![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 6, 2024, 7:56 PM IST
ಕೊರಟಗೆರೆ: ಮಕ್ಕಳ ರಕ್ಷಣಾ ನೀತಿ 2016 ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲಾ ಹಂತದ ಅಧಿಕಾರಿಗಳು ಪ್ರಯತ್ನಿಸಿಬೇಕು, ಸರ್ಕಾರಿ, ಖಾಸಗಿ ಸೇರಿದಂತೆ ವಿವಿಧ ಇಲಾಖೆಗಳ ಅಡಿ ಕಾರ್ಯನಿರ್ವಹಿಸುವ ಶಾಲೆಗಳಲ್ಲಿ ಕಡ್ಡಾಯವಾಗಿ ಮಕ್ಕಳ ಸುರಕ್ಷತಾ ಸಮಿತಿ ರಚನೆ ಮಾಡಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ ತಿಪ್ಪೇಸ್ವಾಮಿ ತಿಳಿಸಿದರು.
ಕೊರಟಗೆರೆ ತಾಲೂಕಿನ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಸತಿ ನಿಲಯ, ಕೊರಟಗೆರೆ ಸಾರ್ವಜನಿಕ ಆಸ್ಪತ್ರೆ, ಪೋಲಿಸ್ ಠಾಣೆಗೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ತಾಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಮಕ್ಕಳ ರಕ್ಷಣೆಗೆ ಸಂಬಂಧಪಟ್ಟಂತೆ ಯಾವೆಲ್ಲಾ ಕೆಲಸ ಕಾರ್ಯಗಳು ಆಗುತ್ತಿವೆ, ಕಾಯ್ದೆಗಳು ಮಕ್ಕಳ ಪರವಾಗಿ ಪೋಕ್ಸೋ ಕಾಯ್ದೆ, ಆರ್‌ಟಿಇ ಕಾಯ್ದೆ ಸೇರಿದಂತೆ ಇನ್ನಿತರ ಮಕ್ಕಳ ಹಕ್ಕುಗಳ ರಕ್ಷಣಾ ಕಾಯ್ದೆ ಬಗ್ಗೆ ಆ.1ರಂದು ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಲಾಗಿತ್ತು. ಆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದಂತೆ ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದಂತೆ ತಳಮಟ್ಟದಲ್ಲಿ ಹೇಗೆ ಅನುಷ್ಠಾನವಾಗುತ್ತಿದೆ ಎಂಬುದರ ಬಗ್ಗೆ ಪರಿಶೀಲಿಸಲು ಶುಕ್ರವಾರದಿಂದ ತುಮಕೂರು ಜಿಲ್ಲೆಯ ಶಿರಾ, ಪಾವಗಡ, ಕೊರಟಗೆರೆ ತಾಲೂಕಿನಲ್ಲಿ ಪ್ರವಾಸವನ್ನು ನಡೆಸಿದೆ. ಈ ವೇಳೆಯಲ್ಲಿ ಸರ್ಕಾರಿ ಶಾಲೆ, ಅಂಗನವಾಡಿ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎಂದರು.
ಮಕ್ಕಳ ರಕ್ಷಣಾ ನೀತಿ ಅನುಷ್ಠಾನದ ಕಾರ್ಯಸೂಚಿಗಳನ್ನು ಈಗಾಗಲೇ ಹೊರಡಿಸಲಾಗಿದೆ. ಪ್ರತಿ ಶಾಲೆಗಳಲ್ಲೂ ಮಕ್ಕಳ ಸುರಕ್ಷತಾ ಸಮಿತಿ, ಮಕ್ಕಳ ಸಹಾಯ ಗುಂಪು ರಚನೆ ಮಾಡಬೇಕು. ಮಕ್ಕಳು ದೂರುಗಳನ್ನು ಸಲ್ಲಿಸಲು ದೂರು ಪೆಟ್ಟಿಗೆಗಳನ್ನು ಕಡ್ಡಾಯವಾಗಿ ಶಾಲೆಗಳಲ್ಲಿ ಇಡಬೇಕು. ಎಲ್ಲಾ ಖಾಸಗಿ ಶಾಲೆಗಳ ಆರಂಭಕ್ಕೂ ಮುನ್ನಾ ಆಡಳಿತ ಮಂಡಳಿಗಳು ಮಕ್ಕಳ ರಕ್ಷಣಾ ಬದ್ಧತೆ ಪತ್ರಕ್ಕೆ ಸಹಿಯನ್ನು ಕಡ್ಡಾಯವಾಗಿ ಹಾಕಬೇಕು. ಮುಂದಿನ ಸಭೆಯಲ್ಲಿ ಇಂದು ಚರ್ಚಿಸಲಾದ ವಿಷಯಗಳು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಬಂದು ನಿರಂತರ ಪ್ರಗತಿ ಪರಿಶೀಲನಾ ಸಭೆ ನಡೆಸುವುದು ಅಷ್ಟೇ ಮುಖ್ಯ ಎಂದರು.
ತಾಲೂಕು ಆಡಳಿತವು ಮಕ್ಕಳನ್ನು ರಕ್ಷಣೆ ಮಾಡುವಲ್ಲಿ ಹೆಚ್ಚಿನ ಬದ್ಧತೆಯನ್ನು ತೋರಬೇಕು, ಅಧಿಕಾರಿಗಳಿಗೆ ಈಗಾಗಲೇ ಸೂಚಿಸಿದ ಎಲ್ಲಾ ವಿಷಯಗಳ ಬಗ್ಗೆ ಅನುಪಾಲನ ವರದಿಯನ್ನು ಸಲ್ಲಿಸಿ ತಿಂಗಳೊಳಗೆ ಅನುಷ್ಠಾನ ತರಲು ಅವಕಾಶ ನೀಡಲಾಗಿದೆ ಎಂದರು.
ಇತ್ತೀಚಿಗೆ ರಾಜ್ಯ ಸರ್ಕಾರ ಮಕ್ಕಳ ಸ್ನೇಹಿಯಾದ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ, ಪಂಚಾಯತ್ ರಾಜ್ ಇಲಾಖೆಯು ನ.14 ರಿಂದ ಜ.24ರವರೆಗೆ ಮಕ್ಕಳಿಗೆ ಸ್ಪಂದಿಸುವ ಗ್ರಾಪಂ ಅಭಿಯಾನ ಎಂಬ ಕಾರ್ಯಕ್ರಮವನ್ನು ಆಯೋಜನೆ ಮಾಡಿಕೊಂಡು ಬರುತ್ತಿದ್ದಾರೆ. ಅನೇಕ ಸುತ್ತೋಲೆಗಳು ಬಂದರೂ ತಳಮಟ್ಟದ ಅಧಿಕಾರಿಗಳು ಅನುಷ್ಠಾನ ಗೊಳಿಸದೇ ಹೋದರೆ ಸುತ್ತೋಲೆಗಷ್ಟೇ ಸೀಮಿತಿವಾಗುತ್ತದೆ ಎಂದು ಹೇಳಿದರು.
ತಹಶೀಲ್ದಾರ್ ಮಂಜುನಾಥ್, ತಾಪಂ ಇಒ ಅಪೂರ್ವ, ಸಿಪಿಐ ಸುರೇಶ್, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅನುಷಾ , ಜಿಲ್ಲಾ ಮಹಿಳಾ ಅಭಿವೃದ್ಧಿ ಅಧಿಕಾರಿ ಪವಿತ್ರ, ಸಿಡಿಪಿಒ ಅಂಬಿಕಾ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.
ಸಾರಿಗೆ ಇಲಾಖೆ ಬಸ್‌ಗಳ ಸಂಖೈ ಹೆಚ್ಚಿಸಬೇಕು
ರಾಜ್ಯದಲ್ಲಿ ಸಾರಿಗೆ ಸಂಪರ್ಕವಿಲ್ಲದೆ ಬಸ್‌ಗಾಗಿ ಪರದಾಡುತ್ತಿರುವ, ಕಡಿಮೆ ಬಸ್ ಸಂಪರ್ಕವಿರುವ, ಬಸ್ಸಿನಿಂದ ಮಕ್ಕಳು ಬಿದ್ದು ಗಾಯಗೊಂಡ, ಮೃತರಾದ ಘಟನೆಗಳು ಗಮನಕ್ಕೆ ಬಂದಿದೆ. ಸುಮುಟೋ ಕೇಸ್ ದಾಖಲಿಸಿದ್ದೇವೆ. ಕೊರಟಗೆರೆ ತಾಲೂಕಿನಲ್ಲೂ ಮಕ್ಕಳು ಬಸ್ ಸಮಸ್ಯೆ ಅನುಭವಿಸುತ್ತಿದ್ದಾರೆ. ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ರೂಪಿಸಿಕೊಳ್ಳುವಂತೆ ತಿಳಿಸಿದ್ದೇವೆ. ಸಾರಿಗೆ ಇಲಾಖೆಯೂ ಬಸ್‌ಗಳ ಸಂಖೆ ಹೆಚ್ಚಿಸಿದರೆ ತಳಮಟ್ಟದ ಅಧಿಕಾರಿಗಳಿಗೂ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಲು ಅನುಕೂಲವಾಗುತ್ತದೆ ಎಂದು ಮಕ್ಕಳ ರಕ್ಷಣಾ ಆಯೋಗದ ತಿಪ್ಪೇಸ್ವಾಮಿ ತಿಳಿಸಿದರು.
ಸಾರ್ವಜನಿಕ ಆಸ್ಪತ್ರೆಗೆ ಭೇಟಿ
ಆಕಸ್ಮಿಕವಾಗಿ ಬೆಳಗ್ಗೆ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಮಕ್ಕಳ ವಾರ್ಡ್ ಪರಿಶೀಲನೆ ಬಳಿಕ ಎನ್ ಆರ್. ಸಿ. ವಾರ್ಡ್‌ಗೆ ಹೋದಾಗ ಬೀಗ ಹಾಕಿತ್ತು. ನಂತರ ಓಪನ್ ಮಾಡಸಿ ನೋಡಿದರೆ ದೂಳು ತುಂಬಿಕೊಂಡಿದ್ದನ್ನು ಕಂಡು ಆಯೋಗದ ಅಧಿಕಾರಿ ಸ್ಥಳದಲ್ಲೇ ತನಿಖಾಧಿಕಾರಿಗೆ ವಾರ್ಡ್ ಅನ್ನು ಶುಚಿ ಮಾಡುವಂತೆ ತಿಳಿಸಿದರು. ಬಾಣಂತಿಯರ ವಾರ್ಡ್ ಪರಿಶೀಲಿಸಿದ ವೇಳೆ ವೇಳೆ ಬಿಸಿ ನೀರಿನ ವ್ಯವಸ್ಥೆ ಇಲ್ಲ ಎಂದು ಬಾಣಂತಿಯರು ಹೇಳಿದ ಕೂಡಲೇ ಇದರ ವ್ಯವಸ್ಥೆಯನ್ನು ಕಲ್ಪಿಸುವಂತೆ ಅಧಿಕಾರಿಗೆ ತಿಳಿಸಲಾಗಿದೆ ಎಂದು ಹೇಳಿದರು.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.