Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಬಿಇಒ, ಮುಖ್ಯ ಶಿಕ್ಷಕ ಅಮಾನತಿಗೆ ಆಗ್ರಹ
Team Udayavani, Jan 3, 2025, 9:33 PM IST
ಕೊರಟಗೆರೆ: ಮಿನಿ ಲಾಲ್‌ಬಾಗ್‌ಗೆ ವನಭೇಟಿ ಕಾರ್ಯಕ್ರಮಕ್ಕೆ ಹೋಗಿ ಬರುವಾಗ ಮುಖ್ಯ ರಸ್ತೆ ತಿರುವಿನಲ್ಲಿ ಟಾಟಾ ಎಸ್ ಪಲ್ಪಿ ಹೊಡೆದು ವಾಹನದಲ್ಲಿದ್ದ 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿ 20ಕ್ಕೂ ಅಧಿಕ ಮಕ್ಕಳ ಜತೆ ಶಿಕ್ಷಕರು ಅಪಾಯದಿಂದ ಪಾರಾಗಿರುವ ಘಟನೆ ಗುರುವಾರ ನಡೆದಿದೆ.
ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ದೊಡ್ಡಸಾಗ್ಗೆರೆ, ಮಾವತ್ತೂರು ಮುಖ್ಯರಸ್ತೆ ಗೌಡನಕುಂಟೆ ಕ್ರಾಸಿನ ಬಳಿ ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಎಸ್ ಪಲ್ಟಿಹೊಡೆದಿದ್ದರಿಂದ 15 ಮಕ್ಕಳ ಕೈಕಾಲು, ತಲೆ, ಹೊಟ್ಟೆ ಮತ್ತು ಮೂಗಿಗೆ ಗಂಭೀರ ಗಾಯಗಳಾಗಿವೆ. ಎಲ್ಲರೂ ದೊಡ್ಡಸಾಗ್ಗೆರೆ, ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿಂಪುಗಾನಹಳ್ಳಿ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಿಂದ ಹೊರ ಸಂಚಾರದ ರೂಪದಲ್ಲಿ 5ಜನ ಶಿಕ್ಷಕರ ಜತೆ 99 ಮಕ್ಕಳನ್ನು ದೊಡ್ಡಸಾಗ್ಗೆರೆ ಬಳಿ ಮಿನಿ ಲಾಲ್‌ಬಾಗ್ ವೀಕ್ಷಣೆಗೆ ಟಾಟಾ ಏಸ್‌ನಲ್ಲಿ ಒಮ್ಮೆಗೆ 35 ಮಕ್ಕಳಂತೆ ಕುರಿಗಳ ಹಾಗೇ ತುಂಬಿಕೊಂಡು ಹೋಗಿದ್ದ ಶಾಲೆ ಆಡಳಿತ ಮತ್ತು ಶಿಕ್ಷಣ ಇಲಾಖೆ ವಿರುದ್ಧ ಪೋಷಕರು ಕಿಡಿಕಾರಿದ್ದಾರೆ.
ಭದ್ರತೆಯೇ ಇಲ್ಲದ ಟಾಟಾ ಎಸ್‌ನಲ್ಲಿ ಸರ್ಕಾರಿ ಶಾಲೆ ಮಕ್ಕಳನ್ನು ಕರೆದುಕೊಂಡು ಹೋಗಲು ಕೊರಟಗೆರೆ ಬಿಇಒ ನಟರಾಜ್, ಮುಖ್ಯ ಶಿಕ್ಷಕ ಹನುಮಂತರಾಯಪ್ಪ ಅನುಮತಿ ನೀಡಿದ್ದಾದರೂ ಏಕೆ. ಟಾಟಾ ಏಸ್ ವಾಹನ ಚಾಲಕ ಹಿಂದಿ ಶಿಕ್ಷಕ ಅನಂತರಾಮು ಆಗಿದ್ದರು ಎನ್ನಲಾಗಿದೆ.
ಮಕ್ಕಳಿಗೆ ಆಸರೆಯಾದ ಪಿಎಸ್‌ಐ
ಗೌಡನಕೆರೆ ಸಮೀಪ ಟಾಟಾಎಸ್ ಪಲ್ಟಿ ಹೊಡೆದ ಮರು ಕ್ಷಣವೇ ಸ್ಥಳಕ್ಕೆ ಧಾವಿಸಿದ ಕೋಳಾಲ ಪಿಎಸ್‌ಐ ಯೋಗೀಶ್, ಸ್ಥಳೀಯರ ಸಹಾಯದಿಂದ 35 ಮಕ್ಕಳನ್ನು ವಾಹನದಿಂದ ಹೊರತೆಗೆದು ತನ್ನ ಖಾಸಗಿ ವಾಹನದಲ್ಲಿ 1 ಮಕ್ಕಳನ್ನು ದೊಡ್ಡಸಾಗ್ಗೆರೆ, ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು.
ತುರ್ತು ಚಿಕಿತ್ಸೆಗೆ ಗೃಹ ಸಚಿವರ ಸೂಚನೆ
ವಾಹನ ಪಲ್ಟಿಯಿಂದ ತೀವ್ರವಾಗಿ ಗಾಯಗೊಂಡ ಮಿಥುನ್, ಹೇಮಂತ್, ಪ್ರಭಾಸ್, ಜಿತೇಂದ್ರ ಎಂಬ ನಾಲ್ಕು ಜನ ಮಕ್ಕಳನ್ನು ಗೃಹ ಸಚಿವರ ಸೂಚನೆಯಂತೆ ತುರ್ತಾಗಿ ತುಮಕೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಉತ್ತಮ ಚಿಕಿತ್ಸೆಗೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಶುಭಾಕಲ್ಯಾಣ, ತಹಶೀಲ್ದಾರ್ ಮಂಜುನಾಥ ಮತ್ತಿತರರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ವನಭೇಟಿ ಮುಗಿಸಿಕೊಂಡು ಬರುವಾಗ ಟಾಟಾ ಏಸ್ ಪಲ್ಟಿಯಾಗಿದ್ದು ಗೃಹ ಸಚಿವರ ಸೂಚನೆಯಂತೆ ಎಲ್ಲಾ ಮಕ್ಕಳಿಗೂ ದೊಡ್ಡಸಾಗ್ಗೆರೆ, ಕೊರಟಗೆರೆ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಕೊಡಿಸಲಾಗಿದೆ. ನಾಲ್ವರನ್ನು ತುಮಕೂರು ಆಸ್ಪತ್ರೆಗೆ ರವಾನಿಸಲಾಗಿದೆ. ಮಕ್ಕಳ ವಿಚಾರದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ ಆಗುತ್ತೆ.
-ಕೆ.ಮಂಜುನಾಥ, ತಹಶೀಲ್ದಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.