ಕೊರಟಗೆರೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಮುನಿಯಪ್ಪಗೆ ಬಿಎಸ್ ವೈ,ವಿಜಯೇಂದ್ರ ಅಭಯ
Team Udayavani, Dec 26, 2022, 7:19 PM IST
ಕೊರಟಗೆರೆ : ಕೊರಟಗೆರೆ ವಿಧಾನಸಭಾ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆ ಮಾಡಿ ನಾವು ಇದ್ದೇವೆ, ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿ ಕೆ.ಎಂ. ಮುನಿಯಪ್ಪ ನವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡ್ಡಿಯೂರಪ್ಪ ಹಾಗೂ ವಿಜಯೇಂದ್ರ ಅಭಯ ನೀಡಿದ್ದಾರೆ ಎನ್ನಲಾಗಿದೆ.
ಕೊರಟಗೆರೆ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಬಿಜೆಪಿ ಪಕ್ಷ ಸಂಘಟನೆ ಮಾಡಿರುವ ಮುನಿಯಪ್ಪ ಬೆಂಬಲಿಗರು ಇತ್ತೀಚಿಗೆ ಕಾರ್ಯಕರ್ತರ ಸಮಾವೇಶ ಮಾಡಿ , ಕೊರಟಗೆರೆಗೆ ಯಡ್ಡಿಯೂರಪ್ಪ ರವರನ್ನು ಕರೆಸಿ ಕಚೇರಿ ಉದ್ಘಾಟನೆ ಮತ್ತು ಬೃಹತ್ ಸಮಾವೇಶ ಮಾಡುವ ನಿರ್ಣಯ ಕೈಗೊಂಡಿದ್ದರು.
ಬೃಹತ್ ಸಮಾವೇಶದ ಹಿನ್ನೆಲೆಯಲ್ಲಿ ಯಡ್ಡಿಯೂರಪ್ಪ ಮತ್ತು ವಿಜಯೇಂದ್ರ ರವರ ದಿನಾಂಕ ನಿಗದಿಗೆ ಎಂದು ಮುನಿಯಪ್ಪ ನವರು ಯಡ್ಡಿಯೂರಪ್ಪ ರವರ ಬೆಂಗಳೂರು ನಿವಾಸಕ್ಕೆ ತೆರಳಿ ಸಮಾವೇಶದಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.ಸಮಾವೇಶದ ದಿನಾಂಕ ನಿಗದಿ ಮಾಡಿ ಖಂಡಿತ ಸಮಾವೇಶದಲ್ಲಿ ಭಾಗವಹಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಮುನಿಯಪ್ಪ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಳದ ನಾಲ್ಕು ವರ್ಷಗಳಿಂದ ನಾನು ಕೊರಟಗೆರೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ಯಡ್ಡಿಯೂರಪ್ಪ,ವಿಜಯೇಂದ್ರ ಸೇರಿ ರಾಜ್ಯ ಮತ್ತು ಕೇಂದ್ರ ನಾಯಕರಿಗೆ ಮಾಹಿತಿ ಇದೆ.ಯಡ್ಡಿಯೂರಪ್ಪ ಮತ್ತು ವಿಜೆಯೇಂದ್ರ ರವರು ಟಿಕೆಟ್ ಕೊಡಿಸುವ ಭರವಸೆ ನೀಡಿದ್ದಾರೆ ಎಂದು ಮುನಿಯಪ್ಪ ಹೇಳಿದ್ದಾರೆ.
ವಿಜೆಯೇಂದ್ರ ಹಾಗೂ ಯಡ್ಡಿಯೂರಪ್ಪ ರವರನ್ನು ಭೇಟಿ ಮಾಡಲು ಬಂದಿದ್ದ ರಾಜ್ಯದ ವಿವಿಧ ಮಠಗಳ ಮಠಾಧೀಶರು ಸಹ ಮುನಿಯಪ್ಪರಿಗೆ ಒಳ್ಳೆಯದು ಆಗಲಿ ಎಂದು ಆಶಿರ್ವದಿಸಿದರು.
ಈ ವೇಳೆ ರಾಜ್ಯ ಖನಿಜ ನಿಗಮದ ಅಧ್ಯಕ್ಷ ಲಿಂಗಮೂರ್ತಿ ,ಹಿರಿಯ ಕಾರ್ಮಿಕ ಮುಖಂಡ ಸೂರ್ಯನಾರಾಯಣ ಗೌಡ,ಕೆ ಎಂ ಮುನಿಯಪ್ಪ ನವರ ಪುತ್ರ ಚೇತನ್ ಬಾಬು,ಇರಕಸಂದ್ರದ ಅನಿಲ್ ಮತ್ತಿತರರು ಹಾಜರಿದ್ದರು.
ಮುನಿಯಪ್ಪ ನಾಲ್ಕು ವರ್ಷಗಳಿಂದ ಕೊರಟಗೆರೆ ಕ್ಷೇತ್ರದಲ್ಲಿ ಮಾಡಿರುವ ಜನ ಸೇವೆಯನ್ನು, ಚಿತ್ರ ಸಹಿತ ಮುದ್ರಿಸಿರುವ ಕ್ಯಾಲೆಂಡರ್ ಅನ್ನು ಯಡ್ಡಿಯೂರಪ್ಪ ಅವರು ಬಿಡುಗಡೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.