Koratagere : ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇಇ
ವಿದ್ಯುತ್ ಸಂಪರ್ಕಕ್ಕೆ 3 ಲಕ್ಷ ರೂ. ಲಂಚದ ಬೇಡಿಕೆ.. ಎಲೆಕ್ಟ್ರಿಕಲ್ ಗುತ್ತಿಗೆದಾರ ಅಂಬರೀಶ ಬಂಧನ
Team Udayavani, Aug 23, 2023, 9:33 PM IST
ಕೊರಟಗೆರೆ: ಶಿರಾದ ಗುತ್ತಿಗೆದಾರ ಮತ್ತು ತೋವಿನಕೆರೆಯ ರೈತನಿಂದ ಹನುಮೇನಹಳ್ಳಿಯ ಎಲೆಕ್ಟ್ರಿಕಲ್ ಗುತ್ತಿಗೆದಾರನ ಮೂಲಕ 3ಲಕ್ಷ ರೂ.ಗೆ ಬೇಡಿಕೆಯಿಟ್ಟು 50 ಸಾವಿರ ರೂ. ಲಂಚ ಪಡೆಯುವಾಗ ಕೊರಟಗೆರೆ ಬೆಸ್ಕಾಂ ಎಇಇ ತುಮಕೂರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಬುಧವಾರ ಸಂಜೆ ನಡೆದಿದೆ.
ಕೊರಟಗೆರೆ ಪಟ್ಟಣದ ಬೆಸ್ಕಾಂ ಇಲಾಖೆಯ ಮೇಲೆ ತುಮಕೂರು ಲೋಕಾಯುಕ್ತ ಇಲಾಖೆಯ ಎಸ್ಪಿ ವಲೀಬಾಷ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ಎಇಇ ಬಿ.ಜಿ.ಅರಸರಾಜು ಮತ್ತು ಕೊರಟಗೆರೆ ತಾಲೂಕು ಹನುಮೇಹಳ್ಳಿ ಗ್ರಾಮದ ಎಲೆಕ್ಟ್ರಿಕಲ್ ಗುತ್ತಿಗೆದಾರ ಅಂಬರೀಶ ಎಂಬಾತನ ಬಂದಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಕುರಂಕೋಟೆ ಗ್ರಾಮದ ಸತ್ಯನಾರಾಯಣಚಾರ್ ಎಂಬಾತನ ಜಮೀನಿಗೆ ವಿದ್ಯುತ್ ಸಂಪರ್ಕ ಮತ್ತು ಟ್ರಾನ್ಸ್ಪಾರಂ ಅಳವಡಿಕೆಗೆ ಶಿರಾ ಮೂಲದ ಗುತ್ತಿಗೆದಾರ ಹರೀಶ್ ಎಂಬಾತನಿಗೆ 3 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟು50ಸಾವಿರ ರೂ. ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ವಿದ್ಯುತ್ ಸಂಪರ್ಕಕ್ಕೆ ಗುತ್ತಿಗೆದಾರ ಅಲೆದಾಟ..
ಕುರಂಕೋಟೆಯ ರೈತ ಸತ್ಯನಾರಾಯಣಚಾರ್ ಮತ್ತು ಶಿರಾ ಮೂಲದ ಗುತ್ತಿಗೆದಾರ ಹರೀಶ್ ಎಂಬಾತ ವಿದ್ಯುತ್ ಸಂಪರ್ಕಕ್ಕಾಗಿ ಕಳೆದ 2ತಿಂಗಳಿನಿಂದ ಬೆಸ್ಕಾಂ ಕಚೇರಿಗೆ ಅಲೆದಾಟ ನಡೆಸಿದ್ದಾರೆ. ಸರಕಾರಿ ಶುಲ್ಕ ಪಾವತಿಯ ಬಳಿಕವು ವಿದ್ಯುತ್ ಸಂಪರ್ಕ ಮತ್ತು ಟ್ರಾನ್ಸ್ಪಾರಂ ಅಳವಡಿಕೆಗೆ ಅಲೆದಾಡಿಸಿದ ಪರಿಣಾಮ ಗುತ್ತಿಗೆದಾರ ಹರೀಶ್ ಮತ್ತು ರೈತ ಸತ್ಯನಾರಾಯಣಚಾರ್ ಇಬ್ಬರು ಆ.21 ರ ಸೋಮವಾರ ಲೋಕಾಯುಕ್ತ ಕಚೇರಿಗೆ ದೂರು ನೀಡಿದ ಹಿನ್ನಲೆ ಆ.23 ರ ಬುಧವಾರ ದಾಳಿ ನಡೆಸಿದ್ದಾರೆ.
ತುಮಕೂರು ಲೋಕಾಯುಕ್ತ ಇಲಾಖೆಯ ಎಸ್ಪಿ ವಲೀಭಾಷ, ಡಿವೈಎಸ್ಪಿ ಹರೀಶ್, ಮಂಜುನಾಥ, ಇನ್ಸ್ ಪೆಕ್ಟರ್ ಶಿವರುದ್ರಪ್ಪಮೇಟಿ, ಸತ್ಯನಾರಾಯಣ ಸೇರಿದಂತೆ ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆದಿದೆ. ಶಿರಾ ಗುತ್ತಿಗೆದಾರ ಹರೀಶ್ ಮತ್ತು ತೋವಿನಕೆರೆ ರೈತ ದೂರಿನ ಅನ್ವಯ ಕೊರಟಗೆರೆ ಬೆಸ್ಕಾಂ ಎಇಇ ಅರಸರಾಜು ಮೇಲೆ ತುಮಕೂರು ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಭೆಯಲ್ಲಿ ಎಇಇಗೆ ರೈತರಿಂದ ತರಾಟೆ..
ಕೊರಟಗೆರೆ ಪಟ್ಟಣದ ಕಂದಾಯ ಇಲಾಖೆ ಕಚೇರಿಯಲ್ಲಿ ಆ.21 ರ ಸೋಮವಾರ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಬೆಸ್ಕಾಂ ಇಲಾಖೆಯ ಎಇಇ ಅರಸರಾಜು ಮೇಲೆ ರೈತರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಅಂತರ್ಜಲ ಅಭಿವೃದ್ದಿ ನಿರ್ವಾಹಕ ಮತ್ತು ನಿಯಂತ್ರಣ ಸಮಿತಿಯ ಸಭೆಯಲ್ಲಿ 18ಕೊಳವೆಬಾವಿ ಯೋಜನೆಗೆ ವಿದ್ಯುತ್ ಸಂಪರ್ಕ ನೀಡಲು 5 ಜನ ಸದಸ್ಯರ ಪೈಕಿ 4 ಜನ ಅಧಿಕಾರಿ ಸಹಿ ಹಾಕಿದ ನಂತರವು ಬೆಸ್ಕಾಂ ಇಲಾಖೆಯ ಎಇಇ ಸಹಿ ಹಾಕದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.