Tumakuru ಕ್ಷೇತ್ರ ಅಭಿವೃದ್ಧಿ ಪಡಿಸುವುದೇ ನನ್ನ ಗುರಿ: ಕೇಂದ್ರ ಸಚಿವ ವಿ.ಸೋಮಣ್ಣ
ಎಲೆರಾಂಪುರ ಮತ್ತು ಸಿದ್ಧರಬೆಟ್ಟ ಮಠಕ್ಕೆ ಭೇಟಿ...
Team Udayavani, Jun 14, 2024, 8:11 PM IST
ಕೊರಟಗೆರೆ: ಮತದಾರ ಪ್ರಭುಗಳ ಆಶೀರ್ವಾದದಿಂದ ಲೋಕಾಸಭೆಯ ಸದಸ್ಯ ಮತ್ತು ಕೇಂದ್ರ ಸಚಿವನಾಗಿದ್ದೇನೆ.5 ವರ್ಷದ ಅವಧಿಯಲ್ಲಿ ತುಮಕೂರು ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವುದೇ ನನ್ನ ಪ್ರಮುಖ ಗುರಿ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು.
ತಾಲೂಕಿನ ಎಲೆರಾಂಪುರ ಮತ್ತು ಸಿದ್ಧರಬೆಟ್ಟ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ತುಮಕೂರು-ರಾಯದುರ್ಗ ಮಾರ್ಗದ ರೈಲ್ವೆ ಯೋಜನೆ ಕಾಮಗಾರಿಯ ಬಗ್ಗೆ ಕೇವಲ 15 ದಿನದಲ್ಲಿ ಸವಿಸ್ತಾರವಾಗಿ ತಿಳಿಸುತ್ತೇನೆ. ಇನ್ನು ಎರಡು ದಿನಗಳ ಕಾಲ ಕ್ಷೇತ್ರದಲ್ಲಿ ಪ್ರವಾಸ ಮಾಡಿ ನಂತರ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಎಚ್.ಡಿ ದೇವೇಗೌಡರವರ ಸೂಚನೆಯಂತೆ ದೂರ ದೃಷ್ಟಿಯನ್ನು ಇಟ್ಟುಕೊಂಡು ಕ್ಷೇತ್ರದ ಅಭಿವೃದ್ಧಿಯತ್ತ ಚರ್ಚೆ ಮಾಡುತ್ತೇನೆ ಎಂದರು.
ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ತುಮಕೂರು ಲೋಕಸಭಾ ಚುನಾವಣೆಯಲ್ಲಿ ನನಗೆ ಹೆಚ್ಚಿನ ಲೀಡ್ ಕೊಟ್ಟು ಸಂಸದನಾಗಿ ಆಯ್ಕೆಯಾಗಲು ಕಾರಣರಾಗಿದ್ದಾರೆ. ಹಾಗಾಗಿ ಈ ಭಾಗದ ಸಮಗ್ರ ಅಭಿವೃದ್ಧಿಯ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದರು.
ತುಮಕೂರು ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ಕೇಂದ್ರದ ನಾಯಕರುಗಳೊಂದಿಗೆ ಚರ್ಚಿಸಿ ಶೀಘ್ರವೇ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸುತ್ತೇನೆ. ಸಚಿವನಾದ ಮೇಲೆ ತುಮಕೂರಿಗೆ ಭೇಟಿ ನೀಡಿದ ಮೊದಲ ದಿನವೇ ಸಿದ್ದಗಂಗಾ ಮಠ, ಕೊರಟಗೆರೆಯ ಎಲೆರಾಂಪುರ ಸೇರಿದಂತೆ ಸಿದ್ಧರಬೆಟ್ಟ ಮಠದ ಶ್ರೀಗಳ ಆಶೀರ್ವಾದ ಪಡೆದಿದ್ದೇನೆ. ಮತದಾರರಿಗೆ, ಹಾಗೂ ಎನ್‌ಡಿಎ ಎಲ್ಲಾ ಮುಖಂಡರು, ಕಾರ್ಯಕರ್ತರಿಗೆ ಕೃತಜ್ಞತೆ ತಿಳಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಜಿ.ಎಸ್ ಬಸವರಾಜು,ಎಂಎಲ್‌ಸಿ ಚಿದಾನಂದಗೌಡ, ಮಾಜಿ ಶಾಸಕರಾದ ಅಂದನಪ್ಪ, ವೀರಭದ್ರಯ್ಯ, ಬಿಜೆಪಿ ಮುಖಂಡ ಅನಿಲ್‌ಕುಮಾರ್, ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ, ಬಿಜೆಪಿ ತಾ.ಅಧ್ಯಕ್ಷ ದರ್ಶನ್, ಜಿ.ಪಂ ಮಾಜಿ ಸದಸ್ಯ ಶಿವರಾಮಯ್ಯ, ಜೆಡಿಎಸ್ ಕಾರ್ಯಾಧ್ಯಕ್ಷ ನರಸಿಂಹರಾಜು, ಮುಖಂಡರಾದ ಕಾಮರಾಜು, ಸಿದ್ದಮಲ್ಲಪ್ಪ, ಎಲ್.ವಿ ಪ್ರಕಾಶ್, ರಂಗರಾಜು, ರುದ್ರೇಶ್, ಅರುಣ್, ದಾಸರಹಳ್ಳಿ ರಘು, ಶ್ರೀನಿವಾಸಮೂರ್ತಿ ಸೇರಿದಂತೆ ಇತರರು ಇದ್ದರು.
ಸೆಲ್ಪಿಗೆ ಮುಗಿಬಿದ್ದ ಅಭಿಮಾನಿಗಳು
ದೆಹಲಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ತುಮಕೂರಿಗೆ ಮೊದಲ ಭೇಟಿಯ ಸಂದರ್ಭದಲ್ಲಿ ಸಿದ್ಧಗಂಗಾ ಮಠಕ್ಕೆ, ಕೊರಟಗೆರೆ ತಾಲೂಕಿನ ಸಿದ್ಧರಬೆಟ್ಟ ಹಾಗೂ ಎಲೆರಾಂಪುರ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಳಿಕ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮುಖಂಡರು ಹೂ ಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸೋಮಣ್ಣ ಅವರ ಅಭಿಮಾನಿಗಳು ಸೆಲ್ಫಿಗೆ ಮುಗಿಬಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.