ಇಟ್ಟಿಗೆ ಕಾರ್ಖಾನೆಗಳ ಮೇಲೆ ಸಾಮೂಹಿಕ ದಾಳಿ
Team Udayavani, Feb 20, 2019, 7:29 AM IST
ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ವಿದ್ಯುತ್ ಮಾಪಕ ಬಳಸದೆ ಇಟ್ಟಿಗೆ ಕಾರ್ಖಾನೆ ಮಾಲೀಕರು ಇಟ್ಟಿಗೆ ತಯಾರಿಕಾ ಚಟುವಟಿಕೆಗಳಿಗೆ ಅಕ್ರಮ ವಿದ್ಯುತ್ ಬಳಕೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಇಟ್ಟಿಗೆ ಕಾರ್ಖಾನೆಗಳ ಮೇಲೆ ಬೆಸ್ಕಾಂ ಜಾಗೃತದಳ ಮಂಗಳವಾರ ಸಾಮೂಹಿಕ ದಾಳಿ ನಡೆಸಿತು.
ತಾಲೂಕಿನಲ್ಲಿ ನಡೆಯುತ್ತಿರುವ ಇಟ್ಟಿಗೆ ಕಾರ್ಖಾನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ 43 ಪ್ರಕರಣಗಳನ್ನು ಪತ್ತೆ ಮಾಡಿ ಆರೋಪಿಗಳ ವಿರುದ್ಧ ಪ್ರಕರಣಗಳನ್ನು ದಾಖಲು ಮಾಡಲಾಗಿದ್ದು, ಒಟ್ಟು 12ಲಕ್ಷ ಬೆಲೆಯ ವಿದ್ಯುತ್ಛಕ್ತಿ ಕಳವು ಮಾಡಿರುವುದು ಬೆಳಕಿಗೆ ಬಂದಿದೆ.
43 ವಿದ್ಯುತ್ ಕಳ್ಳತನ ಪ್ರಕರಣ: ಬೆಸ್ಕಾಂ ಜಾಗೃತದಳದ ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ರಾಮನಗರ ಪೊಲೀಸ್ ಠಾಣೆಗಳ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳು ಹಾಗೂ ಚಿಕ್ಕನಾಯಕನಹಳ್ಳಿ ಉಪವಿಭಾಗದ ಎಲ್ಲಾ ಅಧಿಕಾರಿಗಳು ಸೇರಿದಂತೆ ಒಟ್ಟು 94 ಜನ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಕಾರ್ಯಚರಣೆಯಲ್ಲಿ ಭಾಗವಹಿಸಿ ತಾಲೂಕಿನಲ್ಲಿ 43 ವಿದ್ಯುತ್ ಕಳ್ಳತನದ ಪ್ರಕರಣಗಳನ್ನು ದಾಖಲಿಸಿಕೊಂಡರು.
ಈ ಕಾರ್ಯಚರಣೆಯಲ್ಲಿ ಬೆಸ್ಕಾಂ ಜಾಗೃತದಳದ ಮುಖ್ಯಸ್ಥರಾದ ಎಂ.ನಾರಾಯಣ್,ಪೊಲೀಸ್ ಅಧೀಕ್ಷಕರು, ನಾಗೇಂದ್ರ ವೃತ್ತದ ಅಧೀಕ್ಷಕ ಎಂಜಿನಿಯರ್, ರಾಮಚಂದ್ರಮೂರ್ತಿ ಕಾರ್ಯನಿರ್ವಾಹಕ ಎಂಜಿನಿಯರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ವಿದ್ಯುತ್ ಕಳ್ಳತನ ತಪ್ಪಿಸಲು ದಾಳಿ: ಇಟ್ಟಿಗೆ ಕಾರ್ಖಾನೆಯ ಮಾಲೀಕರಿಗೆ ವಿದ್ಯುತ್ ಕಳ್ಳತನದ ಹರಿವು ಮೂಡಿಸುವ ಜೊತೆಗೆ ವಿದ್ಯುತ್ ಕಳ್ಳತನ ತಪ್ಪಿಸಲು ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಸಾಮೂಹಿಕ ದಾಳಿ ನಡೆಸಲಾಯಿತು ಎಂದು ಪೊಲೀಸ್ ಅಧೀಕ್ಷಕ ಎಂ.ನಾರಾಯಣ್ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಸ್ಕಾಂ ಜಾಗೃತ ದಳ ನಿರಂತರವಾಗಿ ವಿದ್ಯುತ್ ಕಳ್ಳತನದ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಚಿಕ್ಕನಾಯಕನಹಳ್ಳಿಯಲ್ಲಿ ಇಟ್ಟಿಗೆ ಕಾರ್ಖಾನೆಗಳಿಂದ ಹೆಚ್ಚು ವಿದ್ಯುತ್ ಕಳ್ಳತನವಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ನಮ್ಮ ಅಧಿಕಾರಿಗಳ ಜೊತೆ ದಾಳಿ ನಡೆಸಿದ್ದು,
ತಾಲೂಕಿನಾದ್ಯಾಂತ 43 ಪ್ರಕರಣಗಳನ್ನು ಪತ್ತೆ ಮಾಡಿ ಆರೋಪಿಗಳ ವಿರುದ್ಧ ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಒಟ್ಟು 12 ಲಕ್ಷ ಬೆಲೆಯ ವಿದ್ಯುತ್ಛಕ್ತಿಯನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಕಾನೂನಾತ್ಮಕವಾಗಿ ಕಾರ್ಖಾನೆಯ ಮಾಲೀಕರು ವಿದ್ಯುತ್ ಬಳಿಸಿದರೆ ನಮ್ಮ ತಕರಾರು ಇಲ್ಲ ಎಂದರು. ಈ ಸಂದರ್ಭದಲ್ಲಿ ನಾಗೇಂದ್ರ ವೃತ್ತದ ಅಧೀಕ್ಷಕ ಎಂಜಿನಿಯರ್, ರಾಮಚಂದ್ರಮೂರ್ತಿ ಕಾರ್ಯನಿರ್ವಾಹಕ ಎಂಜಿನಿಯರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.