ಕೊರಟಗೆರೆ: ಮಾಜಿ ಸಿಎಂ ಹೆಚ್ ಡಿಕೆ ಜತೆ ರೈತ ಚೈತನ್ಯ, ರೈತ ಸಂಕ್ರಾಂತಿ ಸಂವಾದ

ಬೆಳೆ ವಿಮೆ ಮತ್ತು ರಾಗಿ ಖರೀದಿ ಕೇಂದ್ರಕ್ಕೆ ರೈತರ ಆಗ್ರಹ

Team Udayavani, Jan 16, 2023, 8:45 PM IST

1-fassadsad

ಕೊರಟಗೆರೆ: ರೈತರ ಬೆಳೆಯ ರಕ್ಷಣೆಗೆ ಬೆಳೆ ವಿಮೆ ಮತ್ತು ಕೃಷಿ ಬೆಳೆ ವಹಿವಾಟಿಗೆ ರಾಗಿ ಖರೀದಿ ಕೇಂದ್ರ ಅವಶ್ಯಕತೆ ಇದೆ. ಕೊರಟಗೆರೆ ಕ್ಷೇತ್ರದ ರೈತರ ಮನವಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಉತ್ತರ ನೀಡಿದ್ದಾರೆ.

ಕೊರಟಗೆರೆಯಲ್ಲಿ ರೈತ ಚೈತನ್ಯ ಮತ್ತು ರೈತ ಸಂಕ್ರಾಂತಿ ಸಂವಾದ ಕಾರ್ಯಕ್ರಮವು ಯಶಸ್ವಿಯಾಗಿದೆ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ತಿಳಿಸಿದರು.

ಕೊರಟಗೆರೆ ಪಟ್ಟಣದ ಲಕ್ಷ್ಮೀನರಸಿಂಹ ಕಲ್ಯಾಣ ಮಂಟಪದಲ್ಲಿ ಜಾತ್ಯಾತೀತ ಜನತಾದಳ ಪಕ್ಷದಿಂದ ಸೋಮವಾರ ಏರ್ಪಡಿಸಲಾಗಿದ್ದ ರೈತನಾಯಕ ಕುಮಾರಣ್ಣನ ಜೊತೆ ರೈತ ಚೈತನ್ಯ ಮತ್ತು ರೈತ ಸಂಕ್ರಾಂತಿಯ ವಿಡಿಯೋ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಕರ್ನಾಟಕದ 224 ಕ್ಷೇತ್ರದ ರೈತರ ಸಂಕಷ್ಟವನ್ನು ತಿಳಿಯುವ ಉದ್ದೇಶದಿಂದ ರೈತ ಸಂಕ್ರಾಂತಿ ಸಂವಾದ ಕಾರ್ಯಕ್ರಮ ನಡೆದಿದೆ. ರೈತನ ಪರವಾಗಿ ಸದಾ ಚಿಂತಿಸುವ ರೈತನಾಯಕ ಕುಮಾರಣ್ಣ ಮುಖ್ಯಮಂತ್ರಿ ಆದರೇ ರೈತರ ಆರ್ಥಿಕ ಅಭಿವೃದ್ದಿಗೆ ಸಹಕಾರಿ ಆಗಲಿದೆ. ಕೊರಟಗೆರೆಯ ರೈತರು ಮುಸುಕಿನ ಜೋಳ ಮತ್ತು ರಾಗಿ ಬೆಳೆಯ ಬಗ್ಗೆ ಸಂವಾದ ಕಾರ್ಯಕ್ರಮದಲ್ಲಿ ಚರ್ಚಿಸಿದ್ದಾರೆ ಎಂದು ಹೇಳಿದರು.

ತೋವಿನಕೆರೆ ರೈತ ಭೀಮರಾಜು ಮಾತನಾಡಿ ಕೊರಟಗೆರೆ ಕ್ಷೇತ್ರದಲ್ಲಿ ಮಳೆಯಿಂದ ರಾಗಿ ಬೆಳೆಯು ಕೊಚ್ಚಿಹೋಗಿದೆ. ರಾಗಿ ಬೆಳೆಗೆ ಸರಕಾರ ಬೆಂಬಲ ಬೆಲೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ರಾಗಿ ಮಾರಾಟಕ್ಕೆ ಕೊರಟಗೆರೆ ರೈತರು ಅಲೆದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಕೊರಟಗೆರೆ ಕ್ಷೇತ್ರಕ್ಕೆ ರಾಗಿ ಖರೀದಿ ಕೇಂದ್ರದ ಅವಶ್ಯಕತೆಯು ಇದೆ. ಸರಕಾರ ರಾಗಿ ಬೆಳೆಗೆ ಬೆಂಬಲ ಬೆಲೆಯ ಜೊತೆ ಆರ್ಥಿಕವಾಗಿ ಅನುಕೂಲ ಕಲ್ಪಿಸಬೇಕಿದೆ ಎಂದು ಮನವಿ ಮಾಡಿದರು.

ಪುರವಾರ ರೈತ ಗೋವರ್ಧನ್ ಮಾತನಾಡಿ ಕೃಷಿ ಬೆಳೆಗೆ ಸರಕಾರ ಬೆಳೆವಿಮೆ ಕಟ್ಟಿಸಿಕೊಂಡಿದೆ. ಮಳೆರಾಯನ ಆರ್ಭಟಕ್ಕೆ ಕೃಷಿ ಬೆಳೆಯು ಸಂಪೂರ್ಣ ನಷ್ಟವಾಗಿದೆ. ಬೆಳೆವಿಮೆ ಯೋಜನೆಯಿಂದ ರೈತರಿಗೆ ಅನುಕೂಲ ಆಗುತ್ತಿಲ್ಲ.
ಕೊರಟಗೆರೆಯ ರೈತರಿಗೆ ಲಕ್ಷಾಂತರ ರೂ ಬೆಳೆ ನಷ್ಟವಾದ್ರು ಬೆಳೆ ವಿಮೆಯ ಹಣವೇ ಬರುತ್ತೀಲ್ಲ. ರೈತರು ಯಾವ ಇಲಾಖೆಗೆ ಕೇಳಬೇಕು ಎಂಬುದೇ ಗೋತ್ತಿಲ್ಲ ಎಂದು ತಿಳಿಸಿದರು.

ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ಮಹಾಲಿಂಗಪ್ಪ, ಜೆಡಿಎಸ್ ಕಾರ್ಯಾಧ್ಯಕ್ಷ ನರಸಿಂಹರಾಜು, ಕಾರ್ಯದರ್ಶಿ ಲಕ್ಷ್ಮಣ್, ವಕ್ತಾರ ಲಕ್ಷ್ಮೀಶ್, ಜಿಪಂ ಸದಸ್ಯ ಶಿವರಾಮಯ್ಯ, ಮುಖಂಡರಾದ ಸಿದ್ದಮಲ್ಲಪ್ಪ, ಕಾಮರಾಜು, ವೀರಕ್ಯಾತರಾಯ, ಲಕ್ಷ್ಮೀಕಾಂತ, ರವಿವರ್ಮ, ಸಾಕಣ್ಣ, ನಾಗರಾಜು, ರಮೇಶ್, ಸತೀಶ್, ಲಕ್ಷ್ಮೀನರಸಪ್ಪ ಸೇರಿದಂತೆ ಇತರರು ಇದ್ದರು.

ರೈತರ ಪ್ರಶ್ನೆಗಳಿಗೆ ಕುಮಾರಸ್ವಾಮಿ ಉತ್ತರ
ವಿಧಾನಸಭೆಯಲ್ಲಿ ಹತ್ತಾರು ಸಲ ಬೆಳೆವಿಮೆಯ ಬಗ್ಗೆ ಚರ್ಚಿಸಲಾಗಿದೆ. ಕೇಂದ್ರ ಸರಕಾರದ ಖಾಸಗಿ ಕಂಪನಿಯ ಬೆಳೆವಿಮೆ ಯೋಜನೆಯು ರೈತರಿಗೆ ದಾರಿ ತಪ್ಪಿಸುವ ಕೆಲಸ ಮಾಡ್ತಿದೆ. ರಾಗಿ ಖರೀದಿ ಕೇಂದ್ರಗಳಿಂದ ರೈತರಿಗೆ ಅನುಕೂಲ ಆಗುತ್ತಿಲ್ಲ. ರೈತರ ಬೆಳೆಗಳಿಗೆ ತಕ್ಷಣ ಮಾರಾಟ ಹಣ ನೀಡಬೇಕಿದೆ. ಕರ್ನಾಟಕದ ರೈತ ಯಾವುದೇ ಕಾರಣಕ್ಕೂ ಸಂಕಷ್ಟಕ್ಕೆ ಸಿಲುಕಬಾರದು. ರಾಜ್ಯ ಸರಕಾರದಿಂದಲೇ ಬೆಳೆವಿಮೆ ಯೋಜನೆ ಜಾರಿಗೊಳಿಸುತ್ತೇನೆ ಎಂದು ಕೊರಟಗೆರೆ ಕ್ಷೇತ್ರದ ರೈತರ ಪ್ರಶ್ನೆಗಳಿಗೆ ಮಾಜಿ ಸಿಎಂ ಕುಮಾರಸ್ವಾಮಿ ಉತ್ತರ ನೀಡಿದರು.

ಟಾಪ್ ನ್ಯೂಸ್

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.