ಅನಾಥ ವಿದ್ಯಾರ್ಥಿನಿಗೆ ಶಾಸಕರಿಂದ ನೆರವು
Team Udayavani, Sep 22, 2019, 3:45 PM IST
ತುಮಕೂರು: ತಾಲೂಕಿನ ಗೂಳೂರು ಹೋಬಳಿಯ ಹೊನ್ನುಡಿಕೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಅಜ್ಜಿಯನ್ನು ಕಳೆದುಕೊಂಡು ಅನಾಥಳಾದ ಮೊಮ್ಮಗಳಿಗೆ ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್ ನೆರವಾಗಿದ್ದಾರೆ.
ಹೊನ್ನುಡಿಕೆ ಗ್ರಾಮದ ವೃದ್ಧೆ ತಿಮ್ಮಕ್ಕ (70) ತರಕಾರಿ ವ್ಯಾಪಾರಿ ಮಾಡಿಕೊಂಡು ಜೀವನ ನಡೆಸುತ್ತ ಮೊಮ್ಮಗಳು ಗೀತಾಳನ್ನು ತುಮಕೂರಿನ ಎಂಪ್ರಸ್ ಕಾಲೇಜಿನಲ್ಲಿ ಪಿಯುಸಿ ಓದಿಸುತ್ತಿದ್ದರು. ಇತ್ತೀಚೆಗೆ ಅನಾರೋಗ್ಯಕ್ಕೀಡಾದ ತಿಮ್ಮಕ್ಕ ಹೊನ್ನುಡಿಕೆ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂ ತೆರಳಿದ್ದಾರೆ. ವೈದ್ಯರಿಲ್ಲದ ಕಾರಣ ನರ್ಸ್‌ಗಳೇ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ತಿಮ್ಮಕ್ಕ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.
ಅಜ್ಜಿಯನ್ನು ಕಳೆದುಕೊಂಡು ಅನಾಥಳಾಗಿದ್ದ ಗೀತಾಗೆ ಸಾಂತ್ವನ ಹೇಳಿದ ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್ ಓದಿನ ಪೂರ್ಣ ವೆಚ್ಚ ಭರಿಸುವ ಭರವಸೆ ನೀಡಿದ್ದಾರೆ. ಗೀತಾಳಿಗೆ ಎರಡು ಲಕ್ಷದ ಚೆಕ್ ಹಾಗೂ ಹತ್ತು ಸಾವಿರ ರೂ. ಸಹಾಯಧನ ನೀಡಿದ್ದಾರೆ.
ಆಸ್ಪತ್ರೆಯಲ್ಲಿರದ ವೈದ್ಯರ ಮೇಲೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದ್ದಾರೆ. ಜೆಡಿಎಸ್ ಮುಖಂಡರಾದ ಹಾಲನೂರು ಅನಂತ್‌ಕುಮಾರ್, ಹೊನ್ನುಡಿಕೆ ವೆಂಕಟೇಶ್, ಕೃಷ್ಣಪ್ಪ, ಅರೇಹಳ್ಳಿ ಮೂರ್ತಿ, ಲಕ್ಷಿ ¾àನಾರಾಯಣ್, ಮಂಚ ಕಲ್‌ಕುಪ್ಪೆ ಯೋಗೀಶ್ ಇತರರಿದ್ದರು. ಸ್ಥಳಕ್ಕೆ ತಾಲೂಕು ವೈದ್ಯಾಧಿಕಾರಿ ಹಾಗೂ ಸರ್ಕಲ್ ಇನ್‌ಸ್ಪೆಕ್ಟರ್ ಶ್ರೀಧರ್ ಭೇಟಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು
Gubbi: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆ
Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು
Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!
Kunigal: ಅಪ್ರಾಪ್ತೆಯ ಅಪಹರಣ, ಲೈಂಗಿಕ ದೌರ್ಜನ್ಯ; ಗುಜರಾತ್ ನಲ್ಲಿ ಬಂಧನ
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.