ನಾಡ ಪ್ರಭು ಕೆಂಪೇಗೌಡರು ಪ್ರಪಂಚಕ್ಕೆ ಮಾದರಿ: ಡಾ.ಜಿ.ಪರಮೇಶ್ವರ್


Team Udayavani, Sep 10, 2022, 7:27 PM IST

1–ddsd

ಕೊರಟಗೆರೆ: ನಾಡ ಪ್ರಭು ಕೆಂಪೇಗೌಡರು ಬೆಂಗಳೂರು ನಗರವನ್ನು ಅಚ್ಚುಕಟ್ಟಾಗಿ ಮತ್ತು ಮುಂದಾಲೋಚನೆಯಾಗಿ ನಿರ್ಮಾಣ ಮಾಡಿ ರಾಜ್ಯದ ಆರ್ಥಿಕತೆಗೆ ಶಕ್ತಿ ನೀಡಿ ದೇಶಕ್ಕೆ ಮತ್ತು ಪ್ರಪಂಚಕ್ಕೆ ಮಾದರಿಯಾಗಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್ ಹೇಳಿದರು.

ತಾಲೂಕಿನ ಕೋಳಾಲದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಹಾಗೂ ಡಾ. ಜಿ. ಪರಮೇಶ್ವರ್ ಅವರ ಹುಟ್ಟು ಹಬ್ಬ ಆಚರಣೆ ಕಾರ‍್ಯಕ್ರಮದಲ್ಲಿ ಮಾತನಾಡಿ ಕೆಂಪೇಗೌಡರು ಒಂದು ಜನಾಂಗಕ್ಕೆ ಸೀಮಿತವಾದ ವ್ಯಕ್ತಿಯಲ್ಲ. ಅವರ ಶ್ರಮ ಮತ್ತು ಕರ್ತವ್ಯ ನಿಷ್ಟೆಯಿಂದ ಎಲ್ಲಾ ವರ್ಗದ ಜನರು ನೆಮ್ಮದಿಯಾಗಿ ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲಿ ಜೀವನ ಕಟ್ಟಿಕೊಳ್ಳುವಂತಾಗಿದೆ. ಇಂದಿನ ತಂತ್ರಜ್ಞಾನವನ್ನು ಕೆಂಪೇಗೌಡರು ಅಂದೇ ಆಲೋಚಿಸಿ ಜನರ ವಾಣಿಜ್ಯ ವ್ಯವಹಾರಗಳಿಗೆ ವಿವಿಧ ಪೇಟೆಗಳನ್ನು ಕೃಷಿಕರಿಗೆ ಮಾರುಕಟ್ಟೆಗಳನ್ನು ಜನವಸತಿಕೇಂದ್ರಗಳನ್ನು ನಿರ್ಮಿಸಿದರು. ಇದರೊಂದಿಗೆ ಹಲವು ಕೆರೆಕಟ್ಟೆಗಳು, ನಾಲೆಗಳನ್ನು ಸೇರಿದಂತೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ನಿರ್ಮಾಣ ಮಾಡಿ, ಸದೃಢ ಬೆಂಗಳೂರನ್ನು ರಚಿಸಿದರು. ಅಂತಹ ಮಹಾನ್ ವ್ಯಕ್ತಿಯ ಶ್ರಮದಿಂದ ಬೆಂಗಳೂರಿನಲ್ಲಿ ಪ್ರಪಂಚದ ಎಲ್ಲಾ ಐಟಿ, ಬಿಟಿ ಕಂಪನಿಗಳು ವಿವಿಧ ವಾಣಿಜ್ಯ ಕಂಪನಿಗಳು ಬಂದು ರಾಜ್ಯಕ್ಕೆ ಆರ್ಥಿಕ ಶಕ್ತಿಯನ್ನು ನೀಡುತ್ತಿವೆ. ಬೆಂಗಳೂರಿನಲ್ಲಿ ಇಂದು ಸುಮಾರು 1.30 ಕೋಟಿ ಎಲ್ಲ ವರ್ಗ, ಭಾಷೆಯ ಜನರು ವಾಸಿಸುತ್ತಿದ್ದಾರೆ ಎಂದರು.

ದಿನಕ್ಕೆ 25 ಲಕ್ಷ ಜನ ಬಂದು ಹೋಗುತ್ತಿದ್ದಾರೆ. ಅವರಿಗೆಲ್ಲಾ ಬೆಂಗಳೂರು ಆಶ್ರಯ ನೀಡಿದ್ದು, ಇದಕ್ಕೆ ಮುಖ್ಯ ಕಾರಣ ಕೆಂಪೇಗೌಡ ಎಂದರು.
ಭಾರತವು ವಿಶ್ವದ ಆರ್ಥಿಕತೆಯಲ್ಲಿ ಬಲಿಷ್ಟತೆ ಹೊಂದಿ 4ನೇ ಸ್ಥಾನದತ್ತ ಇದೆ. ಭಾರತೀಯ ಸೇನೆ ವಿಶ್ವದ ಬಲಿಷ್ಟ ಸೇನೆಗಳಲ್ಲಿ ಒಂದಾಗಿದೆ. ಸ್ವಾತಂತ್ರ ನಂತರ ಕಡು ಬಡತನದಲ್ಲಿದ್ದು, ಮೂಲಭೂತ ಸೌಕರ್ಯಗಳಿಲ್ಲದೇ ಆರ್ಥಿಕತೆ, ಸಾಕ್ಷರತೆ, ನೀರಾವರಿ ಯೋಜನೆಗಳಿಲ್ಲದೇ ಸೊರಗುತ್ತಿದ್ದ ದೇಶವನ್ನು ಕಾಂಗ್ರೆಸ್ ಪಕ್ಷವು ಅಂತಹ ಸಂದರ್ಭದಲ್ಲಿ ಅಧಿಕಾರಕ್ಕೆ ಬಂದು ಬಹಳಷ್ಟು ಶ್ರಮವಹಿಸಿ ದೇಶವನ್ನು ಬಲಿಷ್ಟಗೊಳಿಸುವಲ್ಲಿ ಮುಖ್ಯ ಪಾತ್ರ ವಹಿಸಿದೆ. ದೇಶದ ಎಲ್ಲಾ ಧರ್ಮ, ಜಾತಿ ಜನರು ಒಟ್ಟು ಇರಬೇಕಾದರೆ ಕಾಂಗ್ರೆಸ್ ಪಕ್ಷದ ಜ್ಯಾತ್ಯಾತೀತ ತತ್ವ ಮುಖ್ಯ ಕಾರಣವಾಗಿದೆ. ಅಂತಹ ಪಕ್ಷವನ್ನು ಹಲವರು ಟೀಕಿಸುತ್ತಿದ್ದಾರೆ. ಆದರೆ ಜನರಿಗೆ ಕಾಂಗ್ರೆಸ್ ಪಕ್ಷದ ತ್ಯಾಗ, ಬಲಿದಾನ ತಿಳಿದಿದೆ ಎಂದರು.

ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ಕೆಂಪೇಗೌಡರ ಜಯಂತಿ ಆಚರಿಸುವುದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯವಾಗಿದೆ. ಕೆಂಪೇಗೌಡರು ನಾಡು ಕಂಡಂತಹ ಅಪರೂಪದ ಶ್ರಮ ಜೀವಿಯಾಗಿದ್ದಾರೆ. ಅವರ ಅಂದಿನ ಶ್ರಮದಿಂದ ರಾಜ್ಯದ ರಾಜಧಾನಿ ಬೃಹತ್ ಬೆಂಗಳೂರು ನಗರವಾಗಿ ಬೆಳೆದಿದೆ. ಜನರ ಸೇವೆಗಾಗಿ ಹಗಲಿರುಳು ಶ್ರಮ ವಹಿಸಿದ ಮಹಾನ್ ವ್ಯಕ್ತಿ ಕೆಂಪೇಗೌಡರಾಗಿದ್ದಾರೆ. ಅವರ ನೆನಪು ಸದಾ ಎಲ್ಲರಲ್ಲೂ ಇರಬೇಕಿದೆ ಎಂದರು. ಇಂದು ಕ್ಷೇತ್ರದ ಶಾಸಕ ಡಾ. ಜಿ. ಪರಮೇಶ್ವರ ಅವರ ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದು, ಡಾ. ಪರಮೇಶ್ವರ್ ಅವರು ಕ್ಷೇತ್ರದಲ್ಲಿ ಉತ್ತಮ ಕೆಲಸ ನಿರ್ವಹಿಸುತ್ತಿದ್ದು, ರಾಜ್ಯ ಕಂಡಂತಹ ಸಜ್ಜನ ರಾಜಕಾರಣಿಯಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಮುಖಂಡರಾದ ವಾಲೆ ಚಂದ್ರಯ್ಯ, ಎ.ಡಿ.ಬಲರಾಮಯ್ಯ, ಆರ್.ಎಸ್.ರಾಜಣ್ಣ, ಸುರೇಶ್, ವೆಂಕಟೇಶಮೂರ್ತಿ, ಕೆಂಪಣ್ಣ, ಪಂಚಾಕ್ಷರಯ್ಯ, ಬಿಎಂಸಿ ಚಂದ್ರು, ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಜಯಮ್ಮ, ಶೈಲಜಾ, ಕವಿತಾ, ಗ್ರಾ.ಪಂ. ಸದಸ್ಯರಾದ ಅಶ್ವತ್ಥ್, ಸುರೇಶ್, ದೇವರಾಜು, ಪಂಚಾಕ್ಷರಯ್ಯ, ಸತ್ಯಣ್ಣ, ಕೃಷ್ಣಪ್ಪ ಇತರರು ಇದ್ದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.