ಮಹಿಳಾ ಸಂಘದಿಂದ ಮಾಸ್ಕ್ ತಯಾರಿ

Team Udayavani, Apr 6, 2020, 12:38 PM IST

tk–tdy-1

ತುಮಕೂರು: ವಿಶ್ವದಲ್ಲಿ ಕೋವಿಡ್ 19 ವೈರಸ್‌ ಹೆಚ್ಚುತ್ತಲೇ ಎಲ್ಲಾ ಕಡೆ ಮಾಸ್ಕ್ಗಳಿಗೆ ಭಾರೀ ಬೇಡಿಕೆ ಬಂದು ಮಾರುಕಟ್ಟೆಯಲ್ಲಿ ಎಲ್ಲಿಯೂ ಮಾಸ್ಕ್ ಸಿಗದ ವೇಳೆಯಲ್ಲಿ ಕಲ್ಪತರು ನಾಡಿನ ಮಹಿಳಾ ಸ್ವ ಸಹಾಯ ಗುಂಪುಗಳು ಮಾಸ್ಕ್ ತಯಾರು ಮಾಡಲು ಮುಂದಾಗಿ ಯಶಸ್ಸು ಕಂಡಿದ್ದು ಈಗ ಮಹಿಳೆಯರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಕೋವಿಡ್ 19 ಸೋಂಕು ಹರಡದಂತೆ ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರೊಂದಿಗೆ ಮುಖಗವಸು (ಮಾಸ್ಕ್) ಧರಿಸು ವುದೂ ಸಹ ಉತ್ತಮ ಮಾರ್ಗವಾಗಿರುವುದರಿಂದ ಜಿಲ್ಲೆಯ ತಿಪಟೂರು ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕಿನ ಮಹಿಳಾ ಸ್ವ-ಸಹಾಯ ಗುಂಪುಗಳು ಮುಖಗವಸು ತಯಾರಿಕೆಗೆ ಮುಂದಾಗಿವೆ.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂಸ್ಥೆ ಯ ಸಂಜೀವಿನಿ ಯೋಜನೆಯಡಿ ರಚಿಸಿರುವ ಗ್ರಾಪಂ ಒಕ್ಕೂಟಗಳ ಈ ಮಹಿಳಾ ಸ್ವಸಹಾಯ ಗುಂಪುಗಳ ಸುಮಾರು 60 ಸದಸ್ಯರು ಮಾಸ್ಕ್ ತಯಾರಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಲಾಕ್‌ಡೌನ್‌ ಜಾರಿ ಸಂದರ್ಭದಲ್ಲಿ ಕೈಕಟ್ಟಿ ಕೂರದ ಗುಂಪಿನ ಸದಸ್ಯರು ಸಮಾಜದ ಆರೋಗ್ಯದ ಹಿತದೃಷ್ಟಿಯಿಂದ ಮಾಸ್ಕ್ ತಯಾರಿಕೆಯಲ್ಲಿ ತೊಡಗಿಕೊಂಡಿರುವುದು ಶ್ಲಾಘನೀಯವಾಗಿದೆ.

ಚಿಕ್ಕನಾಯಕನಹಳ್ಳಿ ತಾಲೂಕು ಜೆ.ಸಿ.ಪುರದ ಶ್ರೀ ದಿವ್ಯಜ್ಯೋತಿ ಸಂಜೀವಿನಿ ಒಕ್ಕೂಟ, ದೊಡ್ಡ ಬಿದರೆ ಗ್ರಾಮದ ಜ್ಞಾನಜ್ಯೋತಿ ಸಂಜೀವಿನಿ, ಕೆಂಕೆರೆಯ ಓಂಕಾರ ಸಂಜೀವಿನಿ ಒಕ್ಕೂಟ, ಮುದ್ದೇನಹಳ್ಳಿಯ ಜೀವನ್ಮುಖೀ ಸಂಜೀವಿನಿ ಒಕ್ಕೂಟ, ಹಂದನಕೆರೆಯ ಸಾಧನ ಸಂಜೀವಿನಿ ಒಕ್ಕೂಟ, ಚೌಳಕಟ್ಟೆಯ ಸಮೃದ್ಧಿ ಸಂಜೀವಿನಿ ಒಕ್ಕೂಟ ಹಾಗೂ ತಿಪಟೂರು ತಾಲೂಕು ಈಚನೂರು ಅಮೃತಬಿಂದು ಸಂಜೀವಿನಿ ಒಕ್ಕೂಟ, ಕರಡಿ ಗ್ರಾಮದ ಚೇತನ ಸಂಜೀವಿನಿ ಒಕ್ಕೂಟ, ಬಿಳಿಗೆರೆಯ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರು ಮಾಸ್ಕ್ ತಯಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಜಿಲ್ಲಾಧಿಕಾರಿಗಳಿಂದ ಮೆಚ್ಚುಗೆ: ವಿವಿಧ ಸರ್ಕಾರಿ ಕಚೇರಿಗಳ ಅಧಿಕಾರಿ, ಸಿಬ್ಬಂದಿಗೆ ವಿತರಿಸಲು ಜಿಲ್ಲಾಡಳಿತ ಹಾಗೂ ಜಿಪಂ ಆದೇಶದಂತೆ ಈಗಾಗಲೇ 10 ಸಾವಿರ ಮಾಸ್ಕ್ ಗಳನ್ನು ಸ್ವ-ಸಹಾಯ ಸಂಘಗಳು ತಯಾರಿಸಿದ್ದು, ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಆರೋಗ್ಯಕ್ಕೆ ಹಾನಿಕರಕ ವಲ್ಲದ ಕಾಟನ್‌ ಬಟ್ಟೆಯಿಂದ ಕೂಡಿರುವ ಮಾಸ್ಕ್ಗಳ ಬಗ್ಗೆ ಜಿಲ್ಲಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿ ಮತ್ತಷ್ಟು ಮಾಸ್ಕ್ಗಳ ತಯಾರಿಕೆಗೆ ಸೂಚನೆ ನೀಡಿದ್ದಾರೆ.

ಮುಖಗವಸು ವಿತರಣೆ: ಮೊದಲ ಹಂತದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಅದರಡಿ ಬರುವ ಎಲ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಹಾಗೂ ಅಂಗನವಾಡಿ ಕೇಂದ್ರಗಳಿಗೆ 6,800, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಗೆ 1,000, ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್‌ ಸಿಟಿ ಕಚೇರಿಗೆ 1,000, ಜಿಲ್ಲಾ ಪಂಚಾಯತಿಯ ಅಧಿಕಾರಿ ಸಿಬ್ಬಂದಿಗೆ 500 ಮತ್ತಿತರೆ ಇಲಾಖೆ ಗಳಿಗೆ 700 ಮಾಸ್ಕ್ಗಳನ್ನು ವಿತರಿಸಲಾಗಿದೆ. ಕೋವಿಡ್ 19  ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಬಳಕೆಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಜಿಪಂ ಸಿಇಒ ಶುಭಾ ಕಲ್ಯಾಣ್‌, ಉಪ ಕಾರ್ಯದರ್ಶಿ (ಅಭಿವೃದ್ಧಿ) ಟಿ.ಕೆ.ರಮೇಶ್‌ ಜಂಟಿಯಾಗಿ ತಿಳಿಸಿದ್ದಾರೆ.

-ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

5-belthangady

Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

5-belthangady

Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ  ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.