Kunigal ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ; ಇಬ್ಬರು ಆರೋಪಿಗಳ ಬಂಧನ
ಕೊಲೆಗೆ ಮುಳುವಾದ ಬೈಗುಳ....
Team Udayavani, May 31, 2024, 9:47 PM IST
ಕುಣಿಗಲ್ : ಕ್ಷುಲ್ಲಕ ಕಾರಣಕ್ಕಾಗಿ ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿಹಾಕಿ, ಕೊಲೆ ಗೈದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಹುಲಿಯೂರುದುರ್ಗ ಪೊಲೀಸರು ಯಶಸ್ವಿಯಾಗಿದ್ದಾರೆ.
ತಾಲೂಕಿನ ಕಸಬಾ ಹೋಬಳಿ ಬೂದಾನಹಳ್ಳಿ ಗ್ರಾಮದ ಪ್ರದೀಪ್‌ನ ಕೊಲೆ ಪ್ರಕರಣವನ್ನು ಭೇದಿಸಿದ ಹುಲಿಯೂರುದುರ್ಗ ಪೊಲೀಸರು ಈ ನಿಟ್ಟಿನಲ್ಲಿ ಲಕ್ಷ್ಮಿಪುರದ ಶಂಕರ್ (31), ಬೂದಾನಹಳ್ಳಿ ಗ್ರಾಮದ ನಾಗೇಶ್ (30) ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.
ಕಂಠಪೂರ್ತಿ ಕುಡಿಸಿ, ಟವಲ್‌ನಿಂದ ಕತ್ತು ಜೀರಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿ ತಲೆ ಮರಿಸಿಕೊಂಡಿದ್ದ ಇಬ್ಬರು ಆರೋಪಿಗಳ ಈಗ ಪೊಲೀಸರ ಅತಿಥಿಯಾಗಿದ್ದಾರೆ.
ಕೊಲೆಗೆ ಮುಳುವಾದ ಬೈಗುಳ : ಪ್ರದೀಪ್, ಶಂಕರ್ ಮತ್ತು ನಾಗೇಶ್ ಮೂವರು ಸ್ನೇಹಿತರಾಗಿದ್ದರು, ಅವರು ಆಗಿಂದಾಗ್ಗೆ, ಸೇರಿಕೊಂಡು ರಾತ್ರಿ ವೇಳೆಯಲ್ಲಿ ಮದ್ಯಪಾನ ಮಾಡುತ್ತಿದ್ದರು.ಆದರೆ, ಕುಡಿದ ಅಮಲಿನಲ್ಲಿ ಪ್ರದೀಪನು ಶಂಕರ್ ಮತ್ತು ನಾಗೇಶನಿಗೆ ಅವಾಚ್ಯವಾದ ಶಬ್ದಗಳಿಂದ ನಿಂದಿಸುತ್ತಿದ್ದ ಎನ್ನಲಾಗಿದೆ, ಇದರಿಂದ ಕುಪಿತಗೊಂಡ ಶಂಕರ್ ಮತ್ತು ನಾಗೇಶ್ ಪ್ರದೀಪನನ್ನು ಕೊಲೆ ಮಾಡಲೇ ಬೇಕೆಂದು ತೀರ್ಮಾನಿಸಿ, ಅದರಂತೆ ಮೇ 27 ಸೋಮವಾರ ಸುಮಾರು ರಾತ್ರಿ 8 ಗಂಟೆ ಸಮಯದಲ್ಲಿ ಲಕ್ಷ್ಮಿಪುರ ಅರಣ್ಯ ಪ್ರದೇಶದಲ್ಲಿ ಮದ್ಯಪಾನ ಮಾಡಿಸಲು ಕರೆದೊಯ್ದಿದ್ದರು. ಆದರೆ ಶಂಕರ್ ಮತ್ತು ನಾಗೇಶ್ ಮದ್ಯಪಾನ ಮಾಡುವ ರೀತಿಯಲ್ಲಿ ನಾಟಕವಾಡಿದರು. ಬದಲಾಗಿ ಪ್ರದೀಪನಿಗೆ ಕಂಠಪೂರ್ತಿ ಕುಡಿಸಿದ್ದಾರೆ. ಬಳಿಕ ಪ್ರದೀಪನ ಟವೆಲ್‌ನಿಂದಲೇ ಉಸಿರು ಗಟ್ಟಿಸಿ, ಕೊಲೆ ಮಾಡಿದ್ದಾರೆ. ಬಳಿಕ ಸತ್ತನೋ, ಇಲ್ಲವೋ ಎಂಬ ಅನುಮಾನದಲ್ಲಿ ಮತ್ತೆ ತಲೆ ಮೇಲೆ ಕಲ್ಲು ಎತ್ತಿಹಾಕಿದರು. ಮೃತಪಟ್ಟಿರುವುದನ್ನು ದೃಢ ಪಡಿಸಿಕೊಂಡ ಬಳಿಕ ಶವವನ್ನು ಲಕ್ಷ್ಮಿಪುರ ಅರಣ್ಯದಲ್ಲಿ ಬಿಟ್ಟು ಮನೆಗೆ ತೆರಳಿದ್ದರು.
ಪ್ರಕರಣ ದಾಖಲು : ಪ್ರಕರಣ ದಾಖಲಿಸಿಕೊಂಡ ಹುಲಿಯೂರುದುರ್ಗ ಪೊಲೀಸರು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ವಿ.ಅಶೋಕ್, ಡಿವೈಎಸ್‌ಪಿ ಓಂಪ್ರಕಾಶ್ ಮಾರ್ಗದರ್ಶನದಲ್ಲಿ, ಸಿಪಿಐ ಮಾದ್ಯನಾಯಕ್, ಪಿಎಸ್‌ಐ ಪ್ರಶಾಂತ್ ಅವರ ನೇತೃತ್ವದ ತಂಡ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.