ಮುಂದಿನ ಸಿಎಂ ಬಿಜೆಪಿಯವರೇ
Team Udayavani, Oct 25, 2022, 5:06 PM IST
ಶಿರಾ: ನಾನು ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಪಕ್ಷಕ್ಕೆ ನಿಷ್ಠನಾಗಿದ್ದದು, ಅದರಲ್ಲಿ ಯಾವುದೇ ಸಂದೇಹ ಬೇಡ. ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಕೂಡ ಬಿಜೆಪಿ ಪಕ್ಷದವರೇ ಆಗಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
ನಗರದ ಸೇವಾ ಸದನ ದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಚಿಕ್ಕಹುಲಿಕುಂಟೆ ಗ್ರಾಮದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಪುತ್ಥಳಿ ಅನಾವರಣ ಹಾಗೂ ಕುಂಚಿಟಿಗ ಒಕ್ಕಲಿಗ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿ, ಕುಂಚಿಟಿಗ ಸಮುದಾಯಕ್ಕೆ ಒಬಿಸಿ ವಂಚನೆಯಾಗಿದೆ. ಒಕ್ಕಲಿಗರ ಉಪಜಾತಿಯಾಗಿ ರಾಜ್ಯದಲ್ಲಿ ಒಬಿಸಿ ಸೌಲಭ್ಯ ಇದೆ. ಆದರೆ, ಕೇಂದ್ರದ ಪಟ್ಟಿಯಲ್ಲಿ ಇಲ್ಲ. ಆದ್ದರಿಂದ ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಯಾರೇ ಆದರೂ ಸಹ ಒಬಿಸಿ ಮೀಸಲಾತಿ ಕೊಡಿಸಬೇಕು ಎಂಬ ಮಾತನ್ನು ಹೇಳಿದ್ದೇನೆ. ಆದರೆ ಕೆಲವು ಮಾಧ್ಯಮಗಳಲ್ಲಿ ಎಚ್. ಡಿ.ಕುಮಾರಸ್ವಾಮಿಯವರು ಮುಖ್ಯ ಮಂತ್ರಿಯಾದರೆ ನನಗೆ ಸಂತೋಷ ಎಂಬ ರೀತಿಯಲ್ಲಿ ಬಿಂಬಿಸಿದ್ದಾರೆ.
ಈ ನಿಟ್ಟಿನಲ್ಲಿ ನಾನು ಸ್ಪಷ್ಟನೆ ನೀಡುತ್ತಿದ್ದೇನೆ. ಕೇಂದ್ರದಲ್ಲಿ ನರೇಂದ್ರ ಮೋದಿಯವರು ಹಾಗೂ ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಯವರು ಉತ್ತಮ ಆಡಳಿತ ನೀಡುತ್ತಿ ದ್ದಾರೆ. ಇಂತಹ ಸಂದರ್ಭದಲ್ಲಿ ಬೇರೆ ಪಕ್ಷ ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದರು.
ನ.11 ರಂದು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣವಾಗಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸಲಿದ್ದಾರೆ. 23 ಎಕರೆಯಲ್ಲಿ ಕೆಂಪೇಗೌಡ ಅವರ ಜೀವನ ಚರಿತ್ರೆ ಹಾಗೂ ಸಾಧನೆಗಳ ಮ್ಯೂಸಿಯಂ ಮಾಡುವ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಯಡಿಯೂರಪ್ಪ ಅವರು ಶಿಕಾರಿಪುರ ಕಾರ್ಯಕ್ರಮದಲ್ಲಿ ಕುಂಚಿಟಿಗ ಸಮುದಾಯಕ್ಕೆ ಒಬಿಸಿ ಕೊಡಿಸುವುದು ನಮ್ಮ ಜವಾಬ್ದಾರಿ ಎಂದು ಹೇಳಿದ್ದಾರೆ. ನಾವು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದೇವೆ. ಯಾವುದೇ ಗೊಂದಲಕ್ಕೆ ಯಾರೂ ಕಿವಿಗೊಡಬೇಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.