ಫ‌ುಟ್ಪಾತ್‌ ತೆರವಿಗೆ ನಗರಸಭೆ ಮೀನಮೇಷ


Team Udayavani, Jul 16, 2019, 1:11 PM IST

tk-tdy-1..

ತಿಪಟೂರಿನ ಬಿ.ಎಚ್.ರಸ್ತೆಯ ಫ‌ುಟ್ಪಾತ್‌ನ್ನು ಆವರಿಸಿಕೊಂಡಿರುವ ಅಂಗಡಿ ಮಳಿಗೆಗೆಳು.

ತಿಪಟೂರು: ತಿಪಟೂರು ಜಿಲ್ಲಾ ಕೇಂದ್ರವಾಗುವ ಎಲ್ಲ ಅರ್ಹತೆ ಹೊಂದಿದ್ದರೂ ಸಾಕಷ್ಟು ಸಮಸ್ಯೆಗಳ ಸುಳಿ ಯಲ್ಲಿ ಸಿಲುಕಿ ನಲುಗುತ್ತಿದೆ. ನಗರ ಬೆಳೆದಂತೆಲ್ಲಾ ಜನಸಂಖ್ಯೆ ಮತ್ತು ವಾಹನಗಳ ಸಂಖ್ಯೆ ದುಪ್ಪಟ್ಟಾಗು ತ್ತಿರುವುದರಿಂದ ಪಾದಚಾರಿಗಳಿಗೆ ಓಡಾಡಲು ಜಾಗವೇ ಇಲ್ಲದಂತಾಗಿದೆ. ನಗರಸಭೆ ಕೂಡಲೆ ಫ‌ುಟ್ಪಾತ್‌ ತೆರವು ಮಾಡುವ ಮೂಲಕ ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂಬುದು ನಾಗರಿಕರ ಒತ್ತಾಯವಾಗಿದೆ.

ನಗರದ ಮಧ್ಯೆ ಹಾಯ್ದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 206 ಹಾಗೂ ಕೆಲ ಮುಖ್ಯ ರಸ್ತೆಗಳ ಎರಡೂ ಬದಿಯಲ್ಲಿ ಸಾರ್ವಜನಿಕರ ಓಡಾಟಕ್ಕೆ ಈವರೆಗೂ ಸರಿಯಾದ ಪುಟ್ಪಾತ್‌ ನಿರ್ಮಾಣ ಮಾಡಿಲ್ಲ. ಹೆದ್ದಾರಿಯ ಅಕ್ಕಪಕ್ಕದಲ್ಲಿದ್ದ ಚರಂಡಿಗಳ ಮೇಲೆ ಸಾರ್ವಜನಿಕರು ಓಡಾಡುತ್ತಿದ್ದು ಇದಕ್ಕೆ ಕಂಬಿಗಳನ್ನು ಅಳವಡಿಸಿ ಅನುಕೂಲ ಮಾಡಿದ್ದರೂ, ಆ ಸ್ಥಳಗಳಲ್ಲಿ ತರಕಾರಿ ಅಂಗಡಿ, ಬಟ್ಟೆ ಮಾರುವವರು, ಹಣ್ಣಿನ ಅಂಗಡಿಗಳು, ಟೀ-ಕಾಫಿ ಗೂಡಂಗಡಿ ಹೋಟೆಲ್ಗಳು, ಪಾನಿಪೂರಿ, ಗೋಬಿ ಸ್ಟಾಲ್ಗಳವರು ಬಹು ಪಾಲು ಫ‌ುಟ್ಪಾತ್‌ ಅತಿಕ್ರಮಣ ಮಾಡಿ ನಿತ್ಯ ವ್ಯಾಪಾರ-ವಹಿವಾಟು ನಡೆಸುತ್ತಿದ್ದಾರೆ. ಇದರಿಂದ ದಿನನಿತ್ಯ ಓಡಾಡುವ ಸಾವಿರಾರು ಪಾದಚಾರಿಗಳು ಹಾಗೂ ವಿದ್ಯಾರ್ಥಿಗಳು ಪಾದಚಾರಿ ಮಾರ್ಗವನ್ನು ಬಿಟ್ಟು ರಸ್ತೆಯಲ್ಲಿಯೇ ನಡೆದದಾಡುವಂತಾಗಿದೆ. ಇದರ ಪರಿಣಾಮ ಪ್ರತಿನಿತ್ಯ ಒಂದಿಲ್ಲೊಂದು ಅಪಘಾತಗಳು ಸಂಭವಿಸುತ್ತಿದ್ದು ಇದಕ್ಕೆ ನಗರಸಭೆ, ಪೊಲೀಸ್‌ ಇಲಾಖೆಯ ಅಧಿಕಾರಿಗಳೇ ನೇರ ಹೊಣೆ ಎಂದು ಸಾರ್ವಜನಿಕರ ಆರೋಪವಾಗಿದೆ.

ಬೇಜವಾಬ್ದಾರಿ ನಗರಸಭೆ : ಫ‌ುಟ್ಪಾತ್‌ ಅಂಗಡಿ ಗಳನ್ನು ತೆರವು ಕಾರ್ಯದಲ್ಲಿ ನಗರಸಭೆ ಮೀನಮೇಷ ಎಣಿಸುತ್ತಿದ್ದು, ಈ ಬಗ್ಗೆ ಸಾಮಾನ್ಯ ಸಭೆ, ವಿಶೇಷ ಸಭೆ ಗಳಲ್ಲಿ ಮಾತ್ರ ಶೀಘ್ರದಲ್ಲಿಯೆ ಫ‌ುಟ್ಪಾತ್‌ ತೆರವು ಮಾಡಲಾಗುತ್ತದೆ ಎಂದು ಅಧಿಕಾರಿಗಳು ಬಾಯಿ ಮಾತಿಗೆ ಹೇಳುತ್ತಾರೆ. ಆದರೆ ವರ್ಷಗಳೆ ಕಳೆದರೂ ತೆರವು ಕಾರ್ಯ ಮಾತ್ರ ಮಾಡಿಲ್ಲ. ನಗರದಾದ್ಯಂತ ಬಹುತೇಕ ನಗರಸಭೆ ಜಾಗವನ್ನು ಫ‌ುಟ್ಪಾತ್‌ ವ್ಯಾಪಾರಿಗಳೇ ಆಕ್ರಮಿಸಿಕೊಂಡಿದ್ದು, ಸುಗಮ ಸಂಚಾರಕ್ಕೆ ತೊಂದರೆಯೊಡ್ಡಿದ್ದಾರೆ. ಇದಕ್ಕೆ ಪೊಲೀಸ್‌ ಇಲಾಖೆಯೂ ಸಾಥ್‌ ನೀಡುತ್ತಿದೆ. ನಗರಸಭೆ, ಪೊಲೀಸ್‌ ಇಲಾಖೆ ಬೇಜವಾಬ್ದಾರಿ ತನ ದಿಂದಾಗಿ ಅಕ್ರಮವಾಗಿ ಫ‌ುಟ್ಪಾತ್‌ ವ್ಯಾಪಾರಕ್ಕೆ ಅನುವು ಮಾಡಿ ಕೊಟ್ಟು ಸಾರ್ವಜನಿಕರ ಹಿತಕ್ಕೆ ಎಳ್ಳುನೀರು ಬಿಟ್ಟಿದೆ. ಇನ್ನು ಪೊಲೀಸರು ಗೂಡಂಗಡಿ ಗಳಿಂದ ಮಾಮೂಲಿ ಪಡೆದು ಕಣ್ಮುಚ್ಚಿ ಕುಳಿತಿರುವುದು ಜಗಜ್ಜಾಹಿರವಾದ ವಿಷಯವಾಗಿದೆ.

ಜಿಲ್ಲಾಧಿಕಾರಿಗಳಿಗೆ ಒತ್ತಾಯ: ನಗರದ ಹೆದ್ದಾರಿ ಅಕ್ಕಪಕ್ಕದ ಫ‌ುಟ್ಪಾತ್‌ ಮಾತ್ರ ಒತ್ತುವರಿಯಾಗಿದೆ. ನಗರದ ಪ್ರಮುಖ ಟಿ.ಬಿ. ಸರ್ಕಲ್, ಹಾಸನ ಸರ್ಕಲ್, ಕೋಡಿ ಸರ್ಕಲ್, ಸಿಂಗ್ರಿ ನಂಜಪ್ಪ ಸರ್ಕಲ್ಗಳಲ್ಲಂತೂ ಜನರ ಹಾಗೂ ವಾಹನಗಳ ಓಡಾಟಕ್ಕೆ ಸ್ವಲ್ಪವೂ ಜಾಗ ಬಿಡದಂತೆ ರಸ್ತೆಗಳನ್ನೇ ಅತಿಕ್ರಮಿಸಿ ಪೆಟ್ಟಿಗೆ ಅಂಗಡಿ ಗಳವರು ವ್ಯಾಪಾರ-ವಹಿವಾಟು ನಡೆಸುತ್ತಿದ್ದು ಇದ ರಿಂದ ನಿತ್ಯ ಅಪಘಾತಗಳಾಗುತ್ತಿವೆ. ಇದು ನಗರ ಸಭೆ ಅಧಿಕಾರಿಗಳು ಹಾಗೂ ಪೊಲೀಸರ ಎದುರಿನಲ್ಲೇ ನಡೆಯುತ್ತಿದ್ದರೂ ಯಾವುದೇ ಕಠಿಣ ಕ್ರಮ ತೆಗದು ಕೊಳ್ಳದಿರುವುದರಿಂದ ಸಂಚಾರಕ್ಕೆ ತೊಂದರೆಯಾಗಿದೆ. ಸದ್ಯ ನಗರಸಭೆಗೆ ಜಿಲ್ಲಾಧಿಕಾರಿಗಳೇ ಆಡಳಿತಾಧಿಕಾರಿ ಆಗಿರುವುದರಿಂದ ತಿಪಟೂರು ನಗರದ ಒಳಗೆ ಹಾಗೂ ಪ್ರಮುಖ ಸರ್ಕಲ್ಗಳ ರಸ್ತೆಗಳ ಒತ್ತುವರಿ ಯನ್ನು ಖುದ್ದು ಪರಿಶೀಲಿಸಿ, ತೆರವುಗೊಳಿಸುವ ದಿಟ್ಟ ಕ್ರಮ ಜರುಗಿಸಬೇಕೆಂಬುದು ನಗರದ ಸಾರ್ವಜನಿಕರ ಒತ್ತಾಯವಾಗಿದೆ.

 

● ಬಿ. ರಂಗಸ್ವಾಮಿ, ತಿಪಟೂರು

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.