ಮೊಬೈಲ್ ಬಳಕೆ: ಶಿಕ್ಷಕಿ ವಿರುದ್ಧ ದೂರು ನೀಡಿದ 6ನೇ ತರಗತಿಯ ವಿದ್ಯಾರ್ಥಿನಿ
Team Udayavani, Apr 2, 2021, 2:44 PM IST
ಮಧುಗಿರಿ: ಶಾಲೆಯಲ್ಲಿ ಪಾಠ ಮಾಡುವ ಬದಲು ಮೊಬೈಲ್‌ನಲ್ಲಿಯೇ ಕಾಲ ಕಳೆಯುವ ಶಿಕ್ಷಕಿ ಮೇಲೆ ಅದೇ ಶಾಲೆಯ ವಿದ್ಯಾರ್ಥಿ ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರಕ್ಕೆ ದೂರು ನೀಡಿರುವ ಘಟನೆ ನಡೆದಿದೆ.
ತಾಲೂಕಿನ ಪುರವರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವೈಷ್ಣವಿ ಪಿ.ಆರ್. ಶಿಕ್ಷಕಿ ಮೇಲೆ ದೂರು ನೀಡಿರುವ ವಿದ್ಯಾರ್ಥಿನಿ. ಶಾಲೆಯ ಸಮಯದಲ್ಲಿ ಶಿಕ್ಷಕಿಯರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಂದು ನಮ್ಮ ಜೊತೆಗೆ ಬಿಡುತ್ತಾರೆ ಹಾಗೂ ಅವರ ಮಕ್ಕಳನ್ನು ಆಟವಾಡಿಸು ಅಂತ ಒತ್ತಡ ಹೇರುತ್ತಿದ್ದು, ಮೊಬೈಲ್‌ನಲ್ಲಿ ಕಾಲ ಕಳೆಯುತ್ತಾರೆ. ಇದರಿಂದ ತರಗತಿಗೆ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿನಿ ಅಳಲನ್ನು ತೋಡಿಕೊಂಡಿದ್ದಾರೆ.
ಪಾಠ, ಪ್ರವಚನ ಸರಿಯಾಗಿ ನಡೆಯುತ್ತಿಲ್ಲ: ಕೆಲವರು ಯಾವುದೋ ಸಂಸ್ಥೆಯಲ್ಲಿ ಸದಸ್ಯರಾಗಿದ್ದು, ಅವುಗಳ ವ್ಯವಹಾರವನ್ನೂ ಇಲ್ಲಿಯೇ ನಡೆಸುತ್ತಿದ್ದಾರೆ. ಇದರಿಂದಸರಿಯಾಗಿ ಪಾಠ ಪ್ರವಚನ ನಡೆಯದೆ ನಮಗೆತೊಂದರೆಯಾಗುತ್ತಿದೆ. ಇದಲ್ಲದೆ ಶಾಲೆಯ ಆವರಣದ ಹಿಂಭಾಗದಲ್ಲಿ ಸೀಮೆಜಾಲಿ ಹೆಚ್ಚಾಗಿ ಬೆಳೆದಿದ್ದು, ಹಾವುಗಳು ಕಾಣಿಸುತ್ತಿವೆ. ಈ ಬಗ್ಗೆಯೂ ಮೇಲಾಧಿಕಾರಿಗಳ ಗಮನಕ್ಕೆ ತಂದು ನಮ್ಮ ಸಮಸ್ಯೆಗೆ ಪರಿಹಾರ ಕೊಡಿಸುವಂತೆ ಸಂಸ್ಥೆಯ ಅಧ್ಯಕ್ಷಸಿದ್ದಲಿಂಗೇಗೌಡರಿಗೆ ಪತ್ರ ಬರೆದಿದ್ದಾರೆ.
ಅಧಿಕಾರಿಗಳಿಗೆ ಪತ್ರ: ಸದರಿ ವಿದ್ಯಾರ್ಥಿನಿ ಪತ್ರಕ್ಕೆ ಸ್ಪಂದಿಸಿರುವ ಸಿದ್ದಲಿಂಗೇಗೌಡರು ಜಿಲ್ಲಾಧಿಕಾರಿ, ಜಿಪಂಸಿಇಒ, ಮಧುಗಿರಿ ಉಪವಿಭಾಗಾಧಿಕಾರಿ, ಡಿಡಿಪಿಐ ಹಾಗೂ ಬಿಇಒ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ
Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.