ಮೈಸೂರು ದಸರಾ; ತುಮಕೂರು ಜಿಲ್ಲೆಯ ಸ್ತಬ್ಧಚಿತ್ರ
Team Udayavani, Sep 30, 2022, 12:30 PM IST
ತುಮಕೂರು: ವಿಶ್ವ ಪ್ರಸಿದ್ಧ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಕಲ್ಪತರು ನಾಡಿನಲ್ಲಿ ಉದ್ಘಾಟನೆಗೆ ಸಿದ್ಧವಾಗಿರುವ ಎಚ್.ಎ.ಎಲ್. ಹೆಲಿಕ್ಯಾಪ್ಟರ್ ಘಟಕ ಮತ್ತು ಪ್ರಸಿದ್ದ ಪಾವಗಡ ಸೋಲಾರ್ ಪಾರ್ಕ್ ಸ್ತಬ್ಧಚಿತ್ರ ಜನರ ಗಮನ ಸೆಳೆಯಲಿವೆ.
ಕೋವಿಡ್-19 ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಮೈಸೂರು ದಸರಾ ಮಹೋತ್ಸವ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ.
ಅಕ್ಟೋಬರ್ 5 ರಂದು ಜರುಗಲಿರುವ ಜಂಬೂ ಸವಾರಿಗೆ ತುಮಕೂರು ಜಿಲ್ಲೆಯಿಂದ ಎರಡು ವಿಷಯಾಧಾರಿತ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ. ನಿಟ್ಟೂರಿನಲ್ಲಿ ಸ್ಥಾಪನೆಯಾಗಿ ಉದ್ಘಾಟನೆಗೆ ಸಿದ್ಧವಾಗಿರುವ ಹೆಚ್.ಎ.ಎಲ್. ಹೆಲಿಕ್ಯಾಪ್ಟರ್ ತಯಾರಿಕಾ ಘಟಕ ಮತ್ತು ಪಾವಗಡದ ವಿಶ್ವದ ಮೊದಲ ಬೃಹತ್ ಸೋಲಾರ್ ಪಾರ್ಕ್ ವಿಷಯವನ್ನು ಹೊಂದಿರುವ ಸ್ತಬ್ಧಚಿತ್ರ ಅಂದು ಪ್ರದರ್ಶನಗೊಳ್ಳಲಿದೆ.
ಸ್ತಬ್ಧಚಿತ್ರದ ವಿವರ:
ಹೆಚ್.ಎ.ಎಲ್. ಹೆಲಿಕ್ಯಾಪ್ಟರ್ ತಯಾರಿಕಾ ಘಟಕ: ಜಿಲ್ಲೆಯ ಗುಬ್ಬಿ ತಾಲ್ಲೂಕಿನ ನಿಟ್ಟೂರು ಬಿದರೆಹಳ್ಳ ಕಾವಲಿನಲ್ಲಿ 610 ಎಕರೆ ಜಾಗದಲ್ಲಿ ಸುಮಾರು 5 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಹೆಲಿಕ್ಯಾಪ್ಟರ್ ತಯಾರಿಕಾ ಘಟಕದಲ್ಲಿ ವಾರ್ಷಿಕ ಸೇನೆಗೆ ಬಳಸುವ 30 ಲಘು ವಿಮಾನಗಳು ತಯಾರಾಗಲಿವೆ. ಘಟಕದಿಂದ 2 ಸಾವಿರಕ್ಕೂ ಹೆಚ್ಚು ನೇರ ಉದ್ಯೋಗ ದೊರೆಯಲಿದೆ. ಈ ವರ್ಷ ಘಟಕ ಉದ್ಘಾಟನೆ ಆಗಲಿದೆ. ಅದಕ್ಕಾಗಿ ಸಿದ್ಧತೆಯೂ ನಡೆದಿದೆ.
ಪಾವಗಡ ಸೋಲಾರ್ ಪಾರ್ಕ್ ವಿಶ್ವದ ಮೊದಲ ಬೃಹತ್ ಸೋಲಾರ್ ವಿದ್ಯುತ್ ತಯಾರಿಕಾ ಘಟಕವಾಗಿದೆ. ಸುಮಾರು 12 ಸಾವಿರ ಕೋಟಿ ವೆಚ್ಚದಲ್ಲಿ 13 ಸಾವಿರ ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿದ್ದು 2050 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತದೆ.
ವಿಶೇಷ:
ಸುಮಾರು 27 ಅಡಿ ಉದ್ದ 12 ಅಡಿ ಅಗಲ ಹಾಗೂ 13 ಅಡಿ ಎತ್ತರದಲ್ಲಿ ಎರಡು ವಿಷಯಗಳ ಸ್ತಬ್ಧಚಿತ್ರ ನಿರ್ಮಾಣವಾಗುತ್ತಿದೆ. ಮುಂಭಾಗದಲ್ಲಿ ಹೆಲಿಕ್ಯಾಪ್ಟರ್ ಮತ್ತು ಘಟಕ, ಹಿಂಭಾಗದಲ್ಲಿ ಸೋಲಾರ್ ಪಾರ್ಕ್ ವಿನ್ಯಾಸಗೊಳಿಸಲಾಗಿದೆ.
ಸೆಪ್ಟೆಂಬರ್ 19 ರಿಂದ ಕಲಾವಿದ, ಪತ್ರಕರ್ತ ತಿಪಟೂರು ಕೃಷ್ಷನೇತೃತ್ವದಲ್ಲಿ ಸುಮಾರು 18 ಜನ ಕಲಾವಿದರು ಸೇರಿ ಕಲಾಕೃತಿ ತಂಡ ಸ್ತಬ್ಧಚಿತ್ರ ನಿರ್ಮಾಣದಲ್ಲಿ ತೊಡಗಿದ್ದಾರೆ.
2015 ರಿಂದ ತುಮಕೂರು ಜಿಲ್ಲೆ ಸ್ತಬ್ಧಚಿತ್ರ ನಿರ್ಮಾಣದಲ್ಲಿ ತೊಡಗಿರುವ ಕಲಾಕೃತಿ ತಂಡ ಮೂರು ಬಾರಿ ವಿಭಾಗ ಮಟ್ಟದ ಪ್ರಶಸ್ತಿ ಪಡೆದು, ಜಿಲ್ಲೆಗೆ ಕೀರ್ತಿ ತಂದಿರುವುದು ವಿಶೇಷ.
ಅರಳುಗುಪ್ಪೆ ಚನ್ನಕೇಶವ ದೇವಾಲಯ, ಎಡೆಯೂರು ಸಿದ್ದಲಿಂಗೇಶ್ವರ, ಸಿದ್ದಗಂಗ ಶ್ರೀ ಶಿವಕುಮಾರ ಸ್ವಾಮಿಗಳ ಸ್ತಬ್ಧಚಿತ್ರ ಜನಮನ್ನಣೆ ಗಳಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.