ಗಡಿಭಾಗದ ಶಾಲಾ ಅಭಿವೃದಿಗೆ ಜನಪ್ರತಿನಿಧಿಗಳ ನಿರ್ಲಕ್ಷ್ಯ
Team Udayavani, Dec 18, 2021, 2:49 PM IST
ಬರಗೂರು: ಗಡಿಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಉಳಿವಿಗಾಗಿ ಸರ್ಕಾರ ಗಡಿ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಅನುದಾನಗಳ ಭರವಸೆಗಳ ಪೂರವನ್ನೇ ಹರಿಸುತ್ತದೆ. ಆದರೆ, ಆಂಧ್ರ ಪ್ರದೇಶಮೂಲದ ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಬಯಸಿ ಕನ್ನಡ ಶಾಲೆಗಳಿಗೆ ಬಂದು ವಿದ್ಯಾಭ್ಯಾಸ ಮಾಡುತ್ತಿದ್ದರೂ, ಗಡಿಭಾಗಗಳ ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಬಗ್ಗೆ ಸರ್ಕಾರ ಕೈಚೆಲ್ಲಿ ಕೂತಿರುವುದು ನಿಜಕ್ಕೂ ವಿಪರ್ಯಾಸದ ಸಂಗತಿಯಾಗಿದೆ.
ಶಿರಾ ತಾಲೂಕಿನ ಹುಲಿಕುಂಟೆ ಹೋಬಳಿಯ ಗಡಿಗ್ರಾಮ ಹಾರೋಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 90 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿನ ಶಾಲೆ ಅಭಿವೃದ್ಧಿಯ ಬಗ್ಗೆ ಪೋಷಕರು,ಸ್ಥಳೀಯ ಗ್ರಾಮ ಪಂಚಾಯ್ತಿ ಸದಸ್ಯರು ಸೇರಿ ಹಲವರಿಗೆ ಶಾಲೆ ಅಭಿವೃದ್ಧಿ ಬಗ್ಗೆ ಹೆಚ್ಚು ಒಲವಿದ್ದರೂ, ಸರ್ಕಾರದ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಇಲ್ಲಿನ ಶಾಲೆಯ ಅಭಿವೃದ್ಧಿ ಕುಂಟಿತಗೊಂಡಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ತಂದಿದೆ.
6 ಕೊಠಡಿಗಳು ಶಿಥಿಲಾವಸ್ಥೆ: ಶಾಲೆಯ ಸಮಸ್ಯೆಯ ಬಗ್ಗೆ ಜನಪ್ರತಿನಿಧಿಗಳಲ್ಲಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಪೋಷಕರು. ಈ ಶಾಲೆಯಲ್ಲಿ 7 ಕೊಠಡಿಗಳಿದ್ದು ಇವುಗಳಲ್ಲಿ ಒಂದು ಹೊಸ ಕೊಠಡಿ ಇದೆ. 6 ಕೊಠಡಿಗಳು ಶಿಥಿಲಾವಸ್ಥೆಗೆ ತಲುಪಿದ್ದು, ವಿದ್ಯಾರ್ಥಿಗಳು ಕೊಠಡಿಗಳಲ್ಲಿ ಕೂತುಪಾಠ ಕೇಳಲು ಯೋಗ್ಯವಿಲ್ಲದಂತಿವೆ. ಶಿಥಿಲವಾದಕೊಠಡಿಗಳ ಮೇಲ್ಚಾವಣೆಯ ಕಾಂಕ್ರೀಟ್ ಸಿಮೆಂಟ್ ಉದುರುತ್ತಿದ್ದು, ಕಂಬಿಗಳು ತುಕ್ಕು ಹಿಡಿದು ಮೇಲ್ಚಾವಣೆ ಕುಸಿದು ಬೀಳುವ ಹಂತಕ್ಕೆ ಬಂದಿವೆ. ಈ ಶಾಲೆ ಆಂಧ್ರ ಗಡಿಭಾಗಕ್ಕೆ ಹೊಂದಿಕೊಂಡಿದ್ದು, ಆಂಧ್ರಪ್ರದೇಶ ಮೂಲದ ಅನೇಕ ಮಕ್ಕಳು ಕರ್ನಾಟಕ ರಾಜ್ಯದ ಕನ್ನಡ ಭಾಷೆಯ ಹಾರೋಗೆರೆ ಶಾಲೆಯನ್ನು ಬಯಸಿ ವಿದ್ಯಾಭ್ಯಾಸಕ್ಕೆ ಮುಂದಾಗುತ್ತಿದ್ದಾರೆ. ಸರ್ಕಾರ ಗಡಿ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಸರ್ಕಾರಿ ಶಾಲೆಗಳ ಹೆಚ್ಚಿನ ಅಭಿವೃದ್ಧಿಗೆ ಅನುದಾನ ಮೀಸಲಿಟ್ಟು ಗಡಿಭಾಗದ ಶಾಲೆಗಳನ್ನು ಅಭಿವೃದ್ಧಿ ಪಡಿಸಬಹುದಾಗಿದೆ.
ಪ್ರತಿಭಟನೆ ಎಚ್ಚರಿಕೆ: ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ ಎಂದು ಬೊಬ್ಬೆ ಇಡುವ ಸರ್ಕಾರದ ಜನಪ್ರತಿನಿಧಿಗಳು ಇಲ್ಲಿನ ಶಾಲೆಯ ಅವ್ಯವಸ್ಥೆಯ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಲೆ ಅವ್ಯವಸ್ಥೆ ಬಗ್ಗೆ ತುರ್ತು ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಮಕ್ಕಳೊಂದಿಗೆ ಪೋಷಕರೂ ಸೇರಿ ಶಾಲೆಗೆ ಬೀಗ ಜಡಿದು ಪ್ರತಿಭಟನೆ ಮಾಡಬೇಕಾ ಗುತ್ತೆ ಎಂದು ಪೋಷಕರು ಎಚ್ಚರಿಸಿದ್ದಾರೆ.
ಮರದಡಿಯಲ್ಲಿ ಕುಳಿತು ಮಕ್ಕಳಿಗೆ ಪಾಠ, ಪ್ರವಚನ : ಭಯ ಭೀತರಾಗಿರುವ ಶಿಕ್ಷಕರು ಮಕ್ಕಳನ್ನು ಶಾಲಾ ಹೊರಾಂಗಣದ ಮರದಡಿಯಲ್ಲಿ ಕೂರಿಸಿ ಪಾಠ ಹೇಳಿ ಕೊಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕ್ಷೇತ್ರದ ಶಾಸಕರು ಈಶಾಲೆಯ ದುಸ್ಥಿತಿಯ ಬಗ್ಗೆ ಗಮನಹರಿಸಿಒಂದು ಕಟ್ಟಡ ನಿರ್ಮಾಣ ಮಾಡಿಕೊಡುವಭರವಸೆ ಕೊಟ್ಟು 4 ತಿಂಗಳು ಕಳೆದಿದ್ದು,ಇದುವರೆಗೂ ಯಾವುದೇ ಕ್ರಮಕೈಗೊಳ್ಳದಿರುವುದು ಮಕ್ಕಳ ಪೋಷಕರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ.
-ವೀರಭದ್ರಸಾಮಿ, ಬರಗೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.