ಬೀದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ
Team Udayavani, May 28, 2020, 6:37 AM IST
ಕುಣಿಗಲ್: ಲಾಕ್‌ಡೌನ್ ವೇಳೆಯಲ್ಲಿ ಉದ್ಯೋಗ ವಿಲ್ಲದೆ ತೀವ್ರ ಸಂಕಷ್ಟದಲ್ಲಿ ಸಿಲುಕಿರುವ ಬೀದಿ ಬದಿ ವ್ಯಾಪಾರಿಗಳು ಹಾಗೂ ಶ್ರಮಿಕ ವರ್ಗದವರು ಖಾಸಗಿ ಫೈನಾನ್ಸ್ ಅವರಿಂದ ಶೋಷಣೆಗೆ ಒಳಗಾಗುವುದನ್ನು ತಪ್ಪಿಸುವ ದಿಸೆಯಲ್ಲಿ ಡಿಸಿಸಿ ಬ್ಯಾಂಕ್‌ನಿಂದ ಸಾಲ ಸೌಲಭ್ಯ ಕಲ್ಪಿಸಲಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಹೇಳಿದರು.
ಪಟ್ಟಣದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಬಡವರು ಬಂಧು ಯೋಜನಡಿಯಲ್ಲಿ ಪಟ್ಟಣದ ಬೀದಿ ಬದಿ ವ್ಯಾಪಾರಿಗಳಿಗೆ ಹಾಗೂ ಶ್ರಮಿಕ ವರ್ಗದ ಸುಮಾರು 70 ಜನ ಫಲಾನುಭವಿಗಳ ಶೂನ್ಯ ಉಳಿತಾಯ ಖಾತೆಗೆ ಸಾಲದ ಮೊತ್ತವನ್ನು ಜಮಾ ಮಾಡಿದ ಆದೇಶ ಪತ್ರ ವಿತರಿಸಿ ಮಾತನಾಡಿದರು. ಸಣ್ಣ ಮತ್ತು ಅತಿ ಸಣ್ಣ ಬೀದಿ ಬದಿ ವ್ಯಾಪಾರಸ್ಥರನ್ನು ಆರ್ಥಿಕವಾಗಿ ಪುನಶ್ಚೇತನಗೊಳಿಸಲು ಅವರು ಮಾಡುವ ವ್ಯಾಪಾರಕ್ಕನುಸಾರ ಹಣಕಾಸಿನ ಅವಶ್ಯಕತೆಗೆ ಅನುಗುಣವಾಗಿ ಸಾಲ ನೀಡಲಾಗುವುದು.
ಅಲ್ಲದೆ ಸಲೂನ್ ಅಂಗಡಿ, ಮಡಿವಾಳ ಸೇರಿದಂತೆ ಹಿಂದುಳಿದ ವರ್ಗದವರು ಮಾಡುವ ಕುಲ ಕಸುಬುಗಳ ವ್ಯಾಪಾರದ ಅಂಗಡಿಗಳಿಗೆ ಬ್ಯಾಂಕ್ ಯಾವುದೇ ರೀತಿಯ ಆಧಾರ ಇಲ್ಲದೆ ಸಾಲದ ಚೆಕ್‌ಗಳನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಿದೆ ಎಂದರು. ಸಾಲ ಸೌಲಭ್ಯ ಪಟ್ಟಣಕ್ಕೆ ಸೀಮಿತವಾಗದೇ ಗ್ರಾಮೀಣ ಪ್ರದೇಶದ ಬೀದಿ ಬದಿ ವ್ಯಾಪಾರಿಗಳಿಗೂ ಸಹಕಾರ ಸಂಘಗಳ ಮೂಲಕ ಪಕ್ಷಾತೀತವಾಗಿ ಎಲ್ಲರಿಗೂ ಸೌಲಭ್ಯ ನೀಡಲಾಗುವುದೆಂದು ತಿಳಿಸಿದರು.
ಬ್ಯಾಂಕ್ ನಿರ್ದೇಶಕರಾದ ಬಿ.ಶಿವಣ್ಣ, ಬಿ.ಎಸ್. ದೇವರಾಜ್, ಎಂ.ಡಿ. ಕುಬೇಂದ್ರನಾಯ್ಕ, ಸ್ಥಳೀಯ ಬ್ಯಾಂಕ್ ವ್ಯವಸ್ಥಾಪಕ ದಯಾಸಾಗರ್, ವಿಎಸ್‌ಎಸ್ ಎನ್ ಅಧ್ಯಕ್ಷರಾದ ಗಂಗಶಾನಯ್ಯ, ಐ.ಜಿ.ರಮೇಶ್, ಬೋರೇಗೌಡ, ಉಪಾಧ್ಯಕ್ಷ ಹಾಲುವಾಗಿಲು ಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ, ಪುರಸಭಾ ಸದಸ್ಯ ರಂಗಸ್ವಾಮಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.