Koratagere; ಸರ್ಕಾರಿ ಆಸ್ಪತ್ರೆಯ ವೈದ್ಯರು ಇರಬೇಕಾದ ಕೊಠಡಿಗಳು ಇದೀಗ ಭೂತ ಬಂಗಲೆ…

ರಾತ್ರಿಯಾದರೆ ಪುಂಡ ಪೋಕರಿಗಳ ರಾಸಲೀಲೆಯ ಭವ್ಯ ಬಂಗಲೆಯಾಗಿ ಪರಿವರ್ತನೆಯಾಗಿದೆ

Team Udayavani, Dec 26, 2023, 8:47 PM IST

Koratagere; ಸರ್ಕಾರಿ ಆಸ್ಪತ್ರೆಯ ವೈದ್ಯರು ಇರಬೇಕಾದ ಕೊಠಡಿಗಳು ಇದೀಗಾ ಭೂತ ಬಂಗಲೆ…

ಕೊರಟಗೆರೆ:ಪ್ರಜಾಪ್ರಭುತ್ವದಲ್ಲಿ ಪ್ರಮುಖವಾದ ವೈದ್ಯಕೀಯ ಕ್ಷೇತ್ರವು ಅತ್ಯಂತ ಹೆಚ್ಚಿನ ಪ್ರಾಮುಖ್ಯತೆ ವಹಿಸಿದೆ. ಸರ್ಕಾರ ವೈದ್ಯರನ್ನು ಸೇವೆಗೆ ಮಾತ್ರ ಸೀಮಿತಗೊಳಿಸಿದೆ. ಇದಕ್ಕೊಂದು ಉದಾಹರಣೆ ಎಂದರೆ ಕೊರಟಗೆರೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮುಂಭಾಗದ ಕೇಂದ್ರ ಸ್ಥಾನದಲ್ಲಿ ವೈದ್ಯರು ವಾಸವಿರಬೇಕಾದ ವಸತಿ ಗೃಹಗಳು ಮೂಲಭೂತ ಸೌಕರ್ಯದಿಂದ ವಂಚಿತದಿಂದ ಹಳ್ಳ ಹಿಡಿದು ಅನೈತಿಕ ಚಟುವಟಿಕೆಗೆ ತಾಣವಾಗಿ ಮಾರ್ಪಟ್ಟು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ..

ವೈದ್ಯರಿಗೆ ರಾತ್ರಿ ಸಮಯದಲ್ಲಿ ಕೇಂದ್ರ ಸ್ಥಾನದಲ್ಲಿ ಉಳಿದುಕೊಳ್ಳಲು ಸರ್ಕಾರವು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದರು ಸಹ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಯಾವುದೇ ವೈದ್ಯರಾಗಲಿ, ಸಿಬ್ಬಂದಿಗಳಾಗಲಿ ವಾಸವಿಲ್ಲ. ಕಾರಣ, ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ಈ ಹಿಂದೆ ನಿರ್ಮಾಣ ಮಾಡಲಾಗಿದ್ದ ವಸತಿ ಗೃಹಗಳು ಮೂಲಭೂತ ಸೌಕರ್ಯದಿಂದ ವಂಚಿತಗೊಂಡು ಸುಮಾರು 15 ವರ್ಷಗಳಿಂದ ಎಲ್ಲಾ ಕೊಠಡಿಗಳು ಶಿಥಿಲಗೊಂಡಿದೆ ಎಂದು ಮುಖ್ಯ ವೈದ್ಯರಿಂದ ಮಾಹಿತಿ ತಿಳಿದು ಬಂದಿದೆ..

ಮಾನ್ಯ ಗೃಹಸಚಿವರ ಕ್ಷೇತ್ರದಲ್ಲಿ 15 ವರ್ಷಗಳಿಂದ ವೈದ್ಯರಿಗೆ ಸೂರಿಲ್ಲದೆ ಪರದಾಡುವ ಸ್ಥಿತಿ ಒದಗಿ ಬಂದಿದೆ, ಇದಕ್ಕೆ ಮುಖ್ಯ ಕಾರಣಕರ್ತರಾದ ತಾಲೂಕು ವೈದ್ಯಾಧಿಕಾರಿಯ ಡಾ.ವಿಜಯ್ ಕುಮಾರ್ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ..

ಡಾ.ವಿಜಯ್‍ಕುಮಾರ್ ತಾಲೂಕು ವೈದ್ಯಾಧಿಕಾರಿಗಳಾಗಿ 10 ರಿಂದ 13 ವರ್ಷಗಳು ಕಳೆದರೂ ಕೂಡ ಸರ್ಕಾರಿ ಆಸ್ಪತ್ರೆಗೆ ಬೇಕಾದ ವೈದ್ಯರಿಗೆ ಮತ್ತು ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಒದಗಿಸಬೇಕಾದ ಮೂಲಭೂತ ಸೌಕರ್ಯಗಳ ಬಗ್ಗೆ ಕಾಳಜಿಯಿಲ್ಲದೆ ನಿರ್ಲಕ್ಷ್ಯ ತೋರಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಸಿ ಬಳಿಯುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಸಾರ್ವಜನಿಕರಿಂದ ಆರೋಪವು ಸಹ ಕೇಳಿ ಬರುತ್ತಿದೆ..

ಮುಖ್ಯಾಂಶಗಳು: 
ಸರ್ಕಾರಿ ಆಸ್ಪತ್ರೆ ಮತ್ತು ವೈದ್ಯರಿಗೆ ಬೇಕಾದ ಮೂಲಭೂತ ಸೌಕರ್ಯ :
-ಬಹುಮುಖ್ಯವಾಗಿ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆಸೌಕರ್ಯದ ವ್ಯವಸ್ಥೆ ಇರುವ ವಸತಿ ಗೃಹಗಳ ಅವಶ್ಯಕತೆ ಇದೆ..
-ಅಂಗವಿಕಲರಿಗೆ ಬೇಕಾದ ವಿಶೇಷ ಶೌಚಾಲಯದ ವ್ಯವಸ್ಥೆ.
-ಆಸ್ಪತ್ರೆಗೆ ಬರುವ ಹೊರ ರೋಗಿಗಳಿಗೆ ಕುಡಿಯುವ ನೀರಿನ ಶುದ್ಧ ಘಟಕಗಳು ಹಾಗೂ ಬಿಸಿ ನೀರಿನ ವ್ಯವಸ್ಥೆ..
-ಆಸ್ಪತ್ರೆಯಲ್ಲಿ ಖಾಯಂ ಅರವಳಿಕೆ ತಜ್ಞರ ಅವಶ್ಯಕತೆ ಇದೆ..
-ಎಕ್ಸ್ ರೇ ತೆಗೆಯಲು ಸಿಬ್ಬಂದಿ ಅವಶ್ಯಕತೆ ಹೆಚ್ಚಿನದಾಗಿದೆ..
-ಪಾರ್ಕಿಂಗ್ ವ್ಯವಸ್ಥೆ ತುರ್ತು ವಾಹನ ನಿಲುಗಡೆಗೂ ಸಹ ಸ್ಥಳವಕಾಶವಿಲ್ಲದಿರುವ ಹೊರಾಂಗಣ ನೋಟ.

ಸರ್ಕಾರಿ ಆಸ್ಪತ್ರೆಗೆ ಪ್ರತಿದಿನ ಸಾವಿರಾರು ರೋಗಿಗಳಿಗೆ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ, ಸಮಯಕ್ಕೆ ಸಿಗದ ತುರ್ತು ವಾಹನ ವ್ಯವಸ್ಥೆ, ಈ ಹಿಂದೆ ಇದ್ದಂತಹ ತಹಶೀಲ್ದಾರ್ ನಹೀದಾ ಜಮ್‍ಜಮ್ ಆಸ್ಪತ್ರೆಯ ಕಳ್ಳಾಟವನ್ನು ರಹಸ್ಯ ಕಾರ್ಯಚರಣೆಯೊಂದಿಗೆ ತುರ್ತು ವಾಹನದ ಅವ್ಯವಸ್ಥೆಯನ್ನು ಬಯಲು ಮಾಡಿದ್ದರು, ಆದರೂ ಇಲ್ಲಿನ ತಾಲೂಕು ವೈದ್ಯಾಧಿಕಾರಿ ಡಾ.ವಿಜಯ್‍ಕುಮಾರ್ ಎಚ್ಚೆತ್ತುಕೊಂಡು ಸಮಸ್ಯೆಯನ್ನು ಸರಿಪಡಿಸುವಲ್ಲಿ ವಿಫಲರಾಗಿದ್ದಾರೆ, ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ ಪರಮೇಶ್ವರರವರು ಕ್ಷೇತ್ರದ ಜನತೆಯ ಆರೋಗ್ಯ ಮತ್ತು ಹಿತರಕ್ಷಣೆಗಾಗಿ ಆರೋಗ್ಯ ಸಚಿವರೊಂದಿಗೆ ಮಾತನಾಡಿ ಉತ್ತಮ ವೈದ್ಯಾಧಿಕಾರಿಯನ್ನು ನೇಮಿಸಿ ಹಾಗೂ ಕೇಂದ್ರ ಸ್ಥಾನದಲ್ಲಿ ವೈದ್ಯರು ಇರುವಂತೆ ವೈದ್ಯರಿಗೆ ಮೂಲಭೂತ ಸೌಕರ್ಯದೊಂದಿಗೆ ವಸತಿ ಗೃಹಗಳನ್ನು ನಿರ್ಮಿಸಿ ಕ್ಷೇತ್ರದ ಜನರ ಸೇವೆಗೆ ಅನುಕೂಲ ಕಲ್ಪಿಸಬೇಕೆಂದು ಕ್ಷೇತ್ರದ ಜನತೆಯ ಒತ್ತಾಯವಾಗಿದೆ.

ನಮ್ಮ ಆಸ್ಪತ್ರೆಯಲ್ಲಿ ಉತ್ತಮ ಅನುಭವವುಳ್ಳ 12 ಮಂದಿ ವೈದ್ಯರ ತಂಡ ಕರ್ತವ್ಯ ನಿರ್ವಹಿಸುತ್ತಿದ್ದು, ನಮಗೆ ಅರಿವಳಿಕೆ ತಜ್ಞರು ಬೇಕಾಗಿದ್ದಾರೆ, ಎಕ್ಸ್ ರೇ ತಜ್ಞರು, ಹಾಗೂ ಕೆಲವು ಸಿಬ್ಬಂದಿಗಳ ಅವಶ್ಯಕತೆ ಇದ್ದು ಆದಷ್ಟು ಬೇಗ ವೈದ್ಯರಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಉತ್ತಮ ಗುಣಮಟ್ಟದ ವಸತಿ ಗೃಹಗಳನ್ನು ನಿರ್ಮಿಸಿಕೊಡುವಂತೆ ಈಗಾಗಲೇ ಜಿಲ್ಲಾ ವೈದ್ಯಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಅವರು ಕೂಡ ಸ್ಪಂದಿಸಿ ಸಂಬಂದಪಟ್ಟ ಸಚಿವರೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸುವುದಾಗಿ ತಿಳಿಸಿದ್ದಾರೆ. ಗೃಹ ಸಚಿವರು ಸಹ ಆಸ್ಪತ್ರೆಯ ಕಡೆ ಗಮನಹರಿಸಿ ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ, ವೈದ್ಯರ ತಂಡ ಇರುವುದೇ ಸಾರ್ವಜನಿಕರ ಆರೋಗ್ಯ ಕಾಪಾಡುವುದಕ್ಕಾಗಿ ನಮ್ಮ ಕೆಲಸ ಪ್ರಮಾಣಿಕವಾಗಿ ಮಾಡುತ್ತೇವೆ.
-ಡಾ.ಲಕ್ಷ್ಮೀಕಾಂತ್
ಮುಖ್ಯಾವೈದ್ಯಾಧಿಕಾರಿ, ಸಾರ್ವಜನಿಕ ಆಸ್ಪತ್ರೆ
ಕೊರಟಗೆರೆ.

-ಸಿದ್ದರಾಜು. ಕೆ ಕೊರಟಗೆರೆ.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.