ಕೊರಟಗೆರೆ : ರಸ್ತೆ ಇಲ್ಲದೆ ಅನಾರೋಗ್ಯ ಪೀಡಿತ ವೃದ್ಧೆಯನ್ನು ಹೊತ್ತೊಯ್ದರು

ಯೋಜನೆಗಳು ಹಳ್ಳ ಹಿಡಿದಿರುವುದಕ್ಕೆ ನೇರ ಸಾಕ್ಷಿ

Team Udayavani, Oct 7, 2022, 8:13 PM IST

1-sd-dada

ಕೊರಟಗೆರೆ : ಅನಾರೋಗ್ಯಕ್ಕೆ ಗುರಿಯಾಗಿದ್ದ ವೃದ್ಧೆ ಯೊಬ್ಬರಿಗೆ ಆಸ್ಪತ್ರೆಗೆ ಕರೆದೊಯ್ಯಲು 108 ಆಂಬುಲೆನ್ಸ್ ಬರಲು ರಸ್ತೆ ಇಲ್ಲದೆ ಅರ್ಧ ಕಿಲೋಮೀಟರ್ ಗೂ ಹೆಚ್ಚು ದೂರ ಕೈಯಲ್ಲಿಎತ್ತಿಕೊಂಡೇ ಸಾಗಿಸಿದ ಘಟನೆ ನಡೆದಿದೆ.

ಕೋಳಾಲ ಹೋಬಳಿ ವಜ್ಜಿನಕುರಿಕೆ ಗ್ರಾಮ ಪಂಚಾಯತಿ ವ್ಯಾಪ್ತಿಯ ದುಡ್ಡನಹಳ್ಳಿಯಲ್ಲಿ ಈ ಘಟನೆ ಜರುಗಿದ್ದು, ವೃದ್ಧೆ ಸುಶೀಲಮ್ಮ ಅನಾರೋಗ್ಯದಿಂದ ಬಳಲುತ್ತಿದ್ದರು.

ಕೋಳಾಲ ಹೋಬಳಿಯ ದುಡ್ಡನಹಳ್ಳಿ ಹಾಗೂ ‌ಕೆ ಜಿ ಬೇವಿನಹಳ್ಳಿ ಮಧ್ಯ ಒಂದು ಕಿಲೋಮೀಟರ್ ದೂರದಲ್ಲಿ ಇವರ ತೋಟದ ಮನೆಯಿದ್ದು, ಈ ಮನೆಗೆ ಹಾದು ಹೋಗುವ ಕಾಲು ದಾರಿ ಪೂರ್ಣ ಸರ್ಕಾರಿ ಜಮೀನಿನಲ್ಲಿದ್ದು, ಈ ಭಾಗದಲ್ಲಿ 15 – 20ಕ್ಕೂ ಹೆಚ್ಚು ರೈತರು ಇದೇ ಮಾರ್ಗದಲ್ಲಿ ಬೇಸಾಯಕ್ಕೆ ಎತ್ತಿನ ಬಂಡಿ, ಟ್ಯಾಕ್ಟರ್ ಸೇರಿದಂತೆ ಜನ ಜಾನುವಾರುಗಳು ಓಡಾಡುತ್ತಿದ್ದು, ಬೇಸಾಯ ಸಂದರ್ಭದಲ್ಲಿ ಅಕ್ಕ ಪಕ್ಕದ ರೈತರು ದಾರಿ ಇಲ್ಲದ ಕಾರಣ ಒಬ್ಬರು ನಡೆದಾಡುವಷ್ಟು ಕಾಲು ದಾರಿ ಬಿಟ್ಟು ಉಳುಮೆ ಮಾಡಿಕೊಳ್ಳುವುದರಿಂದ ಇಲ್ಲಿನ ರೈತರು ಹಾಗೂ ಈ ತೋಟದ ಮನೆಯ ಕುಟುಂಬಕ್ಕೆ ತುಂಬಾ ಅನಾನುಕೂಲವಾಗಿದ್ದು ಹತ್ತಾರು ವರ್ಷಗಳಿಂದ ಕಂದಾಯ ಇಲಾಖೆಗೆ ಮನವಿ ಸಲ್ಲಿಸುತ್ತಿದ್ದರೂ ಪ್ರಯೋಜನವಾಗಿಲ್ಲ. ಈಗಿನ ತಹಶೀಲ್ದಾರ್ ನಾಹಿದಾ ಜಮ್ ಜಮ್ ಅವರಾದರೂ ನಮಗೆ ಸಹಕಾರ ನೀಡಲಿ ಎಂದು ಈ ಕುಟುಂಬ ಹಾಗೂ ಹತ್ತಾರು ರೈತರು ಮನವಿ ಮಾಡಿಕೊಂಡಿದ್ದಾರೆ.

ವೃದ್ಧೆ ಸುಶೀಲಮ್ಮ ಕಳೆದ 15 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಕುಟುಂಬಸ್ಥರು ದ್ವಿಚಕ್ರವಾಹನದಲ್ಲಿ ಕೊರಟಗೆರೆ ಸೇರಿದಂತೆ ಇನ್ನಿತರ ಆಸ್ಪತ್ರೆಗಳಿಗೆ ತೋರಿಸಿದರೂ ವಾಸಿಯಾಗದೆ ಇದ್ದಾಗ, ವಾಹನಗಳು ತೋಟದ ಮನೆಗೆ ದಾರಿ ಇಲ್ಲದ ಕಾರಣ ಬಾರದೆ ಇರುವುದಕ್ಕೆ ಕುಟುಂಬಸ್ಥರು ಹಾಗೂ ಕೆಲವು ರೈತರು ಸೇರಿ ಆ ವೃದ್ಧೆಯನ್ನು ಒಂದಷ್ಟು ದೂರ ಹೆಗಲ ಮೇಲೆ ಹೊತ್ತು, ನಂತರ ಕೈಯಲ್ಲಿ ಹೊತ್ತು ಸಾಗಿ ಆಂಬುಲೆನ್ಸ್ ಗೆ ಕೂರಿಸಿದ್ದಾರೆ. ಸಾರ್ವಜನಿಕರು ಈ ಪರಿಸ್ಥಿತಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದು, ನಮ್ಮ ಊರು ನಮ್ಮ ರಸ್ತೆ, ನಮ್ಮ ಜಮೀನು ನಮ್ಮ ರಸ್ತೆ ಸೇರಿದಂತೆ ಹಲವಾರು ಯೋಜನೆಗಳನ್ನ ಜಾರಿಗೆ ತಂದರು ಅವು ರೈತರಿಗೆ ಸಹಕಾರ ಇಲ್ಲದಿರುವುದು ಹಲವಾರು ಯೋಜನೆಗಳು ಹಳ್ಳ ಹಿಡಿದಿರುವುದಕ್ಕೆ ನೇರ ಸಾಕ್ಷಿಯಂತಾಗಿದ್ದು, ತ್ವರಿತವಾಗಿ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.