ಯುವ ಸಮೂಹ ಸೆಳೆಯಲು ಸದಸ್ಯತ್ವ ಅಭಿಯಾನ
ಕಾರ್ಯಾಗಾರದಲ್ಲಿ ಸಂಸದ ಬಸವರಾಜ್ ಹೇಳಿಕೆ • ಕೇಂದ್ರ ಯೋಜನೆ ಜನರಿಗೆ ತಲುಪಿಸಿ ಪಕ್ಷ ಬಲಪಡಿಸಿ
Team Udayavani, Jul 8, 2019, 1:25 PM IST
ತುಮಕೂರು: ಯುವ ಸಮೂಹವನ್ನು ಸೆಳೆಯುವ ಮೂಲಕ ಬಿಜೆಪಿ ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಿ ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕು ಎಂದು ಸಂಸದ ಜಿ.ಎಸ್.ಹೇಳಿದರು.
ನಗರದ ಶ್ರೀದೇವಿ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನ ಕಾರ್ಯಾಗಾರದಲ್ಲಿ ಮಾತನಾಡಿ, ಜನರಲ್ಲಿ ಕೇಂದ್ರದ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಅವರ ಮೊಬೈಲ್ನಲ್ಲಿ ಮಿಸ್ಡ್ಕಾಲ್ ಕೊಟ್ಟು ಮತ್ತೆ ವಾಪಸ್ ಬರುವ ಮೆಸೇಜ್‌ಗೆ ಸಂಪೂರ್ಣ ವಿಳಾಸ, ಇಮೇಲ್ ಐಡಿ ಎಲ್ಲವನ್ನೂ ಪಡೆದು ಕಳುಹಿಸಿದರೆ ಮಾಹಿತಿ ಕೇಂದ್ರಕ್ಕೆ ತಲುಪುತ್ತದೆ. ಇದರಿಂದ ಮುಂದೆ ಸರ್ವೆ ಮಾಡಲು ಅನುಕೂಲವಾಗುತ್ತದೆ ಎಂದರು.
2013-14ರಲ್ಲಿ ನಡೆದ ಅಭಿಯಾನದಲ್ಲಿ 11 ಕೋಟಿ ಮಂದಿ ಸದಸ್ಯತ್ವ ನೋಂದಾಯಿಸಿಕೊಳ್ಳುವ ಮೂಲಕ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆಗೆ ಬಿಜೆಪಿ ಪಾತ್ರವಾಗಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅತ್ಯಂತ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲು ಕಾರ್ಯಕರ್ತರ ಶ್ರಮವೇ ಕಾರಣ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.
85 ಸಾವಿರ ಸದಸ್ಯತ್ವದ ಗುರಿ: ಈ ಬಾರಿ ಸದಸ್ಯತ್ವದ ಸಂಖ್ಯೆ ಮತ್ತಷ್ಟು ಹೆಚ್ಚಾಗಬೇಕು. ನಗರದಲ್ಲಿ 85 ಸಾವಿರ ಸದಸ್ಯತ್ವದ ಗುರಿ ಹೊಂದಲಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಹಲವಾರು ಜನಪರ ಯೋಜನೆ ಜಾರಿಗೆ ತಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಯೋಜನೆಗಳನ್ನು ಬಿಜೆಪಿ ಕಾರ್ಯಕರ್ತರು ಪ್ರತಿ ಮನೆಗೆ ತಲುಪಿಸಿ ಸದಸ್ಯತ್ವ ನೋಂದಣಿ ಮಾಡಿಸಿ ಎಂದು ಕರೆ ನೀಡಿದರು.
ಶಕ್ತಿ ಬಲಪಡಿಸಿ: ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್ ಮಾತನಾಡಿ, ಸಂಘಟನೆ ಪಕ್ಷದ ಮೂಲಶಕ್ತಿಯಾಗಿದೆ. ಬಿಜೆಪಿ ಸದಸ್ಯತ್ವ ಮಾಡುವ ಮೂಲಕ ಆ ಶಕ್ತಿ ಇನ್ನಷ್ಟು ಬಲಪಡಿಸಬೇಕಾಗಿದೆ. ಆಂತರಿಕ ಪ್ರಜಾಪ್ರಭುತ್ವಕ್ಕೆ ಬಲ ತುಂಬಲು ಈ ವ್ಯವಸ್ಥೆ ಅನುಕೂಲವಾಗಿದೆ ಎಂದರು. ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಎಸ್.ಶಿವಪ್ರಸಾದ್ ಮಾತನಾಡಿ, ಬಿಜೆಪಿಗೆ ಸದಸ್ಯರನ್ನು ಹೆಚ್ಚಿಗೆ ಮಾಡು ವುದರಿಂದ ಜನಸಂಪರ್ಕ ಹೆಚ್ಚಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಜನಪರ ಯೋಜನೆ ಗಳನ್ನು ಜನರಿಗೆ ಹಾಗೂ ಸದಸ್ಯರಿಗೆ ಮುಟ್ಟಿಸುವಲ್ಲಿ ಅತ್ಯಂತ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಗುರಿ ತಲುಪುತ್ತೇವೆ: ಬಿಜೆಪಿ ನಗರಾಧ್ಯಕ್ಷ ಸಿ.ಎನ್.ರಮೇಶ್ ಮಾತನಾಡಿ, ನಗರದ 35 ವಾರ್ಡ್‌ಗಳಲ್ಲಿ ಒಂದು ಲಕ್ಷ ಸದಸ್ಯತ್ವ ನೋಂದಣಿ ಗುರಿ ಇಟ್ಟುಕೊಂಡಿದ್ದೇವೆ. ಪ್ರತಿ ವಾರ್ಡ್‌ನಲ್ಲಿ 50 ಸಕ್ರಿಯ ಕಾರ್ಯಕರ್ತರನ್ನು ಮಾಡಿದರೆ, ಆ ಕಾರ್ಯಕರ್ತರು ಒಬ್ಬೊಬ್ಬರೂ 50 ಮಂದಿಯನ್ನು ಸದಸ್ವತ್ವಕ್ಕೆ ನೋಂದಾಯಿಸಿದರೆ ನಮ್ಮ ಗುರಿ ತಲುಪುತ್ತೇವೆ. 20 ವಾರ್ಡ್‌ನಲ್ಲಿ ಇಷ್ಟು ಮಾಡಿದರೂ 1 ಲಕ್ಷದ ಗುರಿ ತಲುಪುತ್ತೇವೆ ಎಂದರು.
ನಗರ ಸಂಚಾಲಕರನ್ನಾಗಿ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಎಚ್.ಎಂ.ರವೀಶಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಸಹ ಸಂಚಾಲಕರನ್ನಾಗಿ ಶಿರಾಗೇಟ್ ಪ್ರಸನ್ನ, ರಾಕೇಶ್, ವಿನಯ್ ನೇಮಿಸಲಾಗಿದೆ ಎಂದು ತಿಳಿಸಿದರು. ಮಾಜಿ ಶಾಸಕ ಬಿ.ಸುರೇಶ್‌ಗೌಡ, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಎಚ್.ಎಂ. ರವೀಶಯ್ಯ, ಪಾಲಿಕೆ ಸದಸ್ಯ ಎಚ್.ಮಲ್ಲಿಕಾರ್ಜುನ್, ಸ್ನೇಕ್ ನಂದೀಶ್, ಸರೋಜಗೌಡ, ಪ್ರೇಮಾ ಹೆಗ್ಡೆ ಹಾಗೂ ಪಾಲಿಕೆ ಬಿಜೆಪಿ ಸದಸ್ಯರು, ಮುಖಂಡರು, ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.