ಕೊರಟಗೆರೆ: ಕಲ್ಲುಗಣಿಗಾರಿಕೆ ವಿರುದ್ಧ ರಸ್ತೆ ತಡೆದು ಬೃಹತ್ ಪ್ರತಿಭಟನೆ

Team Udayavani, Feb 24, 2022, 2:52 PM IST

19protest

ಕೊರಟಗೆರೆ: ತಾಲ್ಲೂಕಿನ ಇರಕಸಂದ್ರ ಕಾಲೋನಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ನೀಲಗೊಂಡನಹಳ್ಳಿ, ಎಲೆರಾಂಪುರ ಗ್ರಾಪಂ, ಮಹಿಳಾ ಸಂಘಗಳಿಂದ ಹಾಗೂ ವಿದ್ಯಾರ್ಥಿಗಳಿಂದ ಕಲ್ಲುಗಣಿಗಾರಿಕೆ ವಿರುದ್ಧ ರಸ್ತೆ ತಡೆದು ಬೃಹತ್ ಪ್ರತಿಭಟನೆಯನ್ನು ಮಾಡಿ ತಹಶೀಲ್ದಾರ್ ನಹೀದಾ ಜಮ್‌ಜಮ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಸಿದ್ಧರಬೆಟ್ಟದ ರಂಭಾಪುರಿ ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ಶ್ರೀಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ಪ್ರತಿಭಟನೆಯ ವೇಳೆ ಮಾತನಾಡಿದ ಅವರು, ಕಲ್ಲುಗಣಿಗಾರಿಕೆ ವಿರುದ್ಧ ಇಂದು ಪ್ರತಿಭಟನೆ ಮಾಡಲಾಗುತ್ತಿದೆ. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನೀಲಗೊಂಡನಹಳ್ಳಿ ಹಾಗೂ ಎಲೆರಾಂಪುರ ಗ್ರಾಪಂ ವ್ಯಾಪ್ತಿಯ ರೈತರಿಗೆ, ವಿದ್ಯಾರ್ಥಿಗಳಿಗೆ ಮತ್ತು ಜನಸಾಮಾನ್ಯರಿಗೆ ಆಗುವಂತಹ ಅನಾಹುತಗಳನ್ನು ತಡೆಯಲು ಈ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ. ಈ ಭಾಗಗಳಲ್ಲಿ ಕಲ್ಲುಗಣಿಗಾರಿಕೆ ಮಾಡಲು ಸರ್ಕಾರ ಅನುಮತಿ ನೀಡಿದ್ದು. ಈ ಭಾಗದ ಶಾಲೆಗಳಲ್ಲಿ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ಗಣಿಗಾರಿಕೆಯನ್ನು 600 ಮೀ ಹತ್ತಿರದಲ್ಲಿ, ಕೆರೆಯ ಪಕ್ಕದಲ್ಲಿ ಮತ್ತು ಮಠದ ಪಕ್ಕದಲ್ಲಿ ಈ ಗಣಿಕಾರಿಕೆ ಮಾಡುತ್ತಿದ್ದು ಇದರಿಂದ ವಿದ್ಯಾರ್ಥಿಗಳಿಗೆ, ರೈತರಿಗೆ, ಮತ್ತು ಸ್ಥಳೀಯ ನಿವಾಸಿಗಳಿಗೆ ಅನಾಹುತಗಳು ಸಂಭವಿಸುತ್ತವೆ. ಸರ್ಕಾರ ಕಲ್ಲುಗಣಿಗಾರಿಕೆಗೆ ನೀಡಿರುವಂತಹ ಅನುಮತಿಯನ್ನು ಕೂಡಲೇ ಹಿಂಪಡೆದು ಈ ಭಾಗದ ರೈತರಿಗೆ, ವಿದ್ಯಾರ್ಥಿಗಳಿಗೆ, ಸ್ಥಳೀಯರಿಗೆ ಅನುಕೂಲ ಮಾಡಿಕೊಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.

ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಶ್ರೀ ಶ್ರೀ ಹನುಮಂತನಾಥ ಸ್ವಾಮೀಜಿ ಮಾತನಾಡಿ, 2018 ರಿಂದಲೂ ಈ ಕಲ್ಲುಗಣಿಗಾರಿಕೆಯನ್ನು ಪ್ರಾರಂಭಿಸಲು ಯೋಜನೆ ರೂಪಿಸಿಕೊಳ್ಳುತ್ತಾ ಬಂದಿದ್ದಾರೆ. ಗಣಿಗಾರಿಕೆಯನ್ನು ನಿಲ್ಲಿಸಲು ತಹಶೀಲ್ದಾರ್ ಮತ್ತು ಜಿಲ್ಲಾಧಿಕಾರಿ ಇಬ್ಬರು ಎಸಿ ಯವರಿಗೆ ಮನವಿ ಪತ್ರ ನೀಡಿದರು ಯಾವುದೇ ಪ್ರಯೋಜನವಾಗಿಲ್ಲ. ಇಂದು ರೈತ ಸಂಘಟನೆಗಳಿಂದ ಮತ್ತು ವಿದ್ಯಾರ್ಥಿಗಳಿಂದ, ಮೂರು ಪಕ್ಷಗಳ ರಾಜಕೀಯ ಮುಖಂಡರಗಳು ಮತ್ತು ಸ್ವಾಮೀಜಿಗಳ ಸಮ್ಮುಖದಲ್ಲಿ ಇಂದು ಬೃಹತ್ ಪ್ರತಿಭಟನೆ ಮಾಡಲಾಯಿತು. ಕಲ್ಲುಗಣಿಗಾರಿಕೆಯನ್ನು ನಿಲ್ಲಿಸುವಂತೆ ಸಂಬಂಧ ಪಟ್ಟ ಇಲಾಖೆಗಳು ಕೂಡಲೇ ಆದೇಶಿಸಿ ಈ ಭಾಗದ ಪ್ರತಿಯೊಬ್ಬರಿಗೂ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡರು.

ಕೊರಟಗೆರೆ: ಕಲ್ಲುಗಣಿಗಾರಿಕೆ ವಿರುದ್ಧ ರಸ್ತೆ ತಡೆದು ಬೃಹತ್ ಪ್ರತಿಭಟನೆ

ಮಾಜಿ ಶಾಸಕ ಪಿಆರ್ ಸುಧಾಕರ್‌ಲಾಲ್ ಮಾತನಾಡಿ, ನೀಲಗೊಂಡನಹಳ್ಳಿ ಮತ್ತು ಎಲೆರಾಂಫುರ ಗ್ರಾಪಂ ವ್ಯಾಪ್ತಿಯ ಭಾಗಗಳಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆಯನ್ನು ಕೂಡಲೇ ನಿಲ್ಲಿಸುವಂತೆ ಸರ್ಕಾರ ಆದೇಶಿಸಬೇಕು. ಈ ಭಾಗದಲ್ಲಿ ಹೆಚ್ಚಿನದಾಗಿ ಶಾಲೆಗಳಿವೆ ಮತ್ತು ದೇವಲಾಯಗಳಿವೆ, ರೈತರ ಜಮೀನುಗಳಿವೆ ಈ ಕಲ್ಲುಗಣಿಕಾರಿಕೆ ಪ್ರಾರಂಭಿಸುವುದರಿಂದ ಅನಾಹುತಗಳು ಹೆಚ್ಚಾಗಿ ಸಂಭವಿಸುತ್ತವೆ ಕೂಡಲೇ ಸರ್ಕಾರ ಗಣಿಗಾರಿಕೆಯನ್ನು ನಿಲ್ಲಿಸುವಂತೆ ಆದೇಶಿಸದೆ ಹೋದರೆ ಮುಂದಿನ ದಿನಗಳಲ್ಲಿ ಪರಮ ಪೂಜ್ಯರ ಸಮ್ಮುಖದಲ್ಲಿ ಮತ್ತು ರೈತರೊಂದಿಗೆ ವಿದ್ಯಾರ್ಥಿಗಳೊಂದಿಗೆ, ಮಹಿಳೆಯರೊಂದಿಗೆ ಈ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು.

ತಹಶೀಲ್ದಾರ್ ನಹೀದ್ ಜಮ್‌ಜಮ್ ಅವರು ಭೇಟಿ ಕೊಟ್ಟು ರೈತರಿಂದ ಮನವಿ ಪತ್ರ ಸ್ವೀಕರಿಸಿ ನಂತರ ಮಾತನಾಡಿದ ಅವರು, ಎಲೆರಾಂಪುರ ಮತ್ತು ನೀಲಗೊಂಡನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದು ಮೇಲಾಧಿಕಾರಿಗಳ ಗಮನಕ್ಕೆ ತರುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಂಗನಹಳ್ಳಿ ಕಾಶಿ ಅನ್ನಪೂರ್ಣೆಶ್ವರಿ ಸಂಸ್ಥಾನದ ಶ್ರೀ ಬಸವಲಿಂಗ ಮಹಾಸ್ವಾಮಿಗಳು, ಹನುಮಂತಪುರದ ನಾಗೇಂದ್ರ ಮಹಾಸ್ವಾಮಿಗಳು, ಕೋಳಾಲ ಜಿಪಂ ಸದಸ್ಯ ಶಿವರಾಮಯ್ಯ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಅಶ್ವತ್ಥ್ ನಾರಾಯಣ್, ಅರಕೆರೆ ಶಂಕರ್, ಎಪಿಎಂಸಿ ಅಧ್ಯಕ್ಷ ವೆಂಕಟೇಶ್ ಮೂರ್ತಿ, ಬೋರಣ್ಣ, ನೀಲಗೊಂಡನಹಳ್ಳಿ ಮಾಜಿ ಅಧ್ಯಕ್ಷ ನಾಗರಾಜ್, ಉಪಾಧ್ಯಕ್ಷ ಕಿರಣ್‌ಕುಮಾರ್, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಶ್ರೀನಿವಾಸ್, ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಮೂರ್ತಿ, ಸುರೇಶ್, ತಿಲಕ್, ರಮ್ಯ, ಹನುಮಂತರಾಜು, ಮಂಗಳಗೌರಮ್ಮ, ವೆಂಕಟೇಶ್ ರೈತ ಮುಖಂಡರುಗಳು, ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

4-pavagada

Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು

1-pavagada

Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.