ನಾಳೆಯಿಂದ ಮಾವು, ಹಲಸು ಮೇಳ
ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜನೆ ,ಮೇಳದಲ್ಲಿ ಸಸ್ಯ ಸಂತೆಗೆ ವ್ಯವಸೆ
Team Udayavani, May 31, 2019, 11:02 AM IST
ತುಮಕೂರು: ಜಿಲ್ಲಾಡಳಿತ, ಜಿಪಂ, ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಸಂಯುಕ್ತಾಶ್ರಯದಲ್ಲಿ ಜೂ.1ರಿಂದ 5ರವರೆಗೆ 5 ದಿನಗಳ ಕಾಲ ಮಾವು ಮತ್ತು ಹಲಸು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಸಸ್ಯ ಸಂತೆಯನ್ನು ಏರ್ಪಡಿಸಲಾಗಿದೆ ಎಂದು ಜಿಪಂ ಸಿಇಒ ಶುಭಾ ಕಲ್ಯಾಣ್ ತಿಳಿಸಿದರು. ನಗರದ ಜಿಪಂ ಮಿನಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಮೇಳವನ್ನು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.
ಜಿಲ್ಲೆಯಲ್ಲಿ ಮಾವು ಪ್ರಮುಖವಾದ ಬೆಳೆಯಾಗಿದ್ದು, 16,330 ಹೆಕ್ಟೇರ್ ಪ್ರದೇಶದ ವಿಸ್ತೀರ್ಣದಲ್ಲಿ ಬೆಳೆಯ ಲಾಗುತ್ತಿದೆ. ಬಾದಾಮಿ, ರಸಪುರಿ, ಸೇಂದೂರು, ತೋತಾಪುರಿ ಮತ್ತಿತರ ಮಾವಿನ ತಳಿಗಳನ್ನು ಹೆಚ್ಚಾಗಿ ಬೆಳೆಯುತ್ತಿ ರುವುದರಿಂದ 1.50ರಿಂದ 1.90 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ವಾರ್ಷಿಕ ಉತ್ಪಾದನೆಯಾಗುತ್ತಿದೆ ಎಂದು ಅಂದಾಜು ಮಾಡಲಾಗಿದೆ ಎಂದು ನುಡಿದರು. ಕಾರ್ಬೈಡ್ ಮುಕ್ತ
ಹಣ್ಣುಗಳ ಮಾರಾಟ: ಮೇಳದಲ್ಲಿ ರೈತರು ಹಣ್ಣುಗಳನ್ನು ಮಾರಾಟ ಮಾಡಲು ಉಚಿತವಾಗಿ 22 ಮಳಿಗೆಗಳನ್ನು ತೆರೆಯಲಾಗುತ್ತಿದೆ. ರೈತರಿಂದ ಗ್ರಾಹಕರಿಗೆ ಕಾರ್ಬೈಡ್ ಮುಕ್ತ ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳನ್ನು ಹಾಪ್‌ಕಾಮ್ಸ್ ನಿಗದಿಪಡಿಸಿದಂತೆ ಸುಲಭ ಬೆಲೆಯಲ್ಲಿ ನೇರ ಮಾರಾಟ ಮಾಡಲಾಗುವುದು. ವ್ಯಾಪಾರಿಗಳು ಬೇಗ ಹಣ್ಣು ಮಾಡುವ ದೃಷ್ಟಿಯಿಂದ ಬಲಿಯದೇ ಇರುವ ಕಾಯಿಗಳನ್ನು ಕಾರ್ಬೈಡ್ ರಾಸಾಯನಿಕ ವಸ್ತುವನ್ನು ಬಳಸಿ ಹಣ್ಣನ್ನು ಮಾಗಿಸುತ್ತಿದ್ದಾರೆ. ಕಾರ್ಬೈಡ್‌ಯುಕ್ತ ಹಣ್ಣುಗಳು ಕ್ಯಾನ್ಸರ್‌ಕಾರಕವಾಗಿವೆ. ಈ ನಿಟ್ಟಿನಲ್ಲಿ ಮೇಳದಲ್ಲಿ ಮಾರಾಟ ಮಾಡುವ ಹಣ್ಣುಗಳನ್ನು ಮಾಗಿಸಲು ರಾಸಾ ಯನಿಕವನ್ನು ಬಳಸಲಾಗಿದೆಯೇ ಎಂಬುದನ್ನು ಪರೀಕ್ಷಿಸಲು ಇಲಾಖೆಯಿಂದ ತಂಡವನ್ನು ನಿಯೋಜಿಸಲಾಗಿದೆ.ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಮೇಳಕ್ಕೆ ಆಗಮಿಸಿ ನೈಸರ್ಗಿಕವಾಗಿ ಹಣ್ಣು ಮಾಡಿದ ಮಾವು ಮತ್ತು ಹಲಸಿನ ಹಣ್ಣುಗಳನ್ನು ಖರೀದಿಸುವ ಮೂಲಕ ರೈತರನ್ನು ಉತ್ತೇಜಿಸಬೇಕು ಎಂದು ಮನವಿ ಮಾಡಿದರು.
ಬೆಳಗ್ಗೆ 11 ಗಂಟೆಗೆ ಮೇಳ ಉದ್ಘಾಟನೆ: ತೋಟಗಾರಿಕೆ ಉಪನಿರ್ದೇಶಕ ಬಿ.ರಘು ಮಾತನಾಡಿ, ಮೇಳವನ್ನು ಡಿಸಿಎಂ ಡಾ.ಜಿ. ಪರಮೇಶ್ವರ್ ಜೂ.1ರ ಬೆಳಗ್ಗೆ 11 ಗಂಟೆಗೆ ಉದ್ಘಾಟನೆ ಮಾಡಲಿದ್ದಾರೆ. ಕಾರ್ಮಿಕ ಸಚಿವ ವೆಂಕಟರಮಣಪ್ಪ, ಸಣ್ಣ ಕೈಗಾರಿಕೆ ಸಚಿವ ಎಸ್.ಆರ್.ಶ್ರೀನಿವಾಸ್ ತಾಂತ್ರಿಕ ಕಿರುಹೊತ್ತಿಗೆ ಬಿಡುಗಡೆ ಮಾಡಲಿದ್ದಾರೆ. ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಪಂ ಅಧ್ಯಕ್ಷೆ ಲತಾ ಹಾಗೂ ಸಂಸದ ಜಿ.ಎಸ್. ಬಸವರಾಜು ಮಳಿಗೆಗಳ ಉದ್ಘಾಟಿಸಲಿದ್ದಾರೆ. ಶಾಸಕ ಡಿ.ಸಿ. ಗೌರಿಶಂಕರ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಜಿ.ಸತ್ಯ ನಾರಾಯಣ, ಮಹಾನಗರ ಪಾಲಿಕೆ ಮಹಾ ಪೌರರಾದ ಲಲಿತಾ ರವೀಶ್, ಜಿಲ್ಲೆಯ ವಿವಿಧ ಸಂಸದರು, ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ಮೇಳದಲ್ಲಿ ಸಸ್ಯಸಂತೆ: ಮೇಳದಲ್ಲಿ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟವನ್ನಷ್ಟೇ ಅಲ್ಲದೆ, ಸಸ್ಯಸಂತೆ ಎಂಬ ವಿನೂತನ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ. ಸಸ್ಯ ಸಂತೆಯಲ್ಲಿ ರೈತಾಪಿ ಸಮುದಾಯ ಹಾಗೂ ನಗರವಾಸಿಗಳಿಗೆ ಅವಶ್ಯಕವಿರುವ, ತೋಟಗಾರಿಕೆ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಉತ್ಪಾದಿಸಲಾಗುತ್ತಿರುವ ಗುಣ ಮಟ್ಟದ ವಿವಿಧ ತೋಟಗಾರಿಕೆ ಬೆಳೆಗಳ ಕಸಿ ಮತ್ತು ಸಸಿಗಳ ಪ್ರದರ್ಶಿಕೆ ಮತ್ತು ಮಾರಾಟ ಮಾಡ ಲಾಗುವುದು. ಇಲಾಖೆಯ ಜೈವಿಕ ಕೇಂದ್ರಗಳಲ್ಲಿ ಉತ್ಪಾದಿಸಲಾಗಿರುವ ಜೈವಿಕ ಗೊಬ್ಬರಗಳಾದ ವರ್ಮಿ ಕಾಂಪೋಸ್ಟ್, ವರ್ವಿವಾಶ್, ವೆಜಿಟೇಬಲ್ ಸ್ಪೆಷಲ್, ಬನಾನ ಸ್ಪೆಷಲ್ ಮತ್ತು ಇತರೆ ಉತ್ಪನ್ನ ಗಳು, ಔಷಧೀಯ ಹಾಗೂ ಸುಗಂಧ ಗಿಡಗಳ ಪ್ರದರ್ಶನ ಮತ್ತು ಮಾರಾಟ ಮಾಡಲಾಗುತ್ತದೆ. ದಾಳಿಂಬೆ, ಅಣಬೆಯನ್ನು ಬೆಳೆಯುವ ರೈತರನ್ನುಪೋತ್ಸಾಹಿಸಲು ಪ್ರತ್ಯೇಕವಾಗಿ ಮಳಿಗೆಯನ್ನು ತೆರೆದು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಸಾವಯುವ ಗೊಬ್ಬರ ಮಾರಾಟಕ್ಕೆ ವ್ಯವಸ್ಥೆ: ನಗರದ ತಾರಸಿ ತೋಟ ಹಾಗೂ ಕೈತೋಟ ಮಾಡುವ ಹವ್ಯಾಸಿಗರಿಗೆ ಪೋತ್ಸಾಹ ನೀಡಲು ಕುಂಡಗಳಲ್ಲಿ ಬೆಳೆ ಬೆಳೆಯಲು ಅವಶ್ಯಕವಿರುವ ಸಲಕರಣೆಗಳನ್ನು ಮತ್ತು ಸಾವಯುವ ರೀತಿಯಲ್ಲಿ ಪೋಷಕಾಂಶಗಳನ್ನು ನೀಡುವ ಗೊಬ್ಬರಗಳನ್ನು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ತೋಟಗಾರಿಕಾ ಇಲಾಖೆಯಿಂದ ಹೆಬ್ಬೂರು ತೋಟಗಾರಿಕೆ ಬೆಳೆಗಳ ರೈತ ಉತ್ಪಾದಕ ಸಂಸ್ಥೆಗೆ ನೀಡಿರುವ ಹಣ್ಣು ಮತ್ತು ತರಕಾರಿ ಮಾರಾಟ ವಾಹನವನ್ನು ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಗುವುದು. ಮೇಳದ ನಂತರ ಈ ವಾಹನವನ್ನು ಪ್ರಾಯೋಗಿಕವಾಗಿ ನಗರದಲ್ಲಿ ಹಣ್ಣು ಮತ್ತು ತರಕಾರಿ ಮಾರಾಟ ಮಾಡಲು ಬಳಸಿಕೊಳ್ಳ ಲಾಗುವುದು ಎಂದು ತಿಳಿಸಿದರು.
ಮಾವು ಬೆಳೆಯುವ ರೈತರಿಗೆ ಕಡಿಮೆ ವೆಚ್ಚದಲ್ಲಿ ಹುಲ್ಲಿನಿಂದ, ಇಥಲಿನ್ ಗ್ಯಾಸ್‌ನಿಂದ ಹಾಗೂ ರೈಪನಿಂಗ್ ಛೇಂಬರ್‌ನಲ್ಲಿ ಹಣ್ಣುಗಳನ್ನು ನೈಸರ್ಗಿಕವಾಗಿ ಮಾಗಿಸುವ ಬಗ್ಗೆ ಈಗಾಗಲೇ ತರಬೇತಿ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಆರೋಗ್ಯದ ಹಿತದೃಷ್ಟಿಯಿಂದ ವ್ಯಾಪಾರಿಗಳಿಗೂ ಸಹ ನೈಸರ್ಗಿಕವಾಗಿ ಹಣ್ಣನ್ನು ಮಾಗಿಸುವ ತರಬೇತಿಯನ್ನು ನೀಡಲಾಗುವುದು. ಜಿಲ್ಲೆಯ ರೈತರು, ತುಮಕೂರು ನಗರವಾಸಿಗಳು, ಗ್ರಾಹ ಕರು ಹಾಗೂ ಸಂಘಸಂಸ್ಥೆಗಳು ಹೆಚ್ಚಿನ ಸಂಖ್ಯೆ ಯಲ್ಲಿ ಆಗಮಿಸಿ ಈ ಮೇಳದ ಸದುಪಯೋಗ ಪಡೆದು ಕೊಳ್ಳಬೇಕೆಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.