ಸಾಮಾಜಿಕ ಕ್ರಾಂತಿಗೆ ಮಠಗಳು ಮುಂಚೂಣಿಯಲ್ಲಿರಲಿ: ಸಿಎಂ ಬೊಮ್ಮಾಯಿ
ಶಿವಕುಮಾರ ಶ್ರೀಗಳ ನಾಲ್ಕನೇ ವರ್ಷದ ಪುಣ್ಯ ಸಂಸ್ಮರಣೆ
Team Udayavani, Jan 21, 2023, 11:56 PM IST
ತುಮಕೂರು: ಬಸವಣ್ಣನವರ ತತ್ವಾದರ್ಶಗಳ ಬಗ್ಗೆ ಇಂದು ಚಿಂತನೆ ಅತ್ಯಗತ್ಯ ವಾಗಿದ್ದು, ಅಸಮಾನತೆ, ಲಿಂಗಭೇದ, ಮೇಲುಕೀಳುಗಳನ್ನು ಹೋಗಲಾಡಿ ಸಲು ನಾವೇನು ಮಾಡಬೇಕು ಎಂಬ ಬಗ್ಗೆ ಚಿಂತಿಸಬೇಕು. ಸಾಮಾಜಿಕ ಕ್ರಾಂತಿಯನ್ನುಂಟು ಮಾಡುವ ಕಾರ್ಯದಲ್ಲಿ ಮಠಗಳು ಮುಂಚೂಣಿಯಲ್ಲಿ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶ್ರೀಕ್ಷೇತ್ರ ಸಿದ್ಧಗಂಗಾ ಮಠದಲ್ಲಿ ಶನಿವಾರ ಏರ್ಪಡಿಸಿದ್ದ ಡಾ| ಶ್ರೀ ಶಿವಕುಮಾರ ಸ್ವಾಮೀಜಿ ಅವರ 4ನೇ ಪುಣ್ಯ ಸಂಸ್ಮರಣೋತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮಠದ ಉಸಿರು: ಸಂತೋಷ್
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮಾತನಾಡಿ, ಮಠದಲ್ಲಿರುವ ಹತ್ತಾರು ಸಾವಿರ ಮಕ್ಕಳು ಶ್ರೀ ಮಠದ ಉಸಿರು. ಇಲ್ಲಿನ ಪರಿಸರಕ್ಕೆ ಚೈತನ್ಯ ನೀಡಿರುವುದು ಶ್ರೀಶಿವಕುಮಾರ ಸ್ವಾಮೀಜಿಗಳು ಎಂದರು.
ಮಹಾನ್ ಚೇತನ
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಅನ್ನ, ಜ್ಞಾನ, ಆಶ್ರಯದ ದಾಸೋಹ ಮಾಡಿದ ಶ್ರೀ ಶಿವಕುಮಾರ ಸ್ವಾಮೀಜಿಗಳು ಮಕ್ಕಳಲ್ಲಿ ದೇವರನ್ನು ಕಂಡು ದೇವರಾದರೂ, ಬಸವಣ್ಣ ಅವರು ಹೇಳಿದಂತೆ ಮಾನವೀಯತೆ ದಾರಿಯಲ್ಲಿ ಸಾಗಿದ ಮಹಾನ್ ಚೇತನ ಎಂದು ಹೇಳಿದರು.
ವಸತಿ ಸಚಿವ ವಿ.ಸೋಮಣ್ಣ ಮಾತನಾಡಿ, ಶ್ರೀಶಿವಕುಮಾರ ಸ್ವಾಮೀಜಿ ಅವರನ್ನು ಮಠದಲ್ಲಿ ಕಟ್ಟಿ ಹಾಕಿದ್ದೀರಿ. ಅವರು ಹೊರಗೆ ಬಂದರೆ ವಿಶ್ವಕ್ಕೆ ಬೆಳಕಾಗುವ ವ್ಯಕ್ತಿಯಾಗುತ್ತಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೇಳಿದ್ದರು. ಅಂತಹ ಮಹಾನ್ ಜ್ಯೋತಿ ಡಾ| ಶಿವಕುಮಾರ ಸ್ವಾಮೀಜಿ ಎಂದರು.
ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಮಹಾಸ್ವಾಮಿ, ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಕೇಂದ್ರ ಸಚಿವ ಭಗವಂತ ಖೂಬ, ರಾಜ್ಯದ ಸಚಿವರಾದ ಜೆ.ಸಿ. ಮಾಧುಸ್ವಾಮಿ, ಆರಗ ಜ್ಞಾನೇಂದ್ರ, ಬಿ.ಸಿ.ನಾಗೇಶ್, ಎಸ್. ಟಿ. ಸೋಮಶೇಖರ್, ಸಂಸದ ಜಿ.ಎಸ್.ಬಸವರಾಜು, ಮಾಜಿ ಸಚಿವ ಸೊಗಡು ಎಸ್.ಶಿವಣ್ಣ, ಶಾಸಕರಾದ ಜಿ.ಬಿ.ಜ್ಯೋತಿ ಗಣೇಶ್, ಮಸಾಲೆ ಜಯರಾಮ್, ರಾಜೇಶ್‌ಗೌಡ, ಮಸಾಲೆ ಜಯರಾಮ್, ವೈ.ಎ.ನಾರಾಯಣ ಸ್ವಾಮಿ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.