Kunigal: ಪ್ರತ್ಯೇಕ ಘಟನೆ; ಇಬ್ಬರು ಸಾವು
ವಿದ್ಯುತ್ ಸ್ಪರ್ಶಗೊಂಡು ಸಾವು ; ತೆರೆದ ಬಾವಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು
Team Udayavani, Jun 2, 2024, 9:08 AM IST
ಕುಣಿಗಲ್: ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಅಮೃತ್ತೂರು ಹಾಗೂ ಹುಲಿಯೂರುದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.
ತಾಲೂಕಿನ ಹುಲಿಯೂರುದುರ್ಗ ಹೋಬಳಿ ಹುಲಿಕಟ್ಟೆ ಗ್ರಾಮದ ಅವಿನಾಶ್ (27), ಎಡಿಯೂರು ಹೋಬಳಿ ತುವ್ವೆಕೆರೆ ಗ್ರಾಮದ ನಿವಾಸಿ ಮನವಳಯ್ಯ (40) ಪ್ರತ್ಯೇಕ ಪ್ರಕರಣದಲ್ಲಿ ಮೃತಪಟ್ಟ ದುರ್ದೈವಿಗಳು.
ವಿದ್ಯುತ್ ಸ್ಪರ್ಶ ಸಾವು : ತಾಲೂಕಿನ ಹುಲಿಯೂರುದುರ್ಗ ಹೋಬಳಿ ಹುಲಿಕಟ್ಟೆ ಗ್ರಾಮದ ಅವಿನಾಶ್ ತಮ್ಮ ಜಮೀನಿನಲ್ಲಿರುವ ರೇಷ್ಮೆ ಹುಳುವಿನ ಮನೆ ಸ್ವಚ್ಛಗೊಳಿಸಲು ಮೋಟರ್ ಆನ್ ಮಾಡುವ ವೇಳೆ ಅವರಿಗೆ ವಿದ್ಯುತ್ ಸ್ಪರ್ಶಿಸಿದೆ ಎನ್ನಲಾಗಿದೆ. ವಿದ್ಯುತ್ ಅವಘಡದಿಂದ ಗಾಯಗೊಂಡಿದ್ದ ಅವಿನಾಶ್ ನನ್ನು ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆತರುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಹುಲಿಯೂರುದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ತೆರೆದ ಬಾವಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು: ತಾಲೂಕಿನ ಎಡಿಯೂರು ಹೋಬಳಿ ತುವ್ವೆಕೆರೆ ಗ್ರಾಮದ ಮನವಳಯ್ಯ ಎಮ್ಮೆ ಮೇಯಿಸಲು ಜಮೀನಿಗೆ ಹೋಗಿದ್ದ ವೇಳೆ ನೀರು ಕುಡಿಯಲು ತೆರೆದ ಬಾವಿ ಬಳಿಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ.
ಮೃತ ದೇಹವನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ಹೊರ ತೆಗೆದಿದ್ದಾರೆ. ಅಮೃತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.