ಹಣ ವಾಪಸ್‌: ಗ್ರಾಪಂಗೆ ಬೀಗ ಹಾಕಿ ಧರಣಿ


Team Udayavani, Nov 30, 2019, 5:13 PM IST

tk-tdy-2

ಮಧುಗಿರಿ: ವಸತಿ ಯೋಜನೆಯಡಿ ಬಡವರಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರದ ಬಂದಿದ್ದ ಅನುದಾನ ಬ್ಯಾಲ್ಯ ಗ್ರಾಪಂ ಸಿಬ್ಬಂದಿ ನಿರ್ಲಕ್ಷ್ಯದಿಂದವಾಪಸ್‌ ಹೋಗಿದ್ದು, ಇದರಿಂದ ಆಕ್ರೋಶ ಗೊಂಡ ಫ‌ಲಾನುಭವಿಗಳು ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಮಧುಗಿರಿ ತಾಲೂಕಿಗೆ ಸೇರಿದ್ದರೂ ಕಂದಾಯ ವಿಭಾಗದಲ್ಲಿ ಕೊರಟಗೆರೆ ಕ್ಷೇತ್ರ ಪ್ರತಿನಿಧಿಸುವ ಪುರವರ ಹೋಬಳಿಯ ಬ್ಯಾಲ್ಯ ಗ್ರಾಪಂನಲ್ಲಿನಡೆದಿದೆ. ಕೊರಟಗೆರೆ ಶಾಸಕ ಪರಮೇಶ್ವರ್‌ ಈ ಹಿಂದೆ ಬಸವ ವಸತಿ ಯೋಜನೆಯಡಿ ಬ್ಯಾಲ್ಯ ಗ್ರಾಪಂಗೆ 120 ಮನೆಗಳನ್ನು ಮಂಜೂರು ಮಾಡಿಸಿದ್ದರು. ಅದರಲ್ಲಿನ ಫ‌ಲಾನುಭವಿಗಳಿಗೆ ಮನೆ ನಿರ್ಮಾಣ ಮಾಡಲು ಗ್ರಾಪಂ ವತಿಯಿಂದ ಆದೇಶ ಪತ್ರ ನೀಡಲಾಗಿತ್ತು.

ಕಾರ್ಯದರ್ಶಿ ವಿರುದ್ಧ ಆರೋಪ: ಈ ಬಗ್ಗೆ ಉದಯವಾಣಿ ಜತೆ ಕೊರಟಗೆರೆ ಬಿಜೆಪಿ ಹಿಂದುಳಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಂ.ಆರ್‌.ನಾಗರಾಜ್‌ ಮಾತನಾಡಿ, ಫ‌ಲಾನುಭವಿ ಗಳಿಗೆ ಮನೆ ನಿರ್ಮಿಸಿಕೊಳ್ಳಲು ಪಂಚಾಯ್ತಿ ಕಾರ್ಯದರ್ಶಿ ಪೋಟೋ ತೆಗೆಸಿದ್ದು, ಹಸಿರು ನಿಶಾನೆ ತೋರಿದ್ದರು ಹಾಗೂ ಬಿಲ್‌ ಮಾಡಿ ಕೊಡುವ ಭರವಸೆ ನೀಡಿದ್ದರು.

ಬಿಲ್‌ ಪಾವತಿಸಲು ನಿರ್ಲಕ್ಷ್ಯ: ಈ ಮಾತನ್ನು ನಂಬಿದ ಬಡವರು ಸಾಲ ಮಾಡಿ ಮನೆ ಕಟ್ಟಲು ಮುಂದಾದರು. ಈಗ ಮನೆಯ ಕಾಮಗಾರಿ ಛಾವಣಿ ಮಟ್ಟಕ್ಕೆ ತಲುಪಿದ್ದು, ಮತ್ತೆ ಪೋಟೋ ತಗೆಯಲು ಬಂದು ಪರಿಶೀಲನೆ ನಡೆಸಿದರೆ ಈ ಯೋಜನೆಗೆ ಸರ್ಕಾರ ಬ್ರೇಕ್‌ ಹಾಕಿದ್ದು, ಹಣ ಬರುವುದಿಲ್ಲ ಎನ್ನುತ್ತಿದ್ದಾರೆ. ಇದೇ ಯೋಜನೆಯಡಿ ಮನೆ ನಿರ್ಮಿಸಿಕೊಂಡವರಿಗೆ ಈಗಾಗಲೇ ಬಿಲ್‌ ಮಾಡಿದ್ದಾರೆ. ಮಹಡಿ ಮನೆ ನಿರ್ಮಾಣಕ್ಕೆ ಅವಕಾಶ ಇಲ್ಲದಿದ್ದರೂ ಮಹಡಿ ಮನೆ ನಿರ್ಮಿಸಿ ಕೊಂಡವರಿಗೆ ಬಿಲ್‌ ಪಾವತಿ ಮಾಡಿರುವ ಗ್ರಾಪಂಕಾರ್ಯದರ್ಶಿ ಈಗ ಬಡವರ ಮನೆಯ ಬಿಲ್‌ ಪಾವತಿಸಲು ನಿರ್ಲಕ್ಷ್ಯ ವಹಿಸಿದ್ದರಿಂದಲೇ ಈ ಅಚಾತುರ್ಯ ನಡೆದಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಬಾಬು, ರಂಗನಾಥ್‌, ಸುರೇಂದ್ರರೆಡ್ಡಿ, ಮಹೇಂದ್ರರೆಡ್ಡಿ, ಪ್ರಜಾಪರ ವೇದಿಕೆ ರಾಜ್ಯ ಕಾರ್ಯದರ್ಶಿ ಜಲಾಲ್‌ ಬಾಷಾ, ಅಧ್ಯಕ್ಷ ಇಬ್ಬು ವೆಂಕಟೇಶ್‌ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

bjp-congress

Aranthodu :ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.