Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ
Team Udayavani, Nov 14, 2024, 10:47 AM IST
ಕುಣಿಗಲ್: ಕಳೆದ ಒಂದೇ ರಾತ್ರಿಯಲ್ಲಿ (ನ.12) ಸರಣಿ ಕಳ್ಳತನವಾಗಿರುವುದು ತಾಲೂಕಿನ ಹುತ್ರಿದುರ್ಗ ಹೋಬಳಿ ಕೆಂಪನಹಳ್ಳಿ ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ.
ತಾಲೂಕಿನ ಹುತ್ರಿದುರ್ಗ ಹೋಬಳಿ ಕೆಂಪನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಬಾಗಿಲು ಹಾಗೂ ಕಿಟಕಿ ಸರಳುಗಳನ್ನು ಮುರಿದು ಲಕ್ಷಾಂತರ ರೂ. ಬೆಲೆ ಬಾಳುವ ಎಲೆಕ್ಟ್ರಾನಿಕ್ ಯಂತ್ರಗಳನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.
ನ.12ರ ಮಂಗಳವಾರ ತರಗತಿ ಮುಗಿದ ಬಳಿಕ ಎಂದಿನಂತೆ ಶಿಕ್ಷಕರು ಶಾಲೆಗೆ ಬೀಗ ಹಾಕಿಕೊಂಡು ಹೋಗಿದ್ದರು. ಶಾಲೆಯ ಗಣಕಯಂತ್ರದ ಕೊಠಡಿಯ ಬಾಗಿಲ ಬೀಗ ಮುರಿದ ಕಳ್ಳರು ಒಳನುಗ್ಗಿ ಎರಡು ಯುಪಿಎಸ್ ಬ್ಯಾಟರಿ ಕಳವು ಮಾಡಿದ್ದಾರೆ.
ಬಳಿಕ ಶಾಲೆಯ ಸಮೀಪದಲ್ಲಿದ್ದ ಗ್ರಾಮ ಪಂಚಾಯತ್ ಹಿಂಬದಿಯಿಂದ ಕಿಟಕಿ ಸರಳುಗಳನ್ನು ಕತ್ತಿರಿಸಿ ಒಳ ನುಗ್ಗಿದ ಕಳ್ಳರು ಯುಪಿಎಸ್ ಬ್ಯಾಟರಿ, ಎಲ್ ಇಡಿ ಟೀವಿ, ಡಿವಿಆರ್ ದೋಚಿಕೊಂಡು ಪರಾರಿಯಾಗಿದ್ದಾರೆ.
ಪಂಚಾಯತ್ ಪಿಡಿಓ, ಶಾಲೆಯ ಮುಖ್ಯ ಶಿಕ್ಷಕ ನೀಡಿದ ದೂರಿನನ್ವಯ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.