ಕುಣಿಗಲ್ : ಹಾಡಹಗಲೇ ವ್ಯಕ್ತಿಯ ಮೇಲೆ ಲಾಂಗ್‌ನಿಂದ ಹಲ್ಲೆ
Team Udayavani, Aug 3, 2023, 11:29 PM IST
ಕುಣಿಗಲ್ : ಹಳೇ ದ್ವೇಷ ಹಿನ್ನಲೆಯಲ್ಲಿ ಗುಪೊಂದು ಲಾಂಗಿನಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಡಹಗಲೇ ಪಟ್ಟಣದ ಮಲ್ಲಾಘಟ್ಟ ಎಲ್‌ಐಸಿ ಆಫೀಸ್ ಮುಂಭಾಗದಲ್ಲಿ ಗುರುವಾರ ನಡೆದಿದೆ.
ತಾಲೂಕಿನ ಮೇಸ್ತ್ರಿಗೌಡನಪಾಳ್ಯ ಗ್ರಾಮದ ಜಗದೀಶ್ ಅಲಿಯಾಸ್ ಜಗ ಲಾಂಗ್ ನಿಂದ ಹಲ್ಲೆಗೆ ಒಳಗಾದ ವ್ಯಕ್ತಿ. ಗುರುವಾರ ಮಧ್ಯಾಹ್ನ ಸುಮಾರು 3.45 ರ ಸಮಯದಲ್ಲಿ ಕುಣಿಗಲ್ ಪಟ್ಟಣದ ಹಳೇಯ ರಾಷ್ಟ್ರೀಯ ಹೆದ್ದಾರಿ 48 ರ ಬಿ.ಎಂ ರಸ್ತೆ ಮಲ್ಲಾಘಟ್ಟದ ಎಲ್.ಐ.ಸಿ ಆಫೀಸ್ ಮುಂಭಾಗದಲ್ಲಿ ಎಸ್.ಕೆ.ಎನ್ ಬಾರ್ ಅಂಡ್ ರೆಸ್ಟೋರೆಂಟ್ ಸಮೀಪ ಜಗದೀಶ್, ಆತನ ಸ್ನೇಹಿತ ರೇಣುಕಾ ಕುಣಿಗಲ್ ಕಡೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಬೈಕ್‌ಗಳಲ್ಲಿ ಬಂದ ಕೂತರಹಳ್ಳಿ ಗ್ರಾಮದ ಆಕಾಶ್, ಹುಚ್ಚಲಕ್ಕಯ್ಯನಪಾಳ್ಯದ ಗ್ರಾಮದ ಚಿಕ್ಕಣ್ಣ, ಕುಣಿಗಲ್ ಪಟ್ಟಣದ ಆಶ್ರಯ ಕಾಲೋನಿಯ ಶ್ರೀನಿವಾಸ್ (ಸೀನ) ಮತ್ತು ಇತರೇ ಇಬ್ಬರು ಸೇರಿ ಏಕಾಏಕಿ ಅವಾಚ್ಯವಾದ ಶಬ್ದಗಳಿಂದ ಬೈದು, ಲಾಂಗ್ ನಿಂದ ಜಗದೀಶನ ತೊಡೆಯ ಮೇಲೆ ಹೊಡೆಯಲಾಗಿದೆ.
ಜಗದೀಶ ಕೆಳಗೆ ಬಿದ್ದಾಗ ಮತ್ತೆ ಆಕಾಶ ಲಾಂಗ್ ನಿಂದ ಜಗದೀಶನ ತಲೆಗೆ ಹೊಡೆದಿದ್ದಾನೆ ಎಂದು ರೇಣುಕಾ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾನೆ.
ಘಟನಾ ಸ್ಥಳಕ್ಕೆ ಜನರು ಬರುತ್ತಿದಂತೆ ಆರೋಪಿಗಳು ಪರಾರಿಯಾಗಿದ್ದಾರೆ, ತೀವ್ರವಾಗಿ ಗಾಯಗೊಂಡ ಜಗದೀಶನನ್ನು ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಕರೆದ್ಯೋಯಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.