ಅಕ್ರಮವಾಗಿ ನುಸುಳಿದವರಿಗೆ ಜಮೀನು ಮಂಜೂರಿಲ್ಲ: ಡಾ.ಜಿ.ಪರಮೇಶ್ವರ್


Team Udayavani, Nov 25, 2022, 10:06 PM IST

1-addasd

ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಹೋಬಳಿ ಅಕ್ಕಾಜಿಹಳ್ಳಿ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನುಸುಳಿ ಬೇಲಿ ಹಾಕಿಕೊಂಡಿರುವ ಬೆಂಗಳೂರಿನ ಮೂಲವರಿಗೆ ಯಾವುದೇ ಕಾರಣಕ್ಕೂ ಜಮೀನು ಮಂಜೂರು ಮಾಡುವುದಿಲ್ಲ, ಅದನ್ನು ತಾಲ್ಲೂಕಿನ ರೈತರಿಗೆ ಕೊಡಿಸುವುದು ಶತ ಸಿದ್ದ ಎಂದು ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು.

ಅವರು ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಕಂದಾಯ ಇಲಾಖಾ ವತಿಯಿಂದ ಕೊರಟಗೆರೆ ತಾಲೂಕಿನ ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಪತ್ರ, ಪಹಣಿ, ಹಕ್ಕು ಪತ್ರ ದಾಖಲಾತಿಗಳು ಹಾಗೂ ಪಿಂಚಣಿ ಮಾಸಾಶನ ವಿತರಣೆ ಕಾರ್ಯದಲ್ಲಿ ಫಲಾನುಭವಿಗಳಿಗೆ ದಾಖಲಾತಿ ಪತ್ರಗಳನ್ನು ವಿತರಿಸಿ ಮಾತನಾಡಿ, ಕಂದಾಯ ಇಲಾಖೆಯು 1951 ರಿಂದ ಉಳುವವನಿಗೆ ಭೂಮಿ ಎನ್ನುವ ಆದೇಶ ತಂದು ಜಮೀನಿಲ್ಲದ ರೈತರಿಗೆ ಜಮೀನನ್ನು ಮಂಜೂರು ಮಾಡಿಕೊಟ್ಟಿದೆ. ದೇವರಾಜು ಅರಸು ಅವರ ಕಾಲದಲ್ಲಿ ಪ್ರಾರಂಭವಾದ ಈ ಪ್ರಕ್ರಿಯೆ ಲಕ್ಷಾಂತರ ರೈತರು ಇದರ ಉಪಯೋಗ ಪಡೆದು ವ್ಯವಸಾಯ ಮಾಡುತ್ತಿದ್ದಾರೆ ಎಂದರು.

ಕೊರಟಗೆರೆ ತಾಲೂಕಿನಲ್ಲಿ ಇಂದು 121 ಸಾಗುವಳಿ ಹಕ್ಕುಪತ್ರ, 30 ಸಾಗುವಳಿ ಪತ್ರ,162 ಪಿಂಚಣಿ ಮಾಸಾಶನಗಳ ಪತ್ರಗಳನ್ನು ವಿತರಿಸಲಾಗುತ್ತಿದೆ. ರೈತರಿಗೆ ಸಾಗುವಳಿ ಯೊಂದಿಗೆ ಹಕ್ಕುಪತ್ರಗಳನ್ನು ವಿತರಿಸುವ ಕೆಲಸ ರಾಜ್ಯದಲ್ಲೇ ಕೊರಟಗೆರೆ ತಾಲ್ಲೂಕಿನಲ್ಲಿ ವಿನೂತನವಾಗಿ ಮಾಡುತ್ತಿದ್ದೇವೆ, ಇದರಿಂದ ಸಾಗುವಳಿ ಪಡೆದ ರೈತರು ಹಕ್ಕುಪತ್ರಕ್ಕಾಗಿ ಕಂದಾಯ ಇಲಾಖೆಗೆ ಅಲೆಯುವುದು ತಪ್ಪಿದಂತೆ ಆಗುತ್ತದೆ. ಆ ಕೆಲಸವನ್ನು ನನ್ನ ಅಧ್ಯಕ್ಷತೆಯಲ್ಲಿ ಬಗರ್ ಹುಕ್ಕುಂ ಸಮಿತಿ, ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಗಳು ಬಹಳ ಅಚ್ಚುಕಟ್ಟಾಗಿ ಮಾಡಿದ್ದಾರೆ, ಅದರೆ ರೈತರು ತಮಗೆ ಮಂಜೂರಾದ ಜಮೀನನ್ನು 25 ವರ್ಷಗಳ ಕಾಲ ಪರಭಾರೆ ಮಾಡುವಂತ್ತಿಲ್ಲ ಎಂದರು.

ತಾಲೂಕಿನ ಹೊಳವನಹಳ್ಳಿ ಹೋಬಳಿಯ ಅಕ್ಕಾಜಿಹಳ್ಳಿ ಗ್ರಾಮ ಸರ್ಕಾರಿ ಜಮೀನಿನಲ್ಲಿ ಬೆಂಗಳೂರು ಮೂಲದವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ನೂರಾರು ಎಕರೆ ಜಮೀನನ್ನು ನಮ್ಮ ರೈತರಿಂದ ತಪ್ಪಿಸಿ ಅಕ್ರಮವಾಗಿ ಬೇಲಿ ಹಾಕಿಕೊಂಡಿದ್ದಾರೆ. ಅವರಿಗೆ ಸಾಗುವಳಿ ಪತ್ರ ಮಾಡಿಕೊಡುವಂತೆ ನನ್ನ ಮೇಲೆ ಮತ್ತು ಅಧಿಕಾರಿಗಳ ಮೇಲೆ ಹಲವು ಒತ್ತಡಗಳನ್ನು ಹಾಕಿ ಮಾಡಿಕೊಡುವಂತೆ ನನ್ನ ಮೇಲೆ ಮತ್ತು ಅಧಿಕಾರಿಗಳ ಮೇಲೆ ಹಲವು ಒತ್ತಡಗಳನ್ನು ಹಾಕಿದ್ದಾರೆ. ಆದರೆ ಅವುಗಳಿಗೆ ಜಗ್ಗುವ ಪ್ರಶ್ನೆಯೇ ಇಲ್ಲ. ಯಾವುದೇ ಕಾರಣಕ್ಕು ಬೆಂಗಳೂರು ಮೂಲದವರಿಗೆ ಸಾಗುವಳಿ ಜಮೀನನ್ನು ನೀಡುವುದಿಲ್ಲ ಎಂದು ಖಡಾ ಕಂಡಿತವಾಗಿ ತಿಳಿಸಿದರು.

ರೈತರಿಗೆ ಜಮೀನು ನೀಡುವ ಜೊತೆಗೆ ಬೆಳೆದಂತ ಬೆಳೆಗೆ ಬೆಂಬಲ ಬೆಲೆ, ಅವರ ದವಸ ಧಾನ್ಯಗಳನ್ನು ಖರೀದಿಸಿದ ಸರ್ಕಾರದ ಸಂಸ್ಥೆಗಳು ಅವರಿಗೆ ಶೀಘ್ರ ಹಣಪಾವತಿ ಮಾಡುವ ಕೆಲಸ ಮಾಡಿದರೆ ರೈತರಿಗೆ ಅನುಕೂಲ ಮಾಡದಂತ್ತಾಗುತ್ತದೆ. ಇಲ್ಲದಿದ್ದಲ್ಲಿ ವ್ಯವಸಾಯ ಮಾಡಲು ಮುಂದೆ ಯಾರೊಬ್ಬರು ಬರುವುದಿಲ್ಲ ಎಂದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ನಾಹೀದಾ ಜಮ್ ಜಮ್, ಗ್ರೇಡ್-೨ ತಹಶೀಲ್ದಾರ್ ನರಸಿಂಹಮೂರ್ತಿ. ಅರಣ್ಯ ಅಧಿಕಾರಿ ಸುರೇಶ್, ಕೃಷಿ ಅಧಿಕಾರಿ ನಾಗರಾಜು, ಎಇಇ ರವಿಕುಮಾರ್, ಬಗರ್ ಹುಕ್ಕುಂ ಸಮಿತಿಯ ಸದಸ್ಯರಾದ ಹೇಮಲತಾ, ಹನುಮಂತರಾಜು, ದೇವರಾಜು ಉಪತಹಶೀಲ್ದಾರ್‌ಗಳಾದ ಮಧುಚಂದ್ರ, ಎ.ಜಿ. ರಾಜು, ಮಹೇಶ್, ಕಂದಾಯ ಇಲಾಖಾಧಿಕಾರಿಗಳಾದ ಪ್ರತಾಪ್, ಅರುಣ್‌ಕುಮಾರ್, ಜಯಪ್ರಕಾಶ್, ಪವನ್‌ಕುಮಾರ್, ಬಸವರಾಜು, ರಾಖೇಶ್, ರಘು, ಮಾಜಿ ಜಿ.ಪಂ.ಸದಸ್ಯ ಪ್ರಸನ್ನಕುಮಾರ್, ಪ.ಪಂ ಸದಸ್ಯ ಎ ಡಿ ಬಲರಾಮಯ್ಯ, ಸೇರಿದಂತೆ ಇತರರು ಹಾಜರಿದ್ದರು.

ಟಾಪ್ ನ್ಯೂಸ್

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.