲಿ ನದಿಯಲ್ಲಿ ಘಟನೆ ನಡೆದಿದ್ದು, ಅಗ್ನಿಶಾಮಕ ಸಿಬಂದಿ, ಕೊರಟಗೆರೆ ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರು ನಿರಂತರವಾಗಿ ಕಾರ್ಯಾಚರಣೆ ನಡೆಸಿದ್ದು, ಕೊನೆಗೂ ವಾಹನ ಹಾಗೂ ಚಾಲಕನ ಶವ ಪತ್ತೆಯಾಗಿದ್ದು, ಮೃತದೇಹವನ್ನು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.
ಇದನ್ನೂ ಓದಿ:ಬಿಜೂರು: ಹಳಿ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ರೈಲು ಢಿಕ್ಕಿ; ಗಂಭೀರ
ಸ್ಥಳಕ್ಕೆ ತುಮಕೂರು ಜಿಲ್ಲಾಧಿಕಾರಿ ವೈಎಸ್ ಪಾಟೀಲ್, ಮಧುಗಿರಿಯ ಎ ಸಿ ಸೋಮಪ್ಪ ಕಡಕೋಳ ಹಾಗೂ ಕೊರಟಗೆರೆ ತಹಶೀಲ್ದಾರ್ ನಾಹಿದಾ ಜಮ್ ಜಮ್ ಸೇರಿದಂತೆ ಸ್ಥಳೀಯ ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ, ಸರ್ಕಾರದ ವತಿಯಿಂದ ಕುಟುಂಬಕ್ಕೆ ಪರಿಹಾರ ಕೊಡಿಸುವ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.