ಜನರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸಲಿ

ಮಧುಗಿರಿಯ ದೊಡ್ಡದಾಳವಟ್ಟದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಶಾಸಕ ಎಂ.ವಿ. ವೀರಭದ್ರಯ್ಯ ಅರ್ಜಿದಾರರ ಮನವಿ ಆಲಿಸಿದರು. ಇಒ ನಂದಿನಿ ಇತರರಿದ್ದರು.

Team Udayavani, Jun 29, 2019, 4:21 PM IST

tk-tdy-3..

ಮಧುಗಿರಿ: ಸಾರ್ವಜನಿಕರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸಬೇಕು ಎಂದು ಶಾಸಕ ಎಂ.ವಿ. ವೀರಭದ್ರಯ್ಯ ಹೇಳಿದರು.

ಐ.ಡಿ.ಹಳ್ಳಿ ಹೋಬಳಿಯ ದೊಡ್ಡದಾಳವಟ್ಟ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ ಆವರಣದಲ್ಲಿ ತಾಲೂಕು ಆಡಳಿತದಿಂದ ನಡೆದ ಹೋಬಳಿ ಮಟ್ಟದ ಪ್ರಥಮ ಜನಸ್ಪಂದನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತ್ಯೇಕ ಕಡತ ಇಡಿ: ಅಧಿಕಾರಿಗಳು ಕೇವಲ ಅರ್ಜಿ ಪಡೆದರಷ್ಟೆ ಸಾಲದು. ಅವರ ಸಮಸ್ಯೆಗೆ ಮುಂದಿನ ಜನಸ್ಪಂದನೆ ಕಾರ್ಯಕ್ರಮದ ಹೊತ್ತಿಗೆ ಪರಿಹಾರ ಕೊಡಿಸಬೇಕು. ಅಧಿಕಾರಿಗಳು ಈ ಕಾರ್ಯಕ್ರಮದ ಅರ್ಜಿಗೆ ಪ್ರತ್ಯೇಕ ಕಡತ ಇಡಬೇಕು. ಇಂದಿನ ಕಾರ್ಯ ಕ್ರಮದಲ್ಲಿ ಹೆಚ್ಚಾಗಿ ಕಂದಾಯ ಇಲಾಖೆಯ ಸಮಸ್ಯೆಗಳು ಇದ್ದು, ಖಾತೆ ಬದಲಾವಣೆ, ಪೌತಿ ಖಾತೆ ಹಾಗೂ ಪಹಣಿ ತಿದ್ದುಪಡಿ ಮಾಡ ಬೇಕಿದ್ದು, ಹಲವಾರು ವರ್ಷದಿಂದ ಬಾಕಿಯಿದೆ. ಸಾಮಾನ್ಯ ವರ್ಗದ ಮನೆಗಳಿಗೆ ಬೇಡಿಕೆಯಿದ್ದು, ಹೆಚ್ಚುವರಿ 700 ಮನೆಗಳು ಹಾಗೂ ಅಂಬೇಡ್ಕರ್‌ ವಸತಿ ನಿಗಮದಿಂದ 1 ಸಾವಿರ ಮನೆ ತಂದಿದ್ದು, ವಸತಿ ರಹಿತರಿಗೆ ಹಂಚಿಕೆ ಮಾಡಲಾಗುವುದು ಎಂದರು.

ಅರ್ಜಿ ಸ್ವೀಕರಿಸಿದ ಶಾಸಕ: ಪಿಂಚಣಿ ಹಣವನ್ನು ಮುಖ್ಯಮಂತ್ರಿ ಕುಮಾರ ಸ್ವಾಮಿ ಹೆಚ್ಚಿಸಲು ಕ್ರಮ ಕೈಗೊಂಡಿದ್ದು, ಕಾರ್ಯ ಕರ್ತರು ಗ್ರಾಮಗಳಲ್ಲಿನ ಫ‌ಲಾನುಭವಿಗಳ ಪಟ್ಟಿ ಮಾಡಿ ಪಿಂಚಣಿ ಕೊಡಿಸಬೇಕು ಎಂದು ತಿಳಿಸಿದರು.

ಅಂಗವಿಕಲರು ಹಾಗೂ ವೃದ್ಧರ ಅರ್ಜಿಯನ್ನು ಶಾಸಕರೇ ಸ್ವೀಕರಿಸಿದರು. ಹಾಗೂ 80 ಅರ್ಜಿಗಳಲ್ಲಿ 60 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು. 30 ಪಿಂಚಣಿ ಆದೇಶ ವಿತರಿಸಿದ್ದು, 50 ಭಾಗ್ಯಲಕ್ಷ್ಮಿ ಬಾಂಡ್‌ ಹಾಗೂ ನೂರಾರು ಇತರೆ ಯೋಜನೆಯ ಆದೇಶಪತ್ರ ವಿತರಿಸಿದರು. ಉಪವಿಭಾಗಾಧಿಕಾರಿ ಚಂದ್ರ ಶೇಖರಯ್ಯ ಮಾತನಾಡಿ, ಪ್ರತಿ ಇಲಾಖೆಗಳ ಅರ್ಜಿಗೆ ಪ್ರತ್ಯೇಕ ಕೌಂಟರ್‌ ಇರಲಿದ್ದು, ನಿಮ್ಮ ಸಮಸ್ಯೆ ಸಾಧ್ಯವಾದಷ್ಟೂ ಸ್ಥಳದಲ್ಲೇ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ತಹಶೀಲ್ದಾರ್‌ ನಂದೀಶ್‌ ಮಾತನಾಡಿ, ಜನರ ಮನೆ ಬಾಗಿಲಿಗೆ ಸರ್ಕಾರ ಬರುವ ಕಾರ್ಯ ಕ್ರಮ ಇದಾಗಿದ್ದು, ಜು.5ರಂದು ಗರಣಿ ಗ್ರಾ.ಪಂ.ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸ್ಥಳದಲ್ಲೇ ಸಮಸ್ಯೆ ಬಗೆಹರಿ ಸುವ ಕಾರ್ಯ ಕ್ರಮವಾಗಿದೆ ಎಂದು ತಿಳಿಸಿದರು.

ಇಒ ನಂದಿನಿ, ಚಿಕ್ಕದಾಳವಟ್ಟ ಗ್ರಾಪಂ ಅಧ್ಯಕ್ಷೆ ಸುಜಾತ, ಜಿಪಂ ಮಾಜಿ ಸದಸ್ಯ ವೆಂಕಟರಂಗಾರೆಡ್ಡಿ, ಕಂದಾಯಾಧಿಕಾರಿ ನಾರಾಯಣಪ್ಪ, ಪಿಡಿಒ ಮಂಜುನಾಥ್‌, ನವೀನ್‌, ತಾಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು, ಜೆಡಿಎಸ್‌ ಕಾರ್ಯಕರ್ತರು, ಸಾರ್ವಜನಿಕರಿದ್ದರು.

ಟಾಪ್ ನ್ಯೂಸ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.